ಸರಗೂರು ಪಪಂ ನೂತನ ಅಧ್ಯಕ್ಷೆ ಜ್ಯೋತಿ
Team Udayavani, Oct 5, 2018, 12:01 PM IST
ಎಚ್.ಡಿ.ಕೋಟೆ: ಸರಗೂರು ಪಟ್ಟಣ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ 12ನೇ ವಾರ್ಡ್ ಸದಸ್ಯೆ ಜ್ಯೋತಿ, ಉಪಾಧ್ಯಕ್ಷರಾಗಿ 7ನೇ ವಾರ್ಡ್ ಸದಸ್ಯೆ ಮಂಜುಳಾ ಅವಿರೋಧವಾಗಿ ಆಯ್ಕೆಯಾದರು.
ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಎರಡೂವರೆ ವರ್ಷದ 2ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಗಾದಿ ಸಾಮಾನ್ಯ ವರ್ಗ(ಮಹಿಳೆ), ಉಪಾಧ್ಯಕ್ಷ ಗಾದಿ ಪರಿಶಿಷ್ಟ ಪಂಗಡ(ಮಹಿಳೆ)ಕ್ಕೆ ಮೀಸಲಾಗಿತ್ತು. ಕಾಂಗ್ರೆಸ್ನ ಜ್ಯೋತಿ ಹಾಗೂ ಬಿಜೆಪಿಯ ಮಂಜುಳಾರನ್ನು ಹೊರತುಪಡಿಸಿ ಬೇರೆ ಯಾವ ಸದಸ್ಯರು ನಾಮಪತ್ರ ಸಲ್ಲಿಸಿರಲಿಲ್ಲ.
ಆದ್ದರಿಂದ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ತಹಶೀಲ್ದಾರ್ ಮಂಜುನಾಥ್ ಅಧ್ಯಕ್ಷ- ಉಪಾಧ್ಯಕ್ಷರ ಅವಿರೋಧ ಆಯ್ಕೆ ಘೋಷಿಸಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಐದು ವಷì ಅಧಿಕಾರದ ಅವಧಿಯಲ್ಲಿ ಎರಡೂವರೆ ವರ್ಷದ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಒಪಂದ ಮಾಡಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಸಂಸದ ಆರ್.ಧ್ರುವನಾರಾಯಣ್, ಶಾಸಕ ಅನಿಲ್ ಕುಮಾರ್, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಪದ್ಮಾವತಿ, ಮಾಜಿ ಉಪಾಧ್ಯಕ್ಷೆ ಭಾಗ್ಯಲಕ್ಷ್ಮೀ, ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಹನುಮನಾಯಕ, ಸದಸ್ಯರಾದ ಮಧುಸೂದನ್, ಮಹಮದ್ ಉಸ್ಮಾನ್, ನಾಗೇಂದ್ರಪ್ಪ, ನಾಗಯ್ಯ, ಮಂಜುಳಾ ನಾಗರಾಜ್, ರತ್ನರಂಗನಾಥ್, ರವಿಶೆಟ್ಟಿ, ಮುಖ್ಯಾಧಿಕಾರಿ ಅಶೋಕ್ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.