ಗ್ರಾಮೀಣ ಸೊಗಡು ನಗರಗಳನ್ನು ವ್ಯಾಪಿಸಬೇಕು

Team Udayavani, Jan 21, 2018, 12:02 PM IST

m1-gramina.jpg

ತಿ.ನರಸೀಪುರ: ಗಣಕೀಕೃತ ಕ್ರೀಡೆಗಳಿಗೆ ಸಿಮೀತರಾಗಿ, ಕೆಲಸದೊತ್ತಡದಿಂದ ಬಳಲುತ್ತಿರುವ ನಗರ ವಾಸಿಗಳು ಗ್ರಾಮೀಣರಂತೆ ಸದೃಢ ಆರೋಗ್ಯ  ಹೊಂದಲು ಗ್ರಾಮೀಣ ಸೊಗಡು ನಗರ ಪ್ರದೇಶಗಳನ್ನು ವ್ಯಾಪಿಸುವ ಅಗತ್ಯವಿದೆ ಎಂದು ಮಾಜಿ ಶಾಸಕ ಡಾ.ಎನ್‌.ಎಲ್‌.ಭಾರತೀಶಂಕರ್‌ ಹೇಳಿದರು.

ಪಟ್ಟಣದ ಹಳೇ ತಿರುಮಕೂಡಲಿನ ಬಳಿ ರಾಷ್ಟ್ರೀಯ ಹೆದ್ದಾರಿ 212ರ ಬದಿಯಲ್ಲಿ ಶ್ರೀ ಚೌಡೇಶ್ವರಿ ಅಮ್ಮನವರ ಹಬ್ಬದ ಪ್ರಯುಕ್ತ ಯುವಕರ ಸ್ನೇಹ ಬಳಗದಿಂದ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ಹಚ್ಚ ಹಸಿರಿನ ನಡುವೆ ದುಡಿಮೆಮಾಡಿ, ದೇಹಕ್ಕೆ ಸದೃಢತೆಯನ್ನು ನೀಡುವ ಕ್ರೀಡಾಕಕೂಟಗಳಲ್ಲಿ ಭಾಗವಹಿಸುವ ಹಳ್ಳಿಗಾಡಿನ ಜನರ ಬದುಕು ನಗರವಾಸಿಗಳಿಗೆ ಸಿಗಬೇಕಾದ ಗ್ರಾಮೀಣ ಸೊಗಡನ್ನು ನಗರಗಳಿಗೆ ಕೊಂಡೋಯ್ಯಬೇಕಿದೆ ಎಂದರು. 

ಕಾರ್ಮಿಕ ಹಾಗೂ ಐತಿಹಾಸಿಕ ಹಿನ್ನಲೆಯಲ್ಲಿರುವ ತಿರುಮಕೂಡಲು ನರಸೀಪುರ ರಾಜ್ಯ ಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಗೂ ಹೆಸರುವಾಸಿಯಾಗುತ್ತಿದೆ. ದುಡಿಯುವ ರೈತ ಸಮೂಹಕ್ಕೆ ಹಾಗೂ ಜಾನುವಾರುಗಳಿಗೆ ಕ್ರೀಡಾಕೂಟಗಳು ಅನಿವಾರ್ಯತೆಯಿದೆ.

ಗ್ರಾಮ ದೇವತೆ ಶ್ರೀ ಚೌಡೇಶ್ವರಿ ಅಮ್ಮನವರ ಜಾತ್ರೋತ್ಸವ ಸಂಭ್ರಮದ ನಡುವೆ ಯುವಕರ ಸ್ನೇಹ ಬಳಗ ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ಆಯೋಜಿಸಿರುವುದು ಸೂಕ್ತವಾಗಿದೆ. ಇಂತಹ ಗ್ರಾಮೀಣ ಕ್ರೀಡಾಕೂಟಗಳಿಗೆ ನಮ್ಮ ನಿರಂತರ ಬೆಂಬಲದೊಂದಿಗೆ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು.

ಜಿಪಂ ಸದಸ್ಯ ಎಂ.ಅಶ್ವಿ‌ನ್‌ಕುಮಾರ್‌ ಮಾತನಾಡಿ, ಕ್ರೀಡಾಕೂಟಗಳಲ್ಲಿ ಸೋಲು ಗೆಲುವು ಎರಡನ್ನೂ ಸಮಾನತೆಯ ಭಾವನೆಯಿಂದ ಸ್ವೀಕರಿಸುವ ಕ್ರೀಡಾ ಮನೋಭಾವನೆ ಮುಖ್ಯವಾಗಿರಬೇಕು. ಪ್ರತಿ ವರ್ಷವೂ ತಿರುಮಕೂಡಲು ನರಸೀಪುರದಲ್ಲಿ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಬರಲಾಗುತ್ತಿದೆ.

ಕ್ರೀಡಾಕೂಟವನ್ನು ಆಯೋಜಿಸುವ ಸಂದರ್ಭದಲ್ಲಿ ಸವಾಲುಗಳು ಮತ್ತು ಸಮಸ್ಯೆಗಳು ಎದುರಾಗುತ್ತವೆ. ಎಲ್ಲವನ್ನೂ ಸಹನೆ ಮತ್ತು ತಾಳ್ಮೆಯಿಂದ ಎದುರಿಸಿ ಮುನ್ನೇಡೆಯಬೇಕೆಂದು ಸಲಹೆ ನೀಡಿದರು. ವಾಟಾಳು ಮಠದ ಸಿದ್ಧಲಿಂಗಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಅಪರ ಆಯುಕ್ತ ಹೆಳವರಹುಂಡಿ ಸಿದ್ಧಪ್ಪ, ಪಪಂ ಮಾಜಿ ಅಧ್ಯಕ್ಷ ವಿರೇಶ್‌, ಹಂಚ್ಯಾ ಗ್ರಾಪಂ ಅಧ್ಯಕ್ಷ ಮಂಜು, ಪುರಸಭೆ ಸದಸ್ಯ ಟಿ.ಜಿ.ಪುಟ್ಟಸ್ವಾಮಿ, ಕಸಾಪ ಯೋಜನಾ ಸಮಿತಿ ಅಧ್ಯಕ್ಷ ಕನ್ನಡ ಪುಟ್ಟಸ್ವಾಮಿ, ಉಪನ್ಯಾಸಕ ಕುಮಾರಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ವಿ.ಶಿವಶಂಕರಮೂರ್ತಿ, ಶ್ರೀ ಬಸವೇಶ್ವರ ಗ್ಯಾಸ್‌ ಏಜೆನ್ಸಿ ಮಾಲೀಕ ಕೆ.ಎಸ್‌.ಜಗದೀಶ್‌,

ಗ್ರಾಪಂ ಸದಸ್ಯ ಎಂ.ಬಿ.ಸಾಗರ್‌, ಯಜಮಾನ್‌ ಕೃಷ್ಣಪ್ಪ, ಶ್ರೀ ಚೌಡೇಶ್ವರಿ ಯುವಕರ ಸ್ನೇಹ ಬಳಗದ ಅಧ್ಯಕ್ಷ ಮಣಿಕಂಠರಾಜ್‌ಗೌಡ, ಬ್ಲಿಸ್ಸಡ್‌ ಟ್ರಸ್ಟ್‌ನ ಅಧ್ಯಕ್ಷ ಡಿ.ನಿಂಗರಾಜು, ಗೌಡ್ರು ಮಲ್ಲಪ್ಪ, ಮುಖಂಡರಾದ ದಕ್ಷಿಣಾಮೂರ್ತಿ, ಭೈರಾಪುರ ದಿಲೀಪ್‌, ಬಾಗಳಿ ಯೋಗೇಶ್‌, ತಲಕಾಡು ಸುಂದರನಾಯಕ, ಮಾವಿನಹಳ್ಳಿ ರಾಜೇಶ್‌ ಹಾಗೂ ಇನ್ನಿತರರು ಹಾಜರಿದ್ದರು.

ಕಿಡಿಗೇಡಿಗಳ ಅಪಪ್ರಚಾರಕ್ಕೆ ಕಿಡಿ: ಹಳೇ ತಿರುಮಕೂಡಲಿನಲ್ಲಿ ರಾಜ್ಯ ಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ರದ್ದುಗೊಳಿಸಲಾಗಿದೆ ಎಂದು ಕೆಲವು ಕಿಡಿಗೇಡಿಗಳು ಅಪಪ್ರಚಾರವನ್ನು ಮಾಡಿದ್ದರಿಂದ ಸ್ಪರ್ಧೆ ಎರಡು ತಾಸುಗಳ ಕಾಲ ತಡವಾಗಿ ಆರಂಭವಾಯಿತು.

ಹಣವನ್ನು ಮಾಡಲಿಕ್ಕೆ ಕ್ರೀಡಾಕೂಟವನ್ನು ಆಯೋಜಿಸಿದ್ದೇನೆ ಎಲ್ಲಿ ಬೆಳೆದುಬಿಡುತ್ತೇನೆ ಎಂಬ ಭಾವನೆಯಿಂದ ನಿನ್ನೆಯಿಂದಲೇ ಅಪಪ್ರಚಾರವನ್ನು ಆರಂಭಿಸಿದ್ದರು. ನಾನೂ ಯಾವತ್ತೂ ಒಬ್ಬರಿಗೆ ಕೆಟ್ಟದ್ದನ್ನು ಬಯಸಿಲ್ಲ. ಬ್ಲಿಸ್‌ಡ್‌ ಚಾರಿಟಬಲ್‌ ಟ್ರಸ್ಟ್‌ನ ಅನಾಥ ಮಕ್ಕಳಿಗಾಗಿ ಈ ಸ್ಪರ್ಧೆಯನ್ನು ನಡೆಸುತ್ತಿದ್ದೇನೆ ಎಂದು ಶ್ರೀಚೌಡೇಶ್ವರಿ ಯುವಕರ ಸ್ನೇಹ ಬಳಗದ ಅಧ್ಯಕ್ಷ ಆರ್‌.ಮಣಿಕಂಠರಾಜ್‌ಗೌಡ ತಿಳಿಸಿದರು.

ಟಾಪ್ ನ್ಯೂಸ್

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.