Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು
Team Udayavani, Oct 14, 2024, 10:44 AM IST
ಹುಣಸೂರು: ಆಸ್ಪತ್ರೆಗೆ ತೆರಳುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ 7 ವರ್ಷದ ಬಾಲಕಿ ಮೃತಪಟ್ಟು, ಬಾಲಕಿಯ ತಂದೆ ಹಾಗೂ ಬೈಕ್ ಸವಾರಗಂಭೀರ ಗಾಯಗೊಂಡಿರುವ ಘಟನೆ ನಗರದ ಬೈಪಾಸ್ ರಸ್ತೆಯಲ್ಲಿ ಭಾನುವಾರ (ಅ.13) ನಡೆದಿದೆ.
ಹುಣಸೂರು ತಾಲ್ಲೂಕಿನ ಎರಡನೇ ಪಕ್ಷಿರಾಜಪುರ ಗ್ರಾಮದ ಬಾಲಕಿ ಅರೋವಿ (7 ವರ್ಷ) ಮೃತ ಬಾಲಕಿ.
ಅರೋವಿ ಜ್ವರದೊಂಡ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಅವರ ತಂದೆ ಪಿಲಿಪ್ ಜೊತೆಯಲ್ಲಿ ಕಾವೇರಿ ಆಸ್ಪತ್ರೆಗೆ ನಡೆದು ಹೋಗುವ ವೇಲೆ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ಮೈಸೂರು ಕಡೆಯಿಂದ ಬಂದ ಬೈಕ್ ತಂದೆ, ಮಗಳಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದರೆ. ತಂದೆ ಹಾಗೂ ಬೈಕ್ ಸವಾರನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸ್ಥಳಕ್ಕೆ ಹುಣಸೂರು ಪಟ್ಟಣ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಶವವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ. ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೈಪಾಸ್ ರಸ್ತೆಯಲ್ಲಿ ಇರುವ ಕಾವೇರಿ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮುಂಬಾಗ ಹೆಚ್ಚಿನ ಜನರು ಓಡಾಡುತ್ತಿದ್ದು. ರಸ್ತೆಯ ಸುರಕ್ಷತೆಗಾಗಿ ಅಪಘಾತ ತಡೆಯಲು ಕಾವೇರಿ ಆಸ್ಪತ್ರೆಯ ಎದುರಿನಲ್ಲಿ ನೂರಾರು ವಾಹನಗಳು ವೇಗವಾಗಿ ಓಡಾಡುತ್ತಿರುತ್ತವೆ. ಆಸ್ಪತ್ರೆಯವರು ಸಾರ್ವಜನಿಕರ ಸುರಕ್ಷತೆಗಾಗಿ ಸೆಕ್ಯುರಿಟಿ ನೇಮಿಸಿ ಅಪಘಾತವನ್ನು ತಡೆಯಲು ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದು. ತಾಲೂಕು ಆಡಳಿತ ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: Sampaje: ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.