ಕೃಷಿ ಪತ್ತಿನ ಸಹಕಾರ ಸಂಘದ ಅವ್ಯವಹಾರ ತನಿಖೆಗೆ ಆಗ್ರಹ
Team Udayavani, Jan 24, 2020, 2:32 PM IST
ಪಿರಿಯಾಪಟ್ಟಣ: ತಾಲೂಕಿನ ದೊಡ್ಡ ಬ್ಯಾಲಾಳು ಪ್ರಾಥಮಿಕ ಕೃಷಿ ಪತ್ತಿನ ಸಹ ಕಾರ ಸಂಘದಲ್ಲಿ ನಡೆದಿರುವ ಅವ್ಯವಹಾರ ಸಂಬಂಧ ಸಂಘದ ಮುಖ್ಯಕಾರ್ಯದರ್ಶಿ ರಮೇಶ್ ಅವರನ್ನು ಅಮಾನತು ಮಾಡಿ ತನಿಖೆ ನಡೆಸಬೇಕು ಎಂದು ಸಂಘದ ಅಧ್ಯಕ್ಷ ಶಿವಣ್ಣ ಆಗ್ರಹಿಸಿದರು.
ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹ ಕಾರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, 2015ನೇ ಸಾಲಿನಲ್ಲಿ ಆಯ್ಕೆಯಾದ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಹಾಗೂ ಮುಖ್ಯಕಾರ್ಯದರ್ಶಿ ರಮೇಶ್ 23 ಲಕ್ಷ ರೂ. ಅವ್ಯವಹಾರ ನಡೆಸಿದ್ದರು. ಈ ಸಂಬಂಧ ಸಿಇಒ ರಮೇಶ್‌ರನ್ನು ಅಮಾನತುಪಡಿಸಲಾಗಿತ್ತು. 15ದಿನ ಗಳ ನಂತರ ಅಂದಿನ ಅಧ್ಯಕ್ಷರಾಗಿದ್ದ ರಮೇಶ್ ಅವರು ಇನ್ನು ಮುಂದೆ ಸಂಘ ದಲ್ಲಿ ಏನೇ ಅವ್ಯವಹಾರ ನಡೆದರೂ ನಾನೇ ನೇರ ಹೊಣೆಗಾರನಾಗಿರುತ್ತೇನೆ ಎಂದು ಸಭೆಯಲ್ಲಿ ನಡಾವಳಿ ಮಾಡಿ ಸಹಿ ಹಾಕಿ ಮತ್ತೆ ಸಿಇಒ ರಮೇಶ್‌ರನ್ನು ಕೆಲಸಕ್ಕೆ ತೆಗೆದು ಕೊಂಡಿದ್ದರು.
ಹಿಂದಿನ ತಪ್ಪು ತಿದ್ದಿಕೊಳ್ಳದ ಸಿಇಒ ರಮೇಶ್ ಫಲಾನುಭವಿಗಳ ಹಣ ಲಪಟಾಯಿಸಿದ್ದಾರೆ. ಇದರಲ್ಲಿ ಮಾಜಿ ಅಧ್ಯಕ್ಷರಾದ ರಮೇಶ್ ಹಾಗೂ ಕುಭೇರ ಭಾಗಿಯಾಗಿದ್ದಾರೆ. ಈ ಕುರಿತು ಸಹ ಕಾರ ಸಂಘಗಳ ನಿಬಂಧಕರು ಹಾಗೂ ಲೆಕ್ಕಾಧಿ ಕಾರಿಗಳು ತನಿಖೆ ನಡೆಸಿದಾಗ ಇದುವರೆಗೆ ಸಂಘದಲ್ಲಿ 80 ಲಕ್ಷ ರೂ. ದುರುಪಯೋಗ ವಾಗಿರುವ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಅವರನ್ನು ಹೈಕೋರ್ಟ್ ಇವರನ್ನು ಅನರ್ಹ ಗೊಳಿಸಿತು. ನಂತರ ನಡೆದ ಚುನಾವಣೆ ಯಲ್ಲಿ ತಾವು ಆಯ್ಕೆಯಾಗಿದ್ದು, ಈ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸ ದರು. ಗೋಷ್ಠಿಯಲ್ಲಿ ಸಂಘದ
ಉಪಾಧ್ಯಕ್ಷ ಆರ್.ಬಿ.ಮಹೇಂದ್ರ, ನಿರ್ದೆಶಕರಾದ ಅಪ್ಪಾಜೀ ಗೌಡ, ಬಸವ ರಾಜೇ ಅರಸ್, ರುಕ್ಮಿಣಿ, ಕನಕಮ್ಮ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.