ವಿದ್ಯೆ ಕಲಿಸುವ ಶಿಕ್ಷಕರನ್ನು ಗೌರವಿಸಿ
Team Udayavani, Sep 16, 2018, 11:17 AM IST
ತಿ.ನರಸೀಪುರ: ದೇಶದ ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಸಾಕ್ಷರತೆ ಪ್ರಮುಖ ಪಾತ್ರ ವಹಿಸಲಿದ್ದು, ಸುಶಿಕ್ಷಿತ ಸಮಾಜವನ್ನು ಸೃಷ್ಟಿಸಲು ಅಕ್ಷರ ಕಲಿಸುವ ಶಿಕ್ಷಕರನ್ನು ಪ್ರತಿಯೊಬ್ಬರೂ ಗೌರಸಬೇಕು ಎಂದು ರೋಟರಿ ಅಧ್ಯಕ್ಷ ಎನ್.ಎಂ.ರಾಮಚಂದ್ರ ಹೇಳಿದರು.
ತಾಲೂಕಿನ ಬನ್ನೂರು ಪಟ್ಟಣದ ರೋಟರಿ ಶಾಲಾ ಆವರಣದಲ್ಲಿ ನಡೆದ ರಾಷ್ಟ್ರೀಯ ಸಾಕ್ಷರತಾ ಹಾಗೂ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಅವರು, ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿರುವುದರಿಂದ ಅಕ್ಷರದ ಅರಿವು ಮೂಲಕ ಅನಕ್ಷರತೆಯನ್ನು ನಿವಾರಿಸಬೇಕು ಎಂದು ಹೇಳಿದರು.
ರೋಟರಿ ಸಹಾಯಕ ಗೌರ್ನರ್ ಬಿ.ಎನ್.ಸುರೇಶ ಮಾತನಾಡಿ, ಬನ್ನೂರು ರೋಟರಿ ಸಂಸ್ಥೆ ನಿರಂತರವಾಗಿ ಸಮಾಜಮುಖೀಯಾಗಿ ಕಾರ್ಯನಿರ್ವಸುತ್ತಿದೆ. ಸ್ವತ್ಛ ಭಾರತ ಅಭಿಯಾನ ಸೇರಿದಂತೆ ಆರೋಗ್ಯ ತಪಾಸಣೆ ಶಿಬಿರ, ವಿಶೇಷ ವಿಕಲಚೇತನರಿಗೆ ನೆರವು ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ವೆಂಕಟೇಶ್‌ಮೂರ್ತಿ, ನಿವೃತ್ತ ಶಿಕ್ಷಕರಾದ ಶಾಂತಮ್ಮ ಹಾಗೂ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ರೋಟರಿ ಕಾರ್ಯದರ್ಶಿ ಕೃಷ್ಣೇಗೌಡ, ಉಪಾಧ್ಯಕ್ಷ ಮಹೇಂದ್ರಸಿಂಗ್, ಮಾಜಿ ಅಧ್ಯಕ್ಷ ಪಿ.ಪ್ರಭಾಕರ್, ಮಾಣಿಕ್‌ಚಂದ್, ಮುಖಂಡರಾದ ವೆಂಕಟೇಶ್‌ಪ್ರಸಾದ್, ರಾಜೇಂದ್ರ, ಪ್ರಸನ್ನ, ರಾಜು ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.