ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಶ್ರೀಗಂಧ ಕಳ್ಳನ ಬಲಿ
Team Udayavani, Feb 12, 2017, 3:45 AM IST
ಮೈಸೂರು: ಶ್ರೀಗಂಧದ ಮರ ಕಳವು ಮಾಡಲು ಬಂದಿದ್ದ ಖದೀಮನೊಬ್ಬ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡಿನ ದಾಳಿಗೆ ಬಲಿಯಾಗಿರುವ ಘಟನೆ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ನಗರದ ರಾಮಕೃಷ್ಣನಗರದಲ್ಲಿ ಇರುವ ಲಿಂಗಾಂಬುದಿ ಕೆರೆಯ ಆವರಣದಲ್ಲಿ ಈ ಘಟನೆ ನಡೆದಿದೆ. ಗುಂಡೇಟಿಗೆ ಬಲಿಯಾಗಿರುವ ವ್ಯಕ್ತಿಯನ್ನು ಎಚ್.ಡಿ.ಕೋಟೆಯ ಮಹದೇಶ್ವರ ಕಾಲೋನಿ ನಿವಾಸಿ ಶಂಕರ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಘಟನೆ ಹಿನ್ನೆಲೆ:
ಲಿಂಗಾಂಬುದಿ ಕೆರೆ ಆವರಣದಲ್ಲಿರುವ ಅರಣ್ಯ ಪ್ರದೇಶದಲ್ಲಿ ಬೆಳೆಸಲಾಗಿರುವ ಶ್ರೀಗಂಧದ ಮರಗಳನ್ನು ಕಳವು ಮಾಡಲು ಹೊಂಚು ಹಾಕಿದ್ದ ಐವರು ಖದೀಮರು ಶುಕ್ರವಾರ ತಡರಾತ್ರಿ ಶ್ರೀಗಂಧದ ಮರ ಕಳವು ಮಾಡಲು ಮುಂದಾಗಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮರಗಳ್ಳತನಕ್ಕೆ ಯತ್ನಿಸುತ್ತಿದ್ದ ಖದೀಮರ ನಡೆಸಿದ ಕಾರ್ಯಾಚರಣೆ ನಡೆಸಿದರು. ಈ ಸಂದರ್ಭದಲ್ಲಿ ಹಾರಿಸಲಾದ ಗುಂಡಿಗೆ ಮರಗಳ್ಳರ ತಂಡದಲ್ಲಿದ್ದ ಐವರಲ್ಲಿ ಓರ್ವ ಸ್ಥಳದಲ್ಲೇ ಅಸುನೀಗಿದ್ದಾನೆ.
ಸ್ವಯಂ ರಕ್ಷಣೆಗಾಗಿ ದಾಳಿ:
ಘಟನೆ ಹಿನ್ನೆಲೆಯಲ್ಲಿ ಮೈಸೂರು ವಲಯ ಅರಣ್ಯಾಧಿಕಾರಿ ಕರಿಕಾಳನ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ರಾತ್ರಿ ಖದೀಮರ ತಂಡವೊಂದು ಶ್ರೀಗಂಧದ ಮರ ಕಳವು ಮಾಡಲು ಯತ್ನಿಸುತ್ತಿರುವುದನ್ನು ಗಮನಿಸಿದ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಆರಂಭದಲ್ಲಿ ಶರಣಾಗುವಂತೆ ಮರಗಳ್ಳರಿಗೆ ಸೂಚಿಸಿದ್ದಾರೆ. ಆದರೆ ಮರಗಳ್ಳರು ಕರ್ತವ್ಯದಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸ್ವಯಂ ರಕ್ಷಣೆಗಾಗಿ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು, ಉಳಿದವರು ಪರಾರಿಯಾಗಿದ್ದಾರೆ. ಖದೀಮರ ಗುಂಪಿನಲ್ಲಿ 8-10 ಮಂದಿ ಇದ್ದರು. ಆದರೆ ಸ್ಥಳದಲ್ಲಿ ಮೂವರು ಅರಣ್ಯ ಸಿಬ್ಬಂದಿ ಮಾತ್ರ ಗಸ್ತಿನಲ್ಲಿದ್ದ ಕಾರಣ ಅನಿವಾರ್ಯವಾಗಿ ಗುಂಡಿನ ದಾಳಿ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.
ಅರಣ್ಯ ಇಲಾಖೆ ಸಿಬ್ಬಂದಿ ಮಂಜುನಾಥ್ ಮಾತನಾಡಿ, ತಡರಾತ್ರಿ ಗಸ್ತಿನಲ್ಲಿದ್ದಾಗ ಮರ ಕಡಿಯುತ್ತಿರುವ ಶಬ್ಧ ಕೇಳಿ ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಆರಂಭಿಸಲಾಯಿತು. ಮರ ಕಡಿಯುತ್ತಿದ್ದ ಸ್ಥಳಕ್ಕೆ ತೆರಳುತ್ತಿದ್ದಂತೆ ಕಳ್ಳರು ನಮ್ಮ ಮೇಲೆ ಕಲ್ಲು ತೂರಾಟ ನಡೆಸಿದರು. ಆದರೂ ಶರಣಾಗುವಂತೆ ತಿಳಿಸಲಾಯಿತು, ಇದಕ್ಕೊಪ್ಪದ ಮರಗಳ್ಳರು ಮಾರಕಾಸ್ತ್ರಗಳಿಂದ ನಮ್ಮ ಮೇಲೆ ಹಲ್ಲೆ ನಡೆಸಲು ಮುಂದಾದರು. ಹೀಗಾಗಿ ವಿಧಿಯಿಲ್ಲದೇ ಮರಗಳ್ಳರ ಮೇಲೆ ಗುಂಡಿನ ದಾಳಿ ನಡೆಸಬೇಕಾಯಿತು ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
MUST WATCH
ಹೊಸ ಸೇರ್ಪಡೆ
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.