![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Apr 21, 2020, 12:06 PM IST
ಮೈಸೂರು: ರಾಜ್ಯದಲ್ಲಿ ಕೋವಿಡ್ -19 ಶಂಕಿತರ ಚಿಕಿತ್ಸೆಗೆಂದು ಹೋದಾಗ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗಳಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳ ಮತ್ತು ಉತ್ತರ ಪ್ರದೇಶದ ಕಾನೂನಿನಂತೆ ಹಲ್ಲೆ ನಡೆಸಿದವರ ಮೇಲೆ ಕಠಿಣ ಕಾನೂನು ನಿಲುವು ತೆಗೆದುಕೊಳ್ಳುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರದಿಂದ ಇಂದೇ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಮಾನ್ಯ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
ಅಲ್ಲಿಯ ಕಾನೂನಿಗಿಂತಲೂ ಹೆಚ್ಚಿನ ಕಠಿಣ ಕ್ರಮಗಳಿದ್ದರೆ ಸೇರಿಸಿ ಸುಗ್ರೀವಾಜ್ಞೆ ಯೊಂದಿಗೆ ಬಿಗಿ ಕಾನೂನಿನ ಆದೇಶ ಹೊರಬೀಳಲಿದೆ. ಬಳಿಕ ಹಲ್ಲೆಕೋರರ ಬಂಧಿಸಿ ಅವರನ್ನು ಜೈಲಿಗಟ್ಟಲಾಗುವುದು ಎಂದು ಸಚಿವರು ತಿಳಿಸಿದರು.
ಸರ್ಕಾರ ಆಶಾ ಕಾರ್ಯಕರ್ತೆಯರ ಪರವಾಗಿದೆ. ಇನ್ನು ಇಂತಹ ಹಲ್ಲೆ ಪ್ರಕರಣಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ. ಯಾವುದೇ ಕಾರಣಕ್ಕೂ ಇಂತಹ ಘಟನೆಯನ್ನು ನಾನು ಸಹಿಸುವುದಿಲ್ಲ ಎಂದು ಸಚಿವರು ತಿಳಿಸಿದರು.
ಮೈಸೂರಿನಲ್ಲಿ 1561 ಮಂದಿಯನ್ನು ಈಗಾಗಲೇ ಪರೀಕ್ಷೆ ಮಾಡಲಾಗಿದೆ. ಇನ್ನೂ ಪರೀಕ್ಷೆಗಳು ನಡೆಯುತ್ತಿದ್ದು, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ತಿಳಿಸಿದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.