ಮಳೆಗೆ ಮೈದುಂಬಿಕೊಳ್ಳುತ್ತಿವೆ ಜಲಾಶಯಗಳು

Team Udayavani, Jul 21, 2017, 11:35 AM IST

mys5.jpg

ಮೈಸೂರು: ಪುನರ್ವಸು ಮಳೆ ಉತ್ತಮವಾಗಿ ಸುರಿಯುತ್ತಿರುವುದರಿಂದ ಕಾವೇರಿ ಕೊಳ್ಳದ ಜಲಾಶಯಗಳು ಮೈದುಂಬಿಕೊಳ್ಳುತ್ತಿದ್ದು, ಸತತ ಎರಡು ವರ್ಷಗಳ ಭೀಕರ ಬರಗಾಲದಿಂದ ಕಂಗೆಟ್ಟಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಬರುವ ಕೊಡಗು, ಹಾಸನ, ಮೈಸೂರು, ಮಂಡ್ಯ ಹಾಗೂ ಚಾಮರಾಜ ನಗರ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಇದರ ಪರಿಣಾಮ ಈ ಭಾಗದ ಪ್ರಮುಖ ಜಲಾಶಯಗಳಾದ ಕೆಆರ್‌ಎಸ್‌, ಹೇಮಾವತಿ, ಹಾರಂಗಿ ಜಲಾಶಯಗಳಿಗೆ ಒಳ ಹರಿವು ಹೆಚ್ಚಳವಾಗಿದೆ. ಅತ್ತ ಕೇರಳದ ವೈನಾಡು ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿರುವುದರಿಂದ ಎಚ್‌.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಕೂಡ ಒಳ ಹರಿವು ಕಳೆದ ಮೂರು ದಿನಗಳಿಂದ ಹೆಚ್ಚಳವಾಗಿದೆ.

ಕಾವೇರಿ ಕೊಳ್ಳದ ಪ್ರಮುಖ ಜಲಾಶಯವಾದ ಕೃಷ್ಣರಾಜ ಸಾಗರ ಅಣೆಕಟ್ಟೆ 124.80 ಅಡಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು, ಸಂಪೂರ್ಣ ಭರ್ತಿಯಾದರೆ 45.05 ಟಿಎಂಸಿ ನೀರು ಸಂಗ್ರಹವಾಗಲಿದೆ. ಗುರುವಾರ ಸಂಜೆ 6 ಗಂಟೆಯ ಮಾಪನದ ಪ್ರಕಾರ ಜಲಾಶಯಕ್ಕೆ 8059 ಕ್ಯೂಸೆಕ್‌ ಒಳ ಹರಿವು ಬರುತ್ತಿದ್ದು, 1620 ನೀರನ್ನು ನದಿಗೆ ಬಿಡಲಾಗುತ್ತಿದೆ.

ಒಳ ಹರಿವು ಹೆಚ್ಚಳ: ಕಳೆದ ಜು.19ರಂದು ಜಲಾಶಯದಲ್ಲಿ 97.80 ಅಡಿ ನೀರು ಸಂಗ್ರಹವಾಗಿದ್ದರೆ, ಈ ವರ್ಷ ಗುರುವಾರ ಸಂಜೆ ವೇಳೆಗೆ 79.55 ಅಡಿ ನೀರು ಸಂಗ್ರಹವಾಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಹಾರಂಗಿ ಜಲಾಶಯದ ಗರಿಷ್ಟ ಮಟ್ಟ 2859.00 ಅಡಿ ಇದ್ದು, ಗುರುವಾರ ಸಂಜೆ ವೇಳೆಗೆ 2851.69 ಅಡಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 14000 ಕ್ಯೂಸೆಕ್‌ ಒಳ ಹರಿವು ಬರುತ್ತಿದ್ದು, ಸದ್ಯ ಜಲಾಶಯದಿಂದ ಹೊರಗೆ ನೀರು ಬಿಡಲಾಗುತ್ತಿಲ್ಲ.

2876.93 ಅಡಿ ನೀರು ಸಂಗ್ರಹ: ಹಾಸನ ತಾಲೂಕು ಗೊರುರು ಗ್ರಾಮದಲ್ಲಿ ಹೇಮಾವತಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಹೇಮಾವತಿ ಜಲಾಶಯಕ್ಕೆ 5441 ಕ್ಯೂಸೆಕ್‌ ಒಳ ಹರಿವು ಬರುತ್ತಿದ್ದು, 150 ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ 2895.79 ಅಡಿ ನೀರು ಸಂಗ್ರಹವಾಗಿದ್ದ ಈ ಜಲಾಶಯದಲ್ಲಿ ಈ ವರ್ಷ 2876.93 ಅಡಿ ನೀರು ಸಂಗ್ರಹವಾಗಿದೆ.

ಕಬಿನಿಗೆ ಒಳ ಹರಿವು: ಇನ್ನು ಕಾವೇರಿ ಕಣಿವೆಯ ಜಲಾಶಯಗಳಪೈಕಿ ಮೊದಲು ತುಂಬುವ ಜಲಾಶಯ ಎಂಬ ಹೆಗ್ಗಳಿಕೆ ಹೊಂದಿರುವ ಎಚ್‌.ಡಿ.ಕೋಟೆ ತಾಲೂಕು ಕಬಿನಿ ಜಲಾಶಯಕ್ಕೆ ಕೇರಳದ ವೈನಾಡು ಪ್ರದೇಶದಲ್ಲಿ ಉತ್ತಮವಾಗಿರುವುದರಿಂದ ಒಳ ಹರಿವು ಹೆಚ್ಚಳವಾಗಿದ್ದು, ಮೈದುಂಬಿ ಕೊಳ್ಳುತ್ತಿದೆ. 2284.00 ಅಡಿ ಗರಿಷ್ಟ ನೀರು ಸಂಗ್ರಹಣಾ ಸಾಮರ್ಥ್ಯದ ಕಬಿನಿ ಜಲಾಶಯಕ್ಕೆ ಗುರುವಾರ ಸಂಜೆಯ ಮಾಪನದ ಪ್ರಕಾರ 14000 ಕ್ಯೂಸೆಕ್‌ ಒಳಹರಿವು ಬರುತ್ತಿದ್ದು, ಜಲಾಶಯದ ಮಟ್ಟ 2260.04 ಅಡಿಗೆ ಏರಿಕೆಯಾಗಿದ್ದು, 2000 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ.

ಎರಡು ದಿನಗಳಿಂದ ಉತ್ತಮ ಮಳೆ: ಕಳೆದ ವರ್ಷ ಇದೇ ಅವಧಿಯಲ್ಲಿನ ಜಲಾಶಯಗಳ ನೀರಿನ ಮಟ್ಟ ಈ ವರ್ಷಕ್ಕಿಂತಲೂ ಉತ್ತಮವಾಗಿದ್ದರೂ ಜುಲೈ ನಂತರ ಮಳೆ ಕೈಕೊಟ್ಟಿದ್ದರಿಂದ ಈ ಭಾಗದ ಯಾವುದೇ ಜಲಾಶಯಗಳೂ ತುಂಬದೇ ಕೃಷಿ ಚಟುವಟಿಕೆಗೆ ತೊಂದರೆಯಾಗಿದ್ದು ಮಾತ್ರವಲ್ಲದೆ, ಜನ-ಜಾನುವಾರುಗಳ ಕುಡಿಯುವ ನೀರಿಗೂ ತೊಂದರೆ ಉಂಟಾಗಿತ್ತು.

ಈ ವರ್ಷ ಪೂರ್ವ ಮುಂಗಾರು ಉತ್ತಮವಾಗಿ ಸುರಿದ ಪರಿಣಾಮ ಬಿತ್ತನೆ ಮಾಡಿದ್ದ ರೈತರು ನಂತರದ ದಿನಗಳಲ್ಲಿ ಮುಂಗಾರು ಕೈಕೊಟ್ಟಿದ್ದರಿಂದ ದಿಕ್ಕು ಕಾಣದಂತಾಗಿತ್ತು. ಆದರೆ, ಕಳೆದ ಎರಡು ದಿನಗಳಿಂದ ಪುನರ್ವಸು ಮಳೆ ಉತ್ತಮವಾಗಿ ಸುರಿಯುತ್ತಿದೆ.

ಮುಂದಿನವಾರ ಜಲಾಶಯಗಳು ಭರ್ತಿ
ಕಾವೇರಿ ಕಣಿವೆಯ ನಾಲ್ಕು ಪ್ರಮುಖ ಜಲಾಶಯಗಳು ಮಾತ್ರವಲ್ಲದೆ, ನುಗು, ತಾರಕ, ಗುಂಡಾಲ್‌, ವಾಟೆಹೊಳೆ, ಮಾರ್ಕೋನಹಳ್ಳಿ, ಮಂಚನಬೆಲೆ, ಕಣ್ಣ ಮತ್ತು ಭೈರಮಂಗಲ ಜಲಾಶಯಗಳು ಸೇರಿದಂತೆ ಸಣ್ಣಪುಟ್ಟ ಜಲಾಶಯಗಳೂ ಮೈದುಂಬಿಕೊಳ್ಳುತ್ತಿದ್ದು, ಈ ವರ್ಷವೂ ಮುಂಗಾರು ಕೈಕೊಟ್ಟು ಬರಗಾಲ ಆವರಿಸಲಿದೆ ಎಂಬ ಮಾತುಗಳಿಗೆ ವಿರಾಮ ಹೇಳಿ, ಆಶಾದಾಯಕ ವಾತಾವರಣ ನಿರ್ಮಾಣವಾಗುತ್ತಲಿದೆ. ಜಲಾಶಯಗಳಿಗೆ ಇದೇ ರೀತಿ ಒಳ ಹರಿವು ಬಂದಲ್ಲಿ ಮುಂದಿನ ಒಂದು ವಾರದಲ್ಲಿ ಎಲ್ಲ ಜಲಾಶಯಗಳೂ ಭರ್ತಿಯಾಗಲಿವೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.