ನಕಲಿ ರಸಗೊಬ್ಬರ ಜಾಲ ಭೇದಿಸಿ
Team Udayavani, Nov 11, 2021, 11:20 AM IST
Representative Image used
ಮೈಸೂರು: ಹಳೇ ಮೈಸೂರು ಭಾಗದಲ್ಲಿ ನಕಲಿ ರಸಗೊಬ್ಬರ ಮಾರಾಟ ಹಾವಳಿ ಹೆಚ್ಚಾಗಿದ್ದು, ಇದರಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಹೀಗಿದ್ದರೂ ಕೃಷಿ, ತೋಟಗಾರಿಕೆ ಮತ್ತು ಪೊಲೀಸರು ಮೌನವಹಿಸಿದ್ದಾರೆ ಎಂದು ಅಖೀಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಕೆ.ಆರ್. ಪೇಟೆ ತಾಲೂಕು ಘಟಕದ ಅಧ್ಯಕ್ಷ ಸಿದ್ದೇಗೌಡ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ನಕಲಿ ಹಾಗೂ ಕಲಬೆರಕೆ ರಸಗೊಬ್ಬರ ಮಾರಾಟ ಜಾಲವಿದ್ದು, ಸಾವಿರಾರು ರೈತರನ್ನು ವಂಚಿಸಲಾಗುತ್ತಿದೆ.
ಈ ಬಗ್ಗೆ ಪೊಲೀಸರು ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದರು. ರೈತರಿಗೆ ಅಗತ್ಯವಾಗಿ ಬೇಕಿರುವ ದುಬಾರಿ ಬೆಲೆಯ ಪೋಟಾಶ್, 17-17-17, ಡಿಎಪಿ, ಎಂಒಪಿ, ಯೂರಿಯಾ ರಸಗೊಬ್ಬರಗಳನ್ನು ಹೋಲುವ ನಕಲಿ ಮತ್ತು ಕಲಬೆರಕೆ ಮಾಡಿ ಮಾರಾಟ ಮಾಡಲಾಗುತ್ತಿದೆ. ದೃಢೀಕೃತ ಕಂಪನಿಗಳ ಮೊಹರಿರುವ ಚೀಲಗಳನ್ನು ನಕಲು ಮಾಡಿ, 20 ಕೆ.ಜಿ. ನೈಜ್ಯ ರಸಗೊಬ್ಬರ ಹಾಕಿ ಉಳಿದ 30 ಕೆ.ಜಿ.ಯಷ್ಟು ನಕಲಿ ಪದಾರ್ಥವನ್ನು ಮಿಶ್ರಣ ಮಾಡಲಾಗುತ್ತಿದೆ. ಈಗಾಗಲೇ ಮೈಸೂರಿನ ಕೆ.ಆರ್. ನಗರ ತಾಲೂಕು, ಎಚ್ .ಡಿ. ಕೋಟೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.
ಇದನ್ನೂ ಓದಿ:- ಸರ್ವ ಜನಾಂಗವನ್ನು ಒಗ್ಗೂಡಿಸಿ ಆಡಳಿತ ನಡೆಸಿದ್ದರು ಟಿಪ್ಪು: ಸೈಯದ್ ನಾಸೀರ್ ಹುಸೇನ್
ಈ ಬಗ್ಗೆ ರೈತರು ಎಚ್ಚರಿಕೆಯಿಂದ ಇರಬೇಕು. ಕೂಡಲೇ ಅಧಿಕಾರಿಗಳು ಈ ಜಾಲವನ್ನು ಭೇದಿಸಿ ನಿಯಂತ್ರಣದಲ್ಲಿಡುವಂತೆ ಆಗ್ರಹಿಸಿದರು. ಜಿಲ್ಲಾಧ್ಯಕ್ಷ ಅಂಕನಹಳ್ಳಿ ತಿಮ್ಮಪ್ಪ ಮಾತನಾಡಿ, ಈಗಾಗಲೇ ತರಕಾರಿ, ಶುಂಠಿ ಬೆಳೆ ಬೆಳೆದು ಉತ್ತಮ ಬೆಲೆ ಸಿಗದೆ ರೈತರು ಕಂಗಾಲಾಗಿದೆ. ಜೊತೆಗೆ ಎಲ್ಲಾ ಕಡೆ ಭತ್ತ ಕಟಾವಿಗೆ ಬಂದಿದ್ದು, ಸರ್ಕಾರ ಸಕಾಲದಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸಬೇಕು.
ಡಿಸೆಂಬರ್ ಮೊದಲ ವಾರದಲ್ಲಿ ರೈತರಿಂದ ಭತ್ತ, ರಾಗಿ, ಜೋಳ ಖರೀದಿ ಮಾಡಲು ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿದರು. ಜೊತೆಗೆ ಕೆ.ಆರ್. ನಗರದ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ತೆರೆಯುವಂತೆ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಪತ್ರಿಕಾ ಕಾರ್ಯದರ್ಶಿ ಎಂ.ಎಸ್. ರಾಜೇಂದ್ರ, ಜಿಲ್ಲಾ ಉಪಾಧ್ಯಕ್ಷ ಎಚ್.ಎಸ್. ವಿಶ್ವಾಸ್, ಮೈಸೂರು ತಾಲೂಕು ಅಧ್ಯಕ್ಷ ಕೆ.ಪಿ. ಶಿವರಾಜು, ಮಹಿಳಾ ಘಟಕದ ಅಧ್ಯಕ್ಷೆ ಸುಭಾಷಿಣಿ, ಉಪಾಧ್ಯಕ್ಷೆ ಲೀಲಾವತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.