ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತ್ಯೇಕ ಪ್ರತಿಭಟನೆ
Team Udayavani, Oct 24, 2017, 12:53 PM IST
ಮೈಸೂರು: ವಿವಿಧ ಬೇಡಿಕಗಳ ಈಡೇರಿಕೆಗೆ ಒತ್ತಾಯಿಸಿ ಧರ್ಮಸಿಂಗ್ ಕಾಲೋನಿ ನಿವಾಸಿಗಳು, ಸರ್ಕಾರಿ ಶಾಲೆಗಳ ಆಯಾಗಳು, ಮೈಸೂರು ನಗರ ಮಹಿಳಾ ಮತ್ತು ಮಕ್ಕಳ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸೇವಾ ಸಮಿತಿ ಹಾಗೂ ಕೆ.ಆರ್.ಆಸ್ಪತ್ರೆ ಹೊರಗುತ್ತಿಗೆ ಕಾರ್ಮಿಕರು ಸೋಮವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದರು.
ಮನೆಗಳ ನೆಲಸಮಕ್ಕೆ ವಿರೋಧ: ನಗರದ ಧರ್ಮಸಿಂಗ್ ಕಾಲೋನಿಯ “ಬಿ’ ಬ್ಲಾಕ್ ಮನೆಗಳನ್ನು ನೆಲಸಮಗೊಳಿಸಿರುವ ಸರ್ಕಾರದ ನಿಲುವು ಖಂಡಿಸಿ ಸ್ಥಳೀಯ ನಿವಾಸಿಗಳು ಮಾಜಿ ಸಚಿವ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈಗಾಗಲೇ ವಾಸವಿರುವ 38 ಫಲಾನುಭವಿಗಳಿಗೆ ಹಣ ನೀಡಿ ಮನೆ ನಿರ್ಮಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕು ಮತ್ತು ಈ ಮನೆಗಳನ್ನು ಧ್ವಂಸಗೊಳಿಸುವ ನಿರ್ಧಾರ ಕೈಬಿಡಬೇಕೆಂದು ಒತ್ತಾಯಿಸಿ, ಜಿಲ್ಲಾಧಿಕಾರಿ ರಂದೀಪ್‌ರಿಗೆ ಮನವಿ ಸಲ್ಲಿಸಿದರು.
ಕನಿಷ್ಟ ವೇತನ ಒದಗಿಸಿ: ರಾಜ್ಯ ಸರ್ಕಾರದ ಪ್ರಾಥಮಿಕ ಶಾಲಾ ಆಯಾಗಳಿಗೆ ಕನಿಷ್ಟ ವೇತನ ನೀಡುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಆಯಾಗಳ ಸಂಘದ ಪದಾಧಿಕಾರಿಗಳು ನಗರದ ಜಿಪಂ ಕಾರ್ಯಾಲಯದ ಎದುರು ಪ್ರತಿಭಟನೆ ನಡೆಸಿದರು.
ನ್ಯಾಯಾಲಯ ನೀಡಿದ್ದ ಸಮಯ ಮುಗಿದರೂ ಶಿಕ್ಷಣ ಇಲಾಖಾಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ಸರ್ಕಾರ ಗಮನವಹಿಸಿ ಕನಿಷ್ಟ ವೇತನ ಒದಗಿಸಿಕೊಡಬೇಕೆಂದು ಒತ್ತಾಯಿಸಿದರು. ಪ್ರಾಥಮಿಕ ಶಾಲಾ ಆಯಾಗಳ ಸಂಘದ ಕಮ್ಮಲಮ್ಮ ಜೈನಾಪುರ, ಸುಶೀಲಾದೇವಿ, ಮಹೇಶ್‌ಕುಮಾರ್ ಇದ್ದರು.
ಪರಿಷ್ಕೃತ ವೇತನಕ್ಕೆ ಆಗ್ರಹ: ಪರಿಷ್ಕೃತ ವೇತನ ಜಾರಿಗೆ ಆಗ್ರಹಿಸಿ ಕೆ.ಆರ್.ಆಸ್ಪತ್ರೆ ಹೊರಗುತ್ತಿಗೆ ಕಾರ್ಮಿಕರು ಆಸ್ಪತ್ರೆ ಎದುರು ಪ್ರತಿ¸ಟನೆ ನಡೆಸಿದರು. ಮೈಸೂರು ವೈದ್ಯಕೀಯ ಕಾಲೇಜು ವ್ಯಾಪ್ತಿಯ ಚೆಲುವಾಂಬ, ಕೆಆರ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆಯಲ್ಲಿ ಅಂದಾಜು 200 ಕಾರ್ಮಿಕರು,
-ಆಯಾ, ನಾನ್ ಕ್ಲಿನಿಕಲ್, ಭದ್ರತಾ ಸಿಬ್ಬಂದಿ ಹಾಗೂ ಸ್ವತ್ಛತಾ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಇವರಿಗೆ ವೇತನ ಪರಿಷ್ಕರಿಸಿ ರಾಜ್ಯ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದ್ದರೂ, ಅದನ್ನು ಜಾರಿಗೊಳಿಸದೆ, ಹಳೆ ವೇತನವನ್ನೇ ನೀಡಲಾಗುತ್ತಿದೆ ಎಂದು ದೂರಿದರು.
ಅಂಗವಿಕಲರಿಗೆ ಮನೆ ನೀಡಿ: ಅಂಗವಿಕಲ ಫಲಾನುಭವಿಗಳಿಗೆ ಮನೆ ಕೊಡಿಸುವಂತೆ ಒತ್ತಾಯಿಸಿ ಮೈಸೂರು ನಗರ ಮಹಿಳಾ ಮತ್ತು ಮಕ್ಕಳ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸೇವಾ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಅಂಗವಿಕಲರ ಬಗ್ಗೆ ವಿಶೇಷ ಕಾಳಜಿಯನ್ನು ತೋರುವ ಜಿಲ್ಲಾಧಿಕಾರಿಗಳು ಕೂಡಲೆ ನಾಲ್ವರು ಫಲಾನುಭವಿಗಳಿಗೆ ಸೂರು ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದರು. ಸಮಿತಿ ಪದಾಧಿಕಾರಿಗಳಾದ ಯೂಸೆಫ್ ಮಿಜಾì, ಇಲಿಯಾಸ್ ಉಲ್ಲಾ ಬೇಗ್, ಇಮ್ರಾನ್, ವಜೀರ್ ಉಲ್ಲಾ ಷರೀಪ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.