ರಾಜ ಕುಟುಂಬಕ್ಕೆ ಕೊಡಬೇಕಾದ ಮರ್ಯಾದೆ ಕೊಟ್ಟಿದೆ, ಈಗ ವಿವಾದ ಬೇಡ; ಪ್ರತಾಪ್ ಸಿಂಹ
Team Udayavani, Feb 13, 2023, 1:25 PM IST
ಮೈಸೂರು: ರಾಷ್ಟ್ರೀಯ ಹೆದ್ದಾರಿಗೆ ವ್ಯಕ್ತಿಗಳ ಹೆಸರಿಡುವ ಪದ್ಧತಿಯಿಲ್ಲ. ಕರ್ನಾಟಕದಲ್ಲಿ ಜಿಲ್ಲೆಗಳಿಗೂ ಹೆಸರು ಇಡುವ ಪದ್ಧತಿಯಿಲ್ಲ. ವ್ಯಕ್ತಿಗಳ ಹೆಸರು ಇಡಿ ಎಂದು ಸಲಹೆ ಕೊಡುವವರು ಇದನ್ನು ತಿಳಿದು ಮಾತಾಡಲಿ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಿಲ್ಲೆಗಳ ಜನರು ಭಕ್ತಿಯಿಂದ ನೋಡುವುದು ಕಾವೇರಿ ತಾಯಿಯನ್ನು. ಕಾವೇರಿ ನದಿಯ ಬಗ್ಗೆ ಈ ಭಾಗದ ಜನರಲ್ಲಿ ಪೂಜ್ಯ ಭಾವನೆ ಇದೆ. ಮಗ ದೊಡ್ಡವನಾ ತಾಯಿ ದೊಡ್ಡವರೆಂಬ ರೀತಿ ಚರ್ಚೆ ಬೇಡ. ತಾಯಿಯೆ ದೊಡ್ಡವಳು. ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಟ್ಟಿದ್ದೇವೆ. ರೈಲು ಗಳಿಗೆ ಒಡೆಯರ್ ಹೆಸರು ಇಟ್ಟಿದ್ದೇವೆ. ರಾಜರ ಕುಟುಂಬಕ್ಕೆ ಕೊಡಬೇಕಾದ ಗೌರವ ಎಲ್ಲವನ್ನೂ ನಾವು ನೀಡಿದ್ದೇವೆ. ಈಗ ರಸ್ತೆಯ ನಾಮಕರಣ ವಿಚಾರದಲ್ಲಿ ಅನಗತ್ಯ ವಿವಾದ ಬೇಡ. ಕಾವೇರಿ ಈ ನಾಡಿನ ಜೀವ ನದಿ. ಈ ಹೆಸರಿನ ವಿಚಾರದಲ್ಲಿ ವಿವಾದ ಮಾಡಬೇಡಿ ಎಂದರು.
ಮೈಸೂರು – ಬೆಂಗಳೂರು ಹೈವೇ ಟೋಲ್ ನಿಗದಿ ವಿಚಾರವಾಗಿ ಮಾತನಾಡಿದ ಅವರು, ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಅಂದಾಜಿನ ಟೋಲ್ ಫ್ಹೀಜ್ ಪಟ್ಟಿ. ನನ್ನ ಪ್ರಕಾರ ಎರಡು ಕಡೆ ಸೇರಿ ಬೆಂಗಳೂರಿನಿಂದ ಮೈಸೂರಿಗೆ 250 ರೂ. ಟೋಲ್ ನಿಗದಿಯಾಗಬಹುದು. ಫ್ಲೈ ಓವರ್ ಗಳು ಬಂದಾಗ ಸಾಮಾನ್ಯವಾಗಿ ಟೋಲ್ ದರ ಕೊಂಚ ಹೆಚ್ಚಾಗುತ್ತದೆ. ಈ ರಸ್ತೆಯಲ್ಲೂ ಫ್ಲೈ ಓವರ್ ಗಳು ಇರುವ ಕಾರಣ 250 ರೂಪಾಯಿ ಟೋಲ್ ನಿಗದಿ ಆಗಬಹುದು ಎಂದರು.
ಇದನ್ನೂ ಓದಿ:ʼಜೈಲರ್ʼ ಶೂಟ್ ಗಾಗಿ ಕಡಲ ನಗರಿ ಮಂಗಳೂರಿಗೆ ಬಂದಿಳಿದ ಸೂಪರ್ ಸ್ಟಾರ್ ರಜಿನಿಕಾಂತ್
ಬೆಂಗಳೂರು – ಮೈಸೂರು ನಡುವಿನ ಹೈವೆಯಲ್ಲಿ ಚನ್ನಪಟ್ಟಣದ ಬಳಿ 30 ಎಕರೆಯಲ್ಲಿ ಐ ಲ್ಯಾಂಡ್ ರೂಪದಲ್ಲಿ ರೆಸ್ಟ್ ಏರಿಯಾ ನಿರ್ಮಾಣ ಮಾಡುತ್ತೇವೆ. ಎಲ್ಲಾ ಬಗೆಯ ಹೋಟೆಲ್ ಅಲ್ಲಿ ಇರುತ್ತದೆ. ಆರು ತಿಂಗಳಲ್ಲಿ ಈ ರೆಸ್ಟ್ ಏರಿಯಾ ನಿರ್ಮಾಣವಾಗುತ್ತದೆ
ಬಹುತೇಕ ಪೂರ್ಣವಾಗುವ ಸ್ಥಿತಿಯಲ್ಲಿದೆ. ಮಾರ್ಚ್ ಎರಡು ಅಥವಾ ಮೂರನೇ ವಾರದಲ್ಲಿ ರಸ್ತೆ ಲೋಕಾರ್ಪಣೆವಾಗಲಿದೆ. ಬೆಂಗಳೂರು – ಮೈಸೂರು ಹೈವೇ ಲೋಕಾರ್ಪಣೆ ವೇಳೆ ಪ್ರಧಾನಿ ಮಂತ್ರಿಯವರು ಕುಶಾಲನಗರ – ಮೈಸೂರು ನಡುವಿನ ಹೆದ್ದಾರಿಗೆ ಶಂಕು ಸ್ಥಾಪನೆ ನೆರವೇರಿಸುವರು 3,500 ಕೋಟಿ ರೂಪಾಯಿ ವೆಚ್ಚದಲ್ಲಿ 115 ಕಿ.ಮೀ. ಹೈವೇ ನಿರ್ಮಾಣ ಶಂಕು ಸ್ಥಾಪನೆಯಾದ 24 ತಿಂಗಳಲ್ಲಿ ರಸ್ತೆ ಕಾಮಗಾರಿ ಪೂರ್ಣವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.