ಲಲಿತ ಕಲಾ ಕಾಲೇಜು ಉಳಿಸಿ
Team Udayavani, Sep 16, 2018, 11:17 AM IST
ಮೈಸೂರು: ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕ್ಷೀಣಿಸುತ್ತಿರುವುದರಿಂದ ಲಲಿತ ಕಲಾ ಕಾಲೇಜಿಗೆ ಆದ್ಯತೆ ಕಡಿಮೆಯಾಗುತ್ತಿದೆ ಎಂದು ಮೈಸೂರು ವಿಶ್ವದ್ಯಾಲಯದ ಕುಲಪತಿ ಟಿ.ಕೆ. ಉಮೇಶ್ ಆತಂಕ ವ್ಯಕ್ತಪಡಿಸಿದರು. ಮೈಸೂರು ವಿಶ್ವವಿದ್ಯಾಲಯದ ಲಲಿತ ಕಲಾ ಕಾಲೇಜು ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ನೂತನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಮೈಸೂರು ವಿವಿ ಅವಿಭಾಜ್ಯ ಅಂಗವಾಗಿರುವ ಲಲಿತ ಕಲಾ ಕಾಲೇಜು, ಕೇವಲ ಸಂಗೀತಕ್ಕೆ ಮಾತ್ರವಲ್ಲದೇ ಕಲೆ, ಸಾಹಿತ್ಯ, ನಾಟಕದ ಜತೆಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸಲು ಅವಕಾಶ ನೀಡುತ್ತಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಲಲಿತ ಕಲಾ ಕಾಲೇಜಿಗೆ ಸೇರಬೇಕಿದೆ.
ಆ ಮೂಲಕ ಕಾಲೇಜನ್ನು ಬೆಳೆಸಲು ಚಿಂತನೆ ನಡೆಸಿ, ಇದಕ್ಕಾಗಿ ಪ್ರತಿಯೊಬ್ಬರೂ ಸಹಕಾರ ನೀಡಬೇಕಿದೆ. ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪರಿಶ್ರಮದಿಂದ ಕಲಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದರು. ಕಾಲೇಜಿನ ಪ್ರಾಂಶುಪಾಲ ರಾಮಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಯಾವುದೇ ಕ್ಷೇತ್ರದಲ್ಲಾದರೂ ಯಶಸ್ಸು ಪಡೆಯಬಹುದು.
ಇದಕ್ಕಾಗಿ ನಿರ್ದಿಷ್ಟ ಗುರಿಯೊಂದಿಗೆ ಮುನ್ನಡೆಯುವ ಮೂಲಕ ಯಶಸ್ಸಿನ ಹಾದಿಯಲ್ಲಿ ಸಾಗಬೇಕಿದೆ. ಆದರೆ, ಕೇವಲ ಕಲೆಯಲ್ಲಿ ಮಾತ್ರವಲ್ಲದೆ, ಜೀವನ ನಿರ್ವಹಣೆಗೆ ಉದ್ಯೋಗವನ್ನು ಹುಡುಕಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಲಲಿತ ಕಲಾ ಕಾಲೇಜಿನ ವಿವಿಧ ವಿಭಾಗದ ಪ್ರಾಧ್ಯಾಪಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.