ವಿಶ್ವನಾಥ್ ಅವರೇ, ನೀವು ಸತ್ಯಸಂಧರ ರೀತಿ ಮಾತಾಡಬೇಡಿ: ಪ್ರತಾಪ್ ಸಿಂಹ
Team Udayavani, Aug 24, 2021, 12:20 PM IST
ಮೈಸೂರು: ಬೆಂಗಳೂರು – ಮೈಸೂರು ದಶಪಥ ರಸ್ತೆಯ ಕ್ರೆಡಿಟ್ ವಾರ್ ವಿಚಾರ ಇದೀಗ ಮತ್ತೊಂದು ಹಂತ ತಲುಪಿದೆ. ಈ ಬಗ್ಗೆ ಮೈಸೂರು ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರು – ಬೆಂಗಳೂರು ದಶಪಥ ರಸ್ತೆಯ ಕಾಮಗಾರಿ ವೀಡಿಯೋ ಮಾಡಿದ್ದು ಇಷ್ಟು ಜನರ ಹೊಟ್ಟೆಗೆ ಬೆಂಕಿ ಬೀಳಿಸುತ್ತದೆಯೆಂದು ಗೊತ್ತಿರಲಿಲ್ಲ. ಮೋದಿ ಸರಕಾರ ಈ ಯೋಜನೆಗೆ ಹಣ ಬಿಡುಗಡೆ ಕಾಮಗಾರಿ ಚಾಲನೆ ನೀಡಲಾಗಿತ್ತು 8,666 ಕೋಟಿ ರೂ ಪ್ರಾಜೆಕ್ಟ್ ನಲ್ಲಿ 8 ಪೈಸೆನಾದರೂ ವಿಶ್ವನಾಥ್ ಅವರು ಬಿಡುಗಡೆ ಮಾಡಿಸಿದ್ದರಾ? ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದಾರ? ನಿತಿನ್ ಗಡ್ಕರಿ ನಮ್ಮ ಕೇಂದ್ರ ಸರಕಾರದ ಮಂತ್ರಿ ಮೋದಿ ಅವರ ಆಡಳಿತದಲ್ಲಿ ಶುರುವಾಗುವ ಪ್ರಾಜೆಕ್ಟ್ ಗಳು ಮೋದಿ ಸರಕಾರಕ್ಕೆ ಸಲ್ಲಬೇಕು ಎಂದರು.
ವಿಶ್ವನಾಥ್ ಅವರು ತಾವೇ ಈ ಯೋಜನೆ ತಂದಿದ್ದರೆ ತಮ್ಮ ಚುನಾವಣೆ ವೇಳೆ ಯಾಕೆ ಹೇಳಿಲ್ಲ? ವಿಶ್ವನಾಥ್ ಅವರು ಟೀಕೆ ಮಾಡದ ವ್ಯಕ್ತಿಯೇ ಇಲ್ಲ. ಟ್ರಂಪ್, ಬೈಡೆನ್ ರನ್ನೂ ಅವರು ಬಿಟ್ಟಿಲ್ಲ. ದೇವೇಗೌಡರು, ಯಡಿಯೂರಪ್ಪ, ವಿಜಯೇಂದ್ರ, ಎಸ್.ಟಿ. ಸೋಮಶೇಖರ್ ಎಲ್ಲರನ್ನೂ ವಿಶ್ವನಾಥ್ ಬೈಯ್ದಿದ್ದು ಆಯ್ತು, ಬಸವರಾಜ್ ಬೊಮ್ಮಾಯಿ ಬಗ್ಗೆ ಮಾತಾಡೋಕೆ ಇನ್ನೂ ಆರಂಭಿಸಿಲ್ಲ. ಈ ಗ್ಯಾಪ್ ನಲ್ಲಿ ನನ್ನ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ:ಉತ್ತರಾಖಂಡ : ತಾನಕ್ ಪುರ್ – ಚಂಪಾವತ್ ಹೆದ್ದಾರಿಯಲ್ಲಿ ಭಾರಿ ಗುಡ್ಡ ಕುಸಿತ : ಸಂಚಾರ ಸ್ಥಗಿತ
ವಿಶ್ವನಾಥ್ ಅವರೇ ಮಾಧ್ಯಮದ ಮುಂದೆ ಚರ್ಚೆ ಮಾಡುವ ಬನ್ನಿ. ಈ ಯೋಜನೆಯ ಎಲ್ಲವೂ ಚರ್ಚೆಯಾಗಲಿ. ಹಳೆ ಉಂಡುವಾಡಿ ಕುಡಿಯುವ ನೀರು ಯೋಜನೆಗೂ ವಿಶ್ವನಾಥ್ ಐದು ಪೈಸೆ ಕೊಡಿಸಿಲ್ಲ, ನೀವು ಸತ್ಯಸಂಧರ ರೀತಿ ಮಾತಾಡಬೇಡಿ ಎಂದು ಪ್ರತಾಪ್ ಸಿಂಹ ಹೇಳಿದರು.
ಮಾಜಿ ಸಚಿವ ಮಹದೇವಪ್ಪ ಅವರೇ ನೀವು ನಿಮ್ಮ ಅವಧಿಯಲ್ಲಿ ಮಾಡಿದ ಒಂದು ರಸ್ತೆ ನೆಟ್ಟಗಿದ್ದಿಯಾ ಸರ್? ನಿಮಗೆ ದಶಪಥ ರಸ್ತೆಯ ಕ್ರೆಡಿಟ್ ಬೇಕಾ? ನೀವು ಹಿರಿಯರು. ನೀವು ಮಾರ್ಗದರ್ಶನ ಮಾಡಿ ಸರ್. ಬೀದಿ ಜಗಳಕ್ಕೆ ಇಳಿಯಬೇಡಿ ಎಂದರು.
ದಶಪಥ ರಸ್ತೆ ಕ್ರೆಡಿಟ್ ಭಾರತ ಮಾತೆಗೆ ಸೇರಿದ್ದು ಎಂಬ ಶಾಸಕ ರಾಮದಾಸ್ ಗೂ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಗಿ ತಿರುಗೇಟು ನೀಡಿದರು. ಮೋದಿ ಅವರು ಭಾರತ ಮಾತೆಯ ಸುಪುತ್ರ. ಅವರು ಮಾಡುವ ಎಲ್ಲಾ ಕೆಲಸವೂ ಭಾರತ ಮಾತೆಗೆ ಸೇರಿದ್ದು. ಕ್ಷೇತ್ರದಲ್ಲಿ ಮಾಡುವ ಕೆಲಸ ಭಾರತ ಮಾತೆಗೆ ಸೇರಿದ್ದು ಎಂದು ಹೇಳುವ ಕಾಲ ಈಗ ಬಂತಲ್ಲ ನನಗೆ ಸಂತೋಷವಾಗಿದೆ. ರಾಮದಾಸ್ ಅವರ ಕೆ.ಆರ್. ಕ್ಷೇತ್ರದಲ್ಲಿ ದಶಕಗಳಿಂದ ಬಿದ್ದಿರು ಕಸವನ್ನು ಸ್ವಚ್ಚ ಮಾಡುವ ಕೆಲಸವನ್ನು ನಾನೇ ಮಾಡುತ್ತಿದ್ದೇನೆ. ಅದರ ಕ್ರೆಡಿಟ್ ಕೂಡ ಭಾರತ ಮಾತೆಗೆ ಸೇರಿದ್ದಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.