ಗಲಭೆ: ಸಿಬಿಐ ತನಿಖೆಗೆ ಆಗ್ರಹ
Team Udayavani, Aug 17, 2020, 12:46 PM IST
ಪಿರಿಯಾಪಟ್ಟಣ: ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ, ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಪತ್ರಕರ್ತರು ಮತ್ತು ಪೊಲೀಸರ ಮೇಲೆ ನಡೆದಿರುವ ಹಲ್ಲೆ ಖಂಡಿಸಿ ಸಿಬಿಐ ತನಿಖೆಗೆ ಆಗ್ರಹಿಸಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಭೋವಿ ಹಿತರಕ್ಷಣಾ ಸಮಿತಿ ವತಿಯಿಂದ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಭೋವಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎನ್.ಟಿ.ರವಿಕುಮಾರ್ ಮಾತನಾಡಿ, ಶಾಸಕ ಶ್ರೀನಿವಾಸಮೂರ್ತಿ ಮನೆ ದಾಳಿ, ವರದಿ ಮಾಡಲು ಹೋದಂತಹ ಪತ್ರಕರ್ತರು ಮತ್ತು ಪೊಲೀಸರ ಮೇಲೆ ಹಲ್ಲೆ ಮಾಡಿ ಸಾರ್ವಜನಿಕರ ಆಸ್ತಿಪಾಸ್ತಿ ಹಾಳು ಮಾಡುವ ಮೂಲಕ ಕ್ರೌರ್ಯ ಮೆರೆದಿರುವುದು ಖಂಡನೀಯ ಎಂದರು. ಯಾರೋ ಒಬ್ಬರು ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎಂಬ ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳು ಗಲಭೆ ನಡೆಸಿರುವುದು ಖಂಡನೀಯ. ಅವರ ವಿರುದ್ಧ ಕಾನೂನು ಹೋರಾಟ ಮಾಡಬಹುದಿತ್ತು ಎಂದರು.
ಸಾರ್ವಜನಿಕ ಆಸ್ತಿ ನಷ್ಟ: ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟು ಮಾಡಿರುವ ಸಮಾಜಘಾತಕ ಶಕ್ತಿಗಳನ್ನು ಹತ್ತಿಕಬೇಕು ಹಾಗೂ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು. ಶಿರಸ್ತೇದಾರ್ ಶಕೀಲಾ ಬಾನು ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ನೀಡಿದರು. ಭೋವಿ ಹಿತರಕ್ಷಣಾ ಸಮಿತಿ ತಾಲೂಕು ಉಪಾಧ್ಯಕ್ಷ ಮಹೇಶ್, ಕಾರ್ಯದರ್ಶಿ ಶಿವು, ಖಜಾಂಚಿ ಎಂ.ಪಿ.ರಾಜು, ಮುಖಂಡರಾದ ಗಣೇಶ್, ಮೋಹನ್,ಸುರೇಂದ್ರ, ಚೆನ್ನಕೇಶವ, ಸುರೇಶ್, ಪುಟ್ಟಯ್ಯ, ಕುಮಾರೇಶ್, ಸತ್ಯಗಾಲ ಗುರುರಾಜ್, ಸ್ವಾಮಿ, ರವಿ, ರಾಜು, ಕುಮಾರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.