ಮಾರ್ಚ್‌ನಿಂದ ಸಪ್ತಪದಿ ಸಾಮೂಹಿಕ ವಿವಾಹ
Team Udayavani, Feb 10, 2021, 2:50 PM IST
ಮೈಸೂರು: ರಾಜ್ಯ ಸರ್ಕಾರದ ವತಿಯಿಂದ ನಡೆಯುವ ಸಪ್ತಪದಿ ಸರಳಸಾಮೂಹಿಕ ವಿವಾಹ ಜಿಲ್ಲೆಯಲ್ಲಿ ಮಾರ್ಚ್‌ನಿಂದ ಮತ್ತೆ ಆರಂಭವಾಗಲಿದೆ. ಸಾಮೂಹಿಕ ವಿವಾಹ ನಡೆಸುವ ಕುರಿತು ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಮುಜರಾಯಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾರ್ಚ್ ತಿಂಗಳಿಂದ ಸಪ್ತಪದಿ ಕಾರ್ಯಕ್ರಮಕ್ಕೆ ಚಾಲನೆ ನೀಡಲು ನಿರ್ಧರಿಸಲಾಯಿತು.
ಡಾ.ಬಿ.ಎಸ್. ಮಂಜುನಾಥಸ್ವಾಮಿ ಮಾತನಾಡಿ, ಸಪ್ತಪದಿ ಕಾರ್ಯಕ್ರಮದ ಕುರಿತು ಪ್ರಮುಖ ದೇವಾಲಯಗಳ ಎದುರು ಮಾಹಿತಿ ಫಲಕಗಳನ್ನು ಅಳವಡಿಸಿದರೆ ಜನರಲ್ಲಿ ಸಾಕಷ್ಟು ಜಾಗೃತಿ ಮೂಡಲಿದೆ. ಕಾರ್ಯಕ್ರಮ ನಿರಂತರವಾಗಿ ನಡೆಯಲಿರುವುದರಿಂದ ಸಾಮೂಹಿಕ ವಿವಾಹದ ಕುರಿತು ಹೆಚ್ಚು ಪ್ರಚಾರದ ಅಗತ್ಯವಿದೆ ಎಂದರು.
ಸುತ್ತೂರು ಕ್ಷೇತ್ರದಲ್ಲಿ ಪ್ರತಿ ವರ್ಷ ಸಾಮೂಹಿಕ ವಿವಾಹ ನಡೆಯಲಿದೆ ಎಂಬ ಮಾಹಿತಿ ಎಲ್ಲರಿಗೂ ಇರುತ್ತದೆ. ಸಪ್ತಪದಿ ಕಾರ್ಯಕ್ರಮ ಪ್ರತಿತಿಂಗಳು ನಡೆಯುವುದರಿಂದ ಈ ಬಗ್ಗೆ ದೇವಾಲಯಗಳ ಮುಂಭಾಗ ಹಾಗೂ ಡಿಸಿ, ಎಸಿ ಮತ್ತು ತಾಲೂಕು ಕಚೇರಿಗಳ ಮುಂದೆ ಫಲಕ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಸಪ್ತಪದಿ ಕಾರ್ಯಕ್ರಮದಡಿ ವಿವಾಹ ಮಾಡಿಕೊಳ್ಳುವವರು ಆಯಾ ತಾಲೂಕು ಕಚೇರಿಯಲ್ಲಿ ನೋಂದಾಯಿಸಿಕೊಳ್ಳಲು ಅವಕಾಶವಿದೆ. ವಿವಾಹದಲ್ಲಿ ಪಾಲ್ಗೊಳ್ಳುವ ಜೋಡಿಗಳು ತಮ್ಮ ಅಧಿಕೃತ ಮಾಹಿತಿ ಹಾಗೂ ದಾಖಲೆಗಳೊಂದಿಗೆ ಸಪ್ತಪದಿ ಕಾರ್ಯಕ್ರಮದಡಿ ವಿವಾಹಕ್ಕೆ ಅರ್ಜಿ ಸಲ್ಲಿಸಬಹುದು. ಸರಳ ಸಾಮೂಹಿಕ ವಿವಾಹದಲ್ಲಿ ಜೋಡಿಗಳೊಂದಿಗೆ ಆಗಮಿಸುವ ಸಂಬಂಧಿಕರು, ಹಿತೈಷಿಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಡೆಸಲು ತಿಳಿಸಿದರು.
ಸಭೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ತಹಶೀಲ್ದಾರ್ ಸಿ.ಜಿ.ಕೃಷ್ಣ , ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಎನ್.ಯತಿರಾಜ್ ಸಂಪತ್ ಕುಮಾರನ್, ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಎಂ.ವೆಂಕಟೇಶ್, ಜಿಲ್ಲಾ ನೋಂದಣಾಧಿಕಾರಿಗಳಾದ ವಿಜಯಲಕ್ಷ್ಮೀ ಇನಂದಾರ್ ಇದ್ದರು.
ಜಿಲ್ಲೆಯಲ್ಲಿ ಎಲ್ಲೆಲ್ಲಿ ಸಪ್ತಪದಿ ಕಾರ್ಯಕ್ರಮ? :
ಮಾರ್ಚ್‌ನಿಂದ ಜುಲೈವರೆಗೆ ಸಪ್ತಪದಿ ಸರಳ ಸಾಮೂಹಿಕ ವಿವಾಹ ನಡೆಸುವಂತೆ ಸರ್ಕಾರದಿಂದ ಸೂಚನೆ ಇದೆ. ಮಾ. 15 ರಂದು ಚಾಮುಂಡಿ ಬೆಟ್ಟ, ಏ.22 ನಂಜನ ಗೂಡು, ಮೇ 13ರಂದು ಮುಡುಕುತೊರೆ, ಜೂ. 17ರಂದು ಚಾಮುಂಡಿ ಬೆಟ್ಟ ಹಾಗೂ ಜು. 7ರಂದು ನಂಜನಗೂಡಿನಲ್ಲಿ ಸಪ್ತಪದಿ ಸರಳ ಸಾಮೂಹಿಕ ವಿವಾಹ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್. ಮಂಜುನಾಥಸ್ವಾಮಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.