ಹಿರಿಯ ಸಾಹಿತಿ ಡಾ.ರಾಗೌ ಅವರಿಗೆ ಸನ್ಮಾನ
Team Udayavani, Nov 13, 2018, 12:34 PM IST
ಮೈಸೂರು: ಹಿರಿಯ ಸಾಹಿತಿ ಡಾ.ರಾಗೌ ಸಾಹಿತ್ಯ, ಸಂಶೋಧನೆ ಮತ್ತು ಕಾವ್ಯ ಕ್ಷೇತ್ರದಲ್ಲಿ ಡಾ.ರಾಗೌ ಖ್ಯಾತನಾಮರಾಗಿದ್ದು, 52 ವರ್ಷಗಳಿಂದ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ.ನೀಲಗಿರಿ ತಳವಾರ್ ಹೇಳಿದರು.
ನಗರದ ಶ್ರೀ ಶಿವರಾತ್ರಿ ರಾಜೇಂದ್ರ ಭವನದಲ್ಲಿ ಸಂವಹನ ಟ್ರಸ್ಟ್ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಿರಿಯ ಸಾಹಿತಿ ಡಾ.ರಾಗೌ ಅವರಿಗೆ ಸನ್ಮಾನ, ಯುವ ಬರಹಗಾರ ಡಾ.ನಂದೀಶ್ ಹಂಚೆ ಅವರಿಗೆ ಸಂವಹನ ಶಿರಿ ಪ್ರಶಸ್ತಿ ಪುರಸ್ಕೃತ ಸಮಾರಂಭದಲ್ಲಿ ಮಾತನಾಡಿದ ಅವರು, ಸಂಶೋಧನಾ ಕ್ಷೇತ್ರದಲ್ಲಿ ಮಾತ್ರವಲ್ಲದೆ ಸೃಜನಶೀಲ ಬರವಣಿಗೆಯಲ್ಲಿಯೂ ತೊಡಗಿಸಿಕೊಂಡಿದ್ದಾರೆ.
ಅಂತೆಯೇ ಯುವ ಬರಹಗಾರ ಡಾ.ನಂದೀಶ್ ಹಂಚೆ ಸಹ ಬದಲಾದ ಕಾಲಘಟಕ್ಕೆ ಅನುಗುಣವಾಗಿ ತಮ್ಮ ಜ್ಞಾನಮಟ್ಟ ಮತ್ತು ಬರವಣಿಗೆಯನ್ನು ವೃದ್ಧಿಸಿಕೊಳ್ಳುತ್ತಿದ್ದಾರೆ. ಕನ್ನಡವನ್ನು ವರ್ತಮಾನಕ್ಕೆ ಕಟ್ಟಿ ಬೆಳೆಸುವ ಶಕ್ತಿ ಅವರಲ್ಲಿದೆ ಎಂದು ಪ್ರಶಂಸಿಸಿದರು.
ಕಾರ್ಯಕ್ರಮದಲ್ಲಿ ಹೊಸಮಠದ ಚಿದಾನಂದ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪತ್ರಕರ್ತ ರವೀಂದ್ರ ಭಟ್ಟ, ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಟ್ರಸ್ಟ್ ಗೌರವಾಧ್ಯಕ್ಷ ತೋಂಟದಾರ್ಯ, ಸಂವಹನ ಟ್ರಸ್ಟ್ ಅಧ್ಯಕ್ಷ ಡಿ.ಎನ್.ಲೋಕಪ್ಪ, ಕಾರ್ಯದರ್ಶಿ ಡಿ.ನಾಗೇಂದ್ರಪ್ಪ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.