![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 12, 2022, 1:43 PM IST
ಮೈಸೂರು: ವಿಧಾನಸಭೆ ಚುನಾವಣೆಗೆ ಸಿದ್ದತೆಗಳು ಆರಂಭಗೊಂಡಂತೆ ಪಕ್ಷಾಂತರ ಚಟುವಟಿಕೆಗಳು ಕೂಡಾ ಬಿರುಸು ಪಡೆದಿದೆ. ಮೈಸೂರು ಭಾಗದಲ್ಲಿ ಬಿಜೆಪಿ ಮತ್ತೊಂದು ವಿಕೆಟ್ ಪತನವಾಗಿದ್ದು, ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಅವರು ಕಾಂಗ್ರೆಸ್ ಸೇರಲು ಸಿದ್ದರಾಗಿದ್ದಾರೆ. ಅಲ್ಲದೆ ಬಿಜೆಪಿಯಿಂದ 10ಕ್ಕಿಂತ ಹೆಚ್ಚು ಶಾಸಕರು ಕಾಂಗ್ರೆಸ್ ಗೆ ಬರುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಂದೇಶ್ ನಾಗರಾಜ್, ನಾನು ಬಿಜೆಪಿಯಲ್ಲಿ ಸಕ್ರಿಯನಾಗಿಲ್ಲ, ಅಕ್ರಮವಾಗಿದ್ದೇನೆ. ಬಿಜೆಪಿವರು ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡು ಅನ್ಯಾಯ ಮಾಡಿದರು. ಅನ್ಯಾಯ ಮಾಡುವುದರಲ್ಲಿ ಬಿಜೆಪಿ ಅವರು ನಿಸ್ಸೀಮರು. ಮೋಸ ಮಾಡುವುದರಲ್ಲಿ ಬಿಜೆಪಿ ಅವರು ನಂಬರ್ ಓನ್ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಸಹವಾಸ ನನಗೆ ಸಾಕಿನ್ನು. ಎಚ್.ವಿಶ್ವನಾಥ್ ಗೆ ಅನ್ಯಾಯ ಮಾಡಿದರು. ನನಗೂ ಅನ್ಯಾಯ ಮಾಡಿದರು. ನಾನು ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದೇನೆ. ಡಿಕೆ ಶಿವಕುಮಾರ್ ಅವರ ಜೊತೆಯೂ ಮಾತಾಡುತ್ತೇನೆ ಎಂದರು.
ಇದನ್ನೂ ಓದಿ:ವಾಕಿಂಗ್ ಹೋಗುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡಿದ ಪೊಲೀಸರು: ಇಬ್ಬರು ಸಸ್ಪೆಂಡ್
ಬಿಜೆಪಿ ಅವರು ಯಡಿಯೂರಪ್ಪನನ್ನು ಒಳ್ಳೆತನದಲ್ಲಿ ಮುಗಿಸಿದರು. ಆ ವೇಳೆ ಬಿಜೆಪಿಗೆ 40 ಸ್ಥಾನ ನಷ್ಟವಾಯ್ತು. ಈಗ ವಿಜಯೇಂದ್ರನನ್ನು ವರುಣಕ್ಕೆ ತರುವ ಮೂಲಕ ಅವರನ್ನು ಮುಗಿಸಲು ಹೊರಟ್ಟಿದ್ದಾರೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ ಬಿಜೆಪಿಯದು. ವಿಜಯೇಂದ್ರನನ್ನು ಬಲಿ ಕೊಡಲು ವರುಣ ಕ್ಷೇತ್ರಕ್ಕೆ ಕರೆ ತರುತ್ತಿದ್ದಾರೆ. ವಿಜಯೇಂದ್ರಗೆ ರಾಜಕೀಯ ಭವಿಷ್ಯ ಚೆನ್ನಾಗಿ ಇರಬೇಕಾದರೆ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡಲಿ ಎಂದು ಸಂದೇಶ್ ನಾಗರಾಜ್ ಹೇಳಿದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.