ವಿರೋಧಪಕ್ಷ ವೇ ಡಕೋಟಾ: ಸಚಿವ
Team Udayavani, Feb 9, 2021, 1:28 PM IST
ಮೈಸೂರು: ಸರ್ಕಾರ ಏನೂ ಮಾಡಿಲ್ಲ ಎಂದು ಹೇಳುವುದು ವಿರೋಧ ಪಕ್ಷದವರ ಕೆಲಸವಾಗಿದೆ. ಅದಿಲ್ಲದೇ ವಿರೋಧ ಪಕ್ಷದವರು ಜನಪ್ರಿಯ ಸರ್ಕಾರ ಎಂದು ಹೇಳುತ್ತಾರೆಯೇ? ಅವರೇ ಡಕೋಟಾ ದಲ್ಲಿದ್ದಾರೆ. ಸುಮ್ಮನೆ ನಮ್ಮ ಬಗ್ಗೆ ಹೇಳುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿರುಗೇಟು ನೀಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷವಾಗಿ ಸರಿಯಾಗಿ ಕೆಲಸ ಮಾಡುತ್ತಿಲ್ಲ. ವಿರೋಧ ಪಕ್ಷದವರಾಗಿ ಅವರೇ ಜಿಲ್ಲೆಗಳಿಗೆ ಪ್ರವಾಸಕ್ಕೂ ಹೋಗುತ್ತಿಲ್ಲ. ಅವರು ಪ್ರವಾಸಕ್ಕೆ ಸಹ ಸರ್ಕಾರವೇ ಹಣ ನೀಡುತ್ತದೆ. ಆದರೆ, ಅವರು ಮಾಡುವ ಕೆಲಸ ಮಾಡದೇ ಸುಮ್ಮನೆ ಈ ರೀತಿ ಹೇಳುತ್ತಾರೆ ಎಂದು ಲೇವಡಿ ಮಾಡಿದರು.
ಮುಖ್ಯಮಂತ್ರಿಗಳ ಬಗ್ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ವೃಥಾ ಆರೋಪ ಮಾಡುತ್ತಿದ್ದಾರೆ. ಅವರ ಅಭಿವೃದ್ಧಿ ಕಾರ್ಯಕ್ರಮ ಗಳನ್ನು ಸಹಿಸದೆ ಹೀಗೆ ಹೇಳುತ್ತಿದ್ದಾರೆ. ಯಾವ ರಾಜಕಾರಣಿಗಳು? ಯಾರು ಬೇಲ್‌ನಲ್ಲಿಲ್ಲ?
ಎಂದು ಪ್ರಶ್ನಿಸಿದ ಸಚಿವರು, ಕೆಲವು ವೈಯುಕ್ತಿಕ ವಿಷಯಗಳಲ್ಲೂ ಪ್ರಕರಣಗಳಿರುತ್ತವೆ. ಅದಕ್ಕೂ ಆಡಳಿತಕ್ಕೂ ಸಂಬಂಧವಿಲ್ಲ. ಇದು ಸಿದ್ದರಾಮಯ್ಯ ಅವರಿಗೂ ಗೊತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದನ್ನೂ ಓದಿ :ಎಪಿಎಂಸಿ ಆದಾಯ ಶೇ.50 ಖೋತಾ; ಸಚಿವ ತಬ್ಬಿಬ್ಬು!
ಸರ್ಕಾರದಿಂದ ಅಭಿವೃದ್ಧಿ ಕಾರ್ಯಗಳು ಯಾವುದೇ ಹಂತದಲ್ಲೂ ನಿಂತಿಲ್ಲ. ಮುಖ್ಯಮಂತ್ರಿಗಳೂ ಸಹ ಸದನದಲ್ಲಿ ಈ ಬಗ್ಗೆ ವಿವರಣೆಯನ್ನು ಈಗಾಗಲೇ ನೀಡಿದ್ದಾರೆ. ಯಡಿಯೂರಪ್ಪ ಅವರು ಕೋವಿಡ್ ಸಮಯದಲ್ಲಿ ದಿನವಿಡೀ ಕೆಲಸ ಮಾಡಿದ್ದಾರೆ. ಕೊರೊನಾ ಹಿನ್ನೆಲೆ ಆರ್ಥಿಕವಾಗಿ ಹಿನ್ನಡೆಯಾಗಿ ಅಭಿವೃದ್ದಿ ಕುಂಠಿತವಾಗಿತ್ತು. ಈಗ ಎಲ್ಲವೂ ಸರಿಯಾಗಿದೆ ಎಂದು ತಿಳಿಸಿದರು.
12975.34 ಕೋಟಿ ರೂಪಾಯಿ ಸಾಲ: ಸಹಕಾರ ಇಲಾಖೆ ಮುಖಾಂತರ ರೈತರಿಗೆ ಸಾಲ ನೀಡಿಕೆ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಲೇ ಇದೆ. ಒಟ್ಟಾರೆ 24.50 ಲಕ್ಷ ರೈತರಿಗೆ 15,300 ಕೋಟಿ ರೂಪಾಯಿ ಸಾಲ ನೀಡುವ ಗುರಿಯಲ್ಲಿ ಈಗಾಗಲೇ 19,99,508 ರೈತರಿಗೆ 12975.34 ಕೋಟಿ ರೂಪಾಯಿ. ಸಾಲ ನೀಡಲಾ್ಗಿದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: “ವಕ್ಫ್ ‘ ಸಮಸ್ಯೆ ಶೀರ್ಘ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ
Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ
Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.