ಭೈರಪ್ಪ ಜತೆ ಸೆಲ್ಫೀಗೆ ಮುಗಿಬಿದ್ದ ಸಭಿಕರು
Team Udayavani, Jan 20, 2019, 7:26 AM IST
ಮೈಸೂರು: ನಗರದ ಕಲಾಮಂದಿರದಲ್ಲಿ ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಆಯೋಜಿಸಿರುವ ಭೈರಪ್ಪ ಸಾಹಿತ್ಯೋತ್ಸವ-2019 ಮೊದಲ ದಿನದ ಕಾರ್ಯಕ್ರಮ ಬಹಳ ಅಚ್ಚುಕಟ್ಟಾಗಿ ನಡೆಯಿತು. ಪ್ರತಿ ಭಾಷಣಕಾರರಿಗೆ ಮಾತನಾಡಲು ಇಂತಿಷ್ಟೇ ಸಮಯ ಎಂದು ನಿಗದಿ ಮಾಡಲಾಗಿತ್ತು. ಅದನ್ನು ಸರಿಯಾಗಿ ನಿರ್ವಹಣೆ ಮಾಡಲಾಗುತ್ತಿತ್ತು. ಶೇಖರ್ ಸೊಗಸಾಗಿ ನಿರ್ವಹಣೆ ಮಾಡಿದರು.
ಸಾಹಿತ್ಯದಲ್ಲಿ ಯುವಕರ ಆಸಕ್ತಿ ಕಡಿಮೆಯಾಗುತ್ತಿದೆ ಎಂಬುದಕ್ಕೆ ಕಲಾಮಂದಿರ ಸಾಕ್ಷಿಯಾಯಿತು. ಕಲಾಮಂದಿರ ಭರ್ತಿಯಾಗಿತ್ತು. ಸಭಿಕರಲ್ಲಿ ಮಧ್ಯವಯಸ್ಕರು ಹಾಗೂ ವೃದ್ಧರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಆದರೆ, ಯುವಕರ ಸಂಖ್ಯೆ ಬಹಳ ಕಡಿಮೆಯಿತ್ತು.
ಸೆಲ್ಫೀಗೆ ಡಿಮ್ಯಾಂಡ್: ಭೋಜನದ ಬಿಡುವಿನಲ್ಲಿ ಡಾ. ಎಸ್.ಎಲ್. ಭೈರಪ್ಪ ಅವರೊಂದಿಗೆ ಸೆಲ್ಫೀ ತೆಗೆದುಕೊಳ್ಳಲು ಸಭಿಕರು ಮುಗಿಬಿದ್ದರು. ಅವರಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿತ್ತು. ಪಿ. ಶೇಷಾದ್ರಿ ನಿರ್ದೇಶನ ಮೂಕಜ್ಜಿಯ ಕನಸುಗಳು ಚಿತ್ರದ ಟ್ರೈಲರ್ ಅನ್ನು ಅನ್ನು ಭೈರಪ್ಪ ಅವರು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.
ಮಧ್ಯಾಹ್ನ ಭೋಜನದ ಸಂದರ್ಭದಲ್ಲಿ ಸಭಿಕರಿಗೆ ಪುಳಿಯೋಗರೆ, ಮೊಸರನ್ನ, ಬಜ್ಜಿಯ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ಬೆಳಗ್ಗೆ ಮತ್ತು ಸಂಜೆ ಚಹಾ ವ್ಯವಸ್ಥೆ ಮಾಡಲಾಗಿತ್ತು. ಆಸಕ್ತ ಸಭಿಕರು ಗುಜುಗುಜು ಮಾಡದೇ ಗಂಭೀರವಾಗಿ ಕಾರ್ಯಕ್ರಮ ವೀಕ್ಷಿಸಿದರು. ಭೈರಪ್ಪನವರ ಪುಸ್ತಕಗಳ ಮಾರಾಟದ ವ್ಯವಸ್ಥೆಯನ್ನು ಸಹ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.