ಮೈಸೂರಲ್ಲೂ “ಜಾರಕಿಹೊಳಿ’ ಸಂಚಲನ; ಸಿಎಂ ಬದಲಾವಣೆ ಚರ್ಚೆ ಹಿನ್ನೆಲೆ ತೀವ್ರ ಕುತೂಹಲ
Team Udayavani, Oct 9, 2024, 6:37 AM IST
ಮೈಸೂರು: ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿಯವರು ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಗೆ ದಿಢೀರ್ ಭೇಟಿ ನೀಡಿ ಸಚಿವರು, ಸ್ಥಳೀಯ ಶಾಸಕರೊಂದಿಗೆ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಮಂಗಳವಾರ ಬೆಳಗ್ಗೆ ಮೈಸೂರಿಗೆ ಆಗಮಿಸಿದ ಅವರು ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಚ್.ಸಿ. ಮಹದೇವಪ್ಪ, ಶಾಸಕರಾದ ಕೆ. ಹರೀಶ್ ಗೌಡ, ಡಿ. ರವಿಶಂಕರ್, ಅನಿಲ್ ಚಿಕ್ಕಮಾದು, ಮುಡಾ ಅಧ್ಯಕ್ಷ ಮರಿಗೌಡ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಜತೆಗೆ ಚರ್ಚೆ ನಡೆಸಿ ಗಮನ ಸೆಳೆದರು.
ಕುತೂಹಲ ಕೆರಳಿಸಿದ ಭೇಟಿ
ದೆಹಲಿ ಪ್ರವಾಸದ ಅನಂತರ ಎಲ್ಲ ನಾಯಕರನ್ನು ಭೇಟಿ ಮಾಡುತ್ತಿರುವ ಸತೀಶ್ ಜಾರಕಿಹೊಳಿ ಮಂಗಳವಾರ ಮೈಸೂರು ಪ್ರವಾಸ ಕೈಗೊಂಡು ಹಲವರನ್ನು ಭೇಟಿಯಾಗಿದ್ದಾರೆ. ಇದಲ್ಲದೆ ಗೃಹ ಸಚಿವ ಜಿ. ಪರಮೇಶ್ವರ್ ಕೂಡ ಮೈಸೂರು ಪ್ರವಾಸ ಹಮ್ಮಿಕೊಂಡಿದ್ದು, ಮಂಗಳವಾರ ರಾತ್ರಿ ಸಚಿವ ಡಾ| ಮಹದೇವಪ್ಪ ಜತೆಗೆ ಸಭೆ ನಡೆಸುವ ಸಾಧ್ಯತೆಗಳಿದ್ದು, ಸತೀಶ್ ಜಾರಕಿಹೊಳಿ ನಡೆ ಕುತೂಹಲ ಕೆರಳಿಸಿದೆ.
ಕಾರ್ಯಕರ್ತನ ಮನೆಗೆ ಭೇಟಿ
ಮಂಗಳವಾರ ಬೆಳಗ್ಗೆ ಮೈಸೂರಿಗೆ ಆಗಮಿಸಿದ ಸತೀಶ್ ಮೈಸೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಲೋಕೇಶ್ ಪ್ರಿಯಾ ಅವರ ನಿವಾಸಕ್ಕೆ ತೆರಳಿ ಉಪಾಹಾರ ಸೇವಿಸಿದರು. ಈ ವೇಳೆ ಶಾಸಕ ಅನಿಲ್ ಚಿಕ್ಕಮಾದು ಆಗಮಿಸಿ ಸತೀಶ್ ಜತೆಗೆ ಮಾತಕತೆ ನಡೆಸಿದರು.
ಬಳಿಕ ಚಾಮರಾಜ ನಗರ ಶಾಸಕ ಕೆ. ಹರೀಶ್ ಗೌಡ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಕೆ.ಆರ್. ನಗರ ಶಾಸಕ ಡಿ. ರವಿಶಂಕರ್, ಮುಡಾ ಅಧ್ಯಕ್ಷ ಮರಿಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.