ಉಪನ್ಯಾಸಕರು ಜೀನ್ಸ್, ಟೀಶರ್ಟ್ ಧರಿಸದಂತೆ ಹೇರಿದ್ದ ಆದೇಶ ವಾಪಸ್
Team Udayavani, Nov 8, 2021, 3:17 PM IST
ಮೈಸೂರು: ಪದವಿ ಪೂರ್ವ ಕಾಲೇಜುಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಿಬ್ಬಂದಿ ಜೀನ್ಸ್ ಪ್ಯಾಂಟ್, ಟೀಶರ್ಟ್ ಧರಿಸದಂತೆ ನಿರ್ಬಂಧ ಹೇರಿ ಆದೇಶ ಹೊರಡಿ ಸಿದ್ದ ಡಿಡಿಪಿಯು, ವಸ್ತ್ರಸಂಹಿತೆ ವಿಷಯ ವಿವಾದವಾಗುತ್ತಿದ್ದಂತೆ ಎಚ್ಚೆತ್ತು ಕೊಂಡು 24 ಗಂಟೆಯಲ್ಲೇ ವಾಪಸ್ ಪಡೆದಿರುವ ಘಟನೆ ನಡೆದಿದೆ.
ಪದವಿ ಪೂರ್ವ ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕುರಿತು ಮೈಸೂರು ಜಿಲ್ಲೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀನಿವಾಸಮೂರ್ತಿ ಅವರು ಶನಿವಾರ ಆದೇಶ ಹೊರಡಿಸಿದ್ದರು. ಇದಕ್ಕೆ ಉಪನ್ಯಾಸಕರ ವಲಯದಲ್ಲಿ ಆಕ್ರೋಶ ಮತ್ತು ವಿರೋಧ ವ್ಯಕ್ತವಾಗಿದ್ದು, ಇದರಿಂದ ಎಚ್ಚೆತ್ತ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಮ್ಮ ಆದೇಶ ಹಿಂದಕ್ಕೆ ಪಡೆದುಕೊಂಡಿದ್ದಾರೆ.
ಏನಿದು ಆದೇಶ?: ಮೈಸೂರು ಜಿಲ್ಲಾಧಿಕಾರಿ ನ.6ರಂದು ಮೌಖಿಕವಾಗಿ ಸೂಚಿಸಿರುವಂತೆ ಕಾಲೇಜಿನಲ್ಲಿ ಕರ್ತವ್ಯದ ವೇಳೆ ಟೀ-ಶರ್ಟ್ ಹಾಗೂ ಜೀನ್ಸ್ ಪ್ಯಾಂಟ್ ಧರಿಸುವುದನ್ನು ನಿರ್ಬಂಧಿಸುವಂತೆ ತಿಳಿಸಿದ್ದಾರೆ. ಆದ್ದರಿಂದ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಡ್ಡಾಯ ವಾಗಿ ಜೀನ್ಸ್ ಪ್ಯಾಂಟ್, ಟಿ-ಶರ್ಟ್ ಧರಿಸಿ ಬರುವುದನ್ನು ನಿರ್ಬಂಧಿಸುವ ಕುರಿತು ನೌಕರರ ಗಮನಕ್ಕೆ ತರಬೇಕು. ಈ ಬಗ್ಗೆ ಕ್ರಮ ಕೈಗೊಂಡು ನ.10ರ ಒಳಗೆ ಕಚೇರಿಗೆ ವರದಿ ಸಲ್ಲಿಸುವಂತೆ ಪಿಯು ಕಾಲೇಜಿನ ಪ್ರಾಂಶುಪಾಲರಿಗೆ ಆದೇಶ ನೀಡಿದ್ದರು.
ವಿರೋಧ ವ್ಯಕ್ತವಾಗಿತ್ತು: ಡಿಡಿಪಿಯು ಹೊರಡಿಸಿದ್ದ ಈ ಆದೇಶಕ್ಕೆ ಉಪನ್ಯಾಸಕರ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿ ದ್ದಲ್ಲದೇ, ಸಾರ್ವಜನಿಕ ವಲಯದಲ್ಲೂ ಪರ-ವಿರೋಧ ಚರ್ಚೆಗೆ ಗ್ರಾಸವಾಗಿತ್ತು. ಕೆಲವರು ಈ ವಿಚಾರವನ್ನು ಜಿಲ್ಲಾಧಿಕಾರಿ ಗಮನಕ್ಕೂ ತಂದಿದ್ದರು. ಬಳಿಕ ವಸ್ತ್ರ ಸಂಹಿತೆ ವಿಷಯ ವಿವಾದವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಡಿಡಿಪಿಯು ಶ್ರೀನಿವಾಸ್‌ಮೂರ್ತಿ ಅವರು, ಆದೇಶವನ್ನು ಭಾನುವಾರ ವಾಪಸ್ ಪಡೆದುಕೊಂಡಿದ್ದಾರೆ.
ನನಗೇ ಶಾಕ್ ಆಗಿದೆ: “ನಾನು ಈ ರೀತಿಯ ಆದೇಶವನ್ನು ಹೊರಡಿಸುವಂತೆ ಸೂಚಿಸಿಲ್ಲ. ಈ ವಿಚಾರ ಕೇಳಿ ನನಗೆ ಶಾಕ್ ಆಗಿದೆ. ತಕ್ಷಣವೇ ಸಂಬಂಧಿಸಿದ ಅಧಿಕಾರಿಯೊಂದಿಗೆ ಮಾತನಾಡಿ, ಈ ವಿಚಾರದಲ್ಲಿ ತಪ್ಪಾಗಿದೆ. ಈ ಆದೇಶವನ್ನು ಹಿಂಪಡೆಯಿರಿ ಎಂದು ನಿರ್ದೇಶಿಸಿದ್ದೇನೆ. ನಮ್ಮ ಗಮನಕ್ಕೆ ಬಾರದೇ ಈ ರೀತಿಯ ಆದೇಶ ಹೊರಡಿಸಿರುವ ಬಗ್ಗೆ ಡಿಡಿಪಿಯು ಅವರಿಂದ ಸೂಕ್ತ ಕಾರಣ ಕೇಳಿದ್ದೇನೆ’ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.
ಜೀನ್ಸ್ ಧರಿಸಿದ್ದರೆ ಮುಜುಗರ ಆಗುತ್ತದೆ ಎಂದು ಆದೇಶ ಹೊರಡಿಸಲಾಗಿತ್ತು : ತರಗತಿಯಲ್ಲಿ ಶಿಸ್ತು ಮೂಡಿಸುವ ಉದ್ದೇಶದಿಂದ ಈ ಆದೇಶವನ್ನು ಹೊರಡಿಸಲಾಗಿತ್ತು. ಜತೆಗೆ ಜಿಲ್ಲಾಧಿಕಾರಿ ಅವರೊಂದಿಗೆ ಈ ವಾರ ಸಿಇಟಿಗೆ ಸಂಬಂಧಿಸಿದಂತೆ ಸಭೆ ಕರೆಯಲಾಗಿದೆ. ಆ ಸಭೆಗೆ ಉಪ ನ್ಯಾಸಕರು ಜೀನ್ಸ್ ಪ್ಯಾಂಟ್, ಟೀ ಶರ್ಟ್ ಧರಿಸಿ ಬಂದರೆ ಮುಜುಗರ ಆಗಬಹುದೆಂಬ ಕಾರಣಕ್ಕೆ ಶನಿವಾರ ಬೆಳಗ್ಗೆ 9 ಗಂಟೆಗೆ ಆದೇಶ ಹೊರಡಿ ಸಲಾಗಿತ್ತು. ಈಗ ಆ ಆದೇಶ ಹಿಂದಕ್ಕೆ ಪಡೆದು ಕೊಳ್ಳಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಸಹ ಕರೆ ಮಾಡಿ ವಿಚಾರಿಸಿ ದರು. ಆದೇಶ ವಾಪಸ್ ಪಡೆದಿರುವ ಮಾಹಿತಿಯನ್ನು ಅವರಿಗೂ ನೀಡಿದ್ದೇನೆಂದು ಮೈಸೂರು ಡಿಡಿಪಿಯು ಶ್ರೀನಿವಾಸ್ ಮೂರ್ತಿ ತಿಳಿಸಿದ್ದಾರೆ.
ಡಿಡಿಪಿಯು ಆದೇಶಕ್ಕೆ ಉಪನ್ಯಾಸಕರಲ್ಲೇ ಪರ -ವಿರೋಧ :
ಮೈಸೂರು: ಡಿಡಿಪಿಯು ಅವರು ಜಿಲ್ಲೆಯ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಕರ್ತವ್ಯ ಸಂದರ್ಭದಲ್ಲಿ ಜೀನ್ಸ್ ಪ್ಯಾಂಟ್, ಟೀ ಶರ್ಟ್ ಧರಿಸದಂತೆ ನಿರ್ಬಂಧ ವಿಧಿಸಿ ಹೊರಡಿಸಿದ್ದ ಆದೇಶಕ್ಕೆ ಉಪನ್ಯಾಸಕರಲ್ಲೇ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. ಮಕ್ಕಳಿಗಷ್ಟೇ ಅಲ್ಲದೇ ಇಡೀ ಸಮಾಜಕ್ಕೆ ಗುರು (ಶಿಕ್ಷಕ) ಮಾದರಿಯಾಗಿರಬೇಕು. ಆತ ಧರಿಸುವ ಉಡುಪು, ಆತನ ಹವ್ಯಾಸ, ನಡೆ-ನುಡಿ ಎಲ್ಲವನ್ನೂ ಸಮಾಜ ಮತ್ತು ಮಕ್ಕಳು ಗಮನಿಸುತ್ತಾರೆ. ಉಪನ್ಯಾಸಕ ಉತ್ತಮ ವಸ್ತ್ರ ಧರಿಸಿ ಕಾಲೇಜಿಗೆ ಬಂದರೆ ಮಕ್ಕಳು ಸಹ ಅದನ್ನೇ ಕಲಿಯುತ್ತವೆ. ಜೀನ್ಸ್ – ಮತ್ತು ಟೀಶರ್ಟ್ ಧರಿಸಿ ಬಂದರೆ ಮಕ್ಕಳೂ ಚಿತ್ರ ವಿಚಿತ್ರವಾದ ಬಟ್ಟೆ ಧರಿಸುತ್ತಾರೆ ಎಂಬುದು ವರ್ಗದ ಉಪನ್ಯಾಸಕರ ಅಭಿಮತ. ನಾವು ಎಲ್ಲಾ ಸಂದರ್ಭದಲ್ಲೂ ಜೀನ್ಸ್ ಪ್ಯಾಂಟ್ – ಟೀಶರ್ಟ್ ಧರಿಸುವುದಿಲ್ಲ. ಕೆಲವೊಮ್ಮೆ ಧರಿಸುತ್ತೇವೆ. ಅದಕ್ಕೂ ನಿರ್ಬಂಧ ಹೇರಿದರೆ ಹೇಗೆ ಎಂಬುದು ಮತ್ತೂಂದು ವರ್ಗದ ವಾದವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.