ಸವಿತಾ ಸಮಾಜದ ಏಳಿಗೆಗೆ ಮೀಸಲಾತಿ ಅಗತ್ಯ
Team Udayavani, Jun 13, 2022, 5:07 PM IST
ಕೆ.ಆರ್.ನಗರ: ಸವಿತಾ ಸಮಾಜದ ಜನತೆ ಆರ್ಥಿಕ, ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದು, ಅವರ ಏಳಿಗೆಗೆ ಸರ್ಕಾರ ಪ್ರವರ್ಗ-2ಎ ಅಡಿಯಲ್ಲಿ ಅಗತ್ಯ ಮೀಸಲಾತಿ ನೀಡಬೇಕು ಎಂದು ಚಿತ್ರನಟ ಡಾ.ಎಂ.ಎಸ್.ಮುತ್ತುರಾಜು ಹೇಳಿದರು.
ಪಟ್ಟಣದ ಆಂಜನೇಯ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀರಾಮ ದೇವಾ ಲಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಮಗೆ ಸಾಂವಿಧಾನಿಕವಾಗಿ ದೊರಕಬೇಕಿರುವ ಮೀಸಲಾತಿ ಮತ್ತು ಸವಲತ್ತುಗಳನ್ನು ಪಡೆಯಲು ಅಗತ್ಯವಿದ್ದಲ್ಲಿ ಹೋರಾಟಕ್ಕೂ ಸಿದ್ಧರಾಗಬೇಕು ಎಂದರು. ಹೋರಾಟದ ವಿಚಾರದಲ್ಲಿ ಸಮಾಜದ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ನಾವು ಗುರಿ ತಲುಪಲು ಸಾಧ್ಯವಾಗಲಿದ್ದು, ನಾನು ಸದಾ ಹೋರಾಟಕ್ಕೆ ಸಿದ್ಧನಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಿ ನಮ್ಮ ಪಾಲಿನ ಮೀಸಲಾತಿ ಪಡೆಯಲು ಮುಂದಾಗಬೇಕು ಎಂದು ಕರೆ ನೀಡಿದರು.
ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಡಿ.ರವಿಶಂಕರ್ ಮಾತನಾಡಿ, ಸವಿತಾ ಸಮಾಜದ ವತಿಯಿಂದ ಸಮುದಾ ಯ ಭವನ ಮತ್ತು ದೇವಾಲಯ ನಿರ್ಮಾಣ ಮಾಡಿರುವುದು ಶ್ಲಾಘನೀಯವಾದ ಕಾರ್ಯವಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಇನ್ನೂ ಹೆಚ್ಚಿನ ಅನುದಾನ ಕೊಡಿಸಲಾಗುವುದು ಎಂದು ಭರವಸೆ ನೀಡಿದರು.
ಖ್ಯಾತ ಮೂಳೆತಜ್ಞ ಡಾ.ಮೆಹಬೂಬ್‌ಖಾನ್ ಮಾತನಾಡಿ, ಸಮುದಾಯದ ಅಭಿವೃದ್ಧಿಯಾಗಬೇಕಾದರೆ ಪ್ರತಿಯೊಬ್ಬರೂ ಪರಸ್ಪರ ಸಹಕಾರ ಮನೋಭಾವನೆ ಯಿಂದ ಕೆಲಸ ಮಾಡಬೇಕು. ಆದ್ದರಿಂದ ನಿಮ್ಮ ಹೋರಾಟಕ್ಕೆ ನಾನು ಸದಾ ಬೆಂಬಲ ನೀಡುತ್ತೇನೆ. ಆ ನಿಟ್ಟಿನಲ್ಲಿ ಸವಿತಾ ಸಮಾಜದ ಜನತೆ ಕಾರ್ಯೋನ್ಮುಖ ರಾಗಬೇಕು ಎಂದರು.ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ದಶೆಟ್ಟಿ, ಪುರಸಭೆ ಸದಸ್ಯರಾದ ಮಂಜುಳಚಿಕ್ಕವೀರು, ವೀಣಾವೃಷಭೇಂದ್ರ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್, ಜಿಲ್ಲಾ ಸವಿತಾ ಸಮಾಜ ಸಂಘದ ಕಾರ್ಯಾಧ್ಯಕ್ಷ ವಿ.ಸುರೇಶ್, ಮುಖಂಡರಾದ ಕೆ.ವಿ.ಅರುಣ್‌ಕುಮಾರ್, ತಿಮ್ಮಶೆಟ್ಟಿ, ಪ್ರಶಾಂತ್, ಮಾದಣ್ಣ, ರಾಜಪ್ಪ, ಮಣಿಕಂಠ, ಮಹದೇವ, ಕುಮಾರ್, ಮಂಜುನಾಥ್, ರಾಜೇಶ್, ಅಶೋಕ್, ವೃಷಭೇಂದ್ರ, ಸತೀಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.