ಸರಣಿ ಅಪಘಾತ: ಮೂವರಿಗೆ ಗಾಯ
Team Udayavani, Dec 13, 2018, 4:44 PM IST
ಗುಂಡ್ಲುಪೇಟೆ: ತಾಲೂಕಿನ ಬೆಂಡಗಳ್ಳಿ ಗೇಟ್ ಬಳಿ ಸಾಗುತ್ತಿದ್ದ ವಾಹನಗಳ ಸರಣಿ ಅಪಘಾತ ದಲ್ಲಿ ಮೂವರು ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೈಸೂರಿನಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ಸುಣ್ಣದ ತಿಳಿಯ ಮೂಟೆಗಳನ್ನು ತುಂಬಿದ ಟಾಟಾ ಏಸ್ ವಾಹನ ಎದುರು ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ. ಇದರಿಂದ ಲಾರಿಯು ರಸ್ತೆ ಬದಿಗೆ ಸರಿದು ಮಾರ್ಗದಲ್ಲಿ ಸಾಗುತ್ತಿದ್ದ ಇನ್ನೆರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ.
ಈ ಸರಣಿ ಅಪಘಾತದಿಂದ ಮೂವರು ಗಾಯ ಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯ ದಿಂದ ಪಾರಾಗಿದ್ದಾರೆ. ಈ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು ಘಟನೆಯಲ್ಲಿ ಟಾಟಾ ಏಸ್ ವಾಹನ ಮತ್ತು ಕಾರಿನಲ್ಲಿದ್ದ ಇಬ್ಬರು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಘಟನಾ ಸ್ಥಳಕ್ಕೆ ಬೇಗೂರು ಪೊಲೀಸರು ಭೇಟಿ ನೀಡಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿ ಕೊಟ್ಟರು. ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
MUST WATCH
ಹೊಸ ಸೇರ್ಪಡೆ
Bengaluru: ನಾಯಿ ಕಚ್ಚಿ 4 ವರ್ಷದ ಬಾಲಕನಿಗೆ ಗಾಯ: ಶ್ವಾನ ಮಾಲಿಕನ ವಿರುದ್ಧ ಪ್ರಕರಣ ದಾಖಲು
chikkamagaluru: ಹೆಬ್ಬಾಳ್ಕರ್ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ
Bengaluru: ಜಗಳ ಬಿಡಿಸಲು ಬಂದ ಮಾವನ ಕೊಂದ ಅಳಿಯ!
Bengaluru: ಬಿಯರ್ ಬಾಟಲಿ ಕಸಿದಿದ್ದಕ್ಕೆ ಸ್ನೇಹಿತನ ಹತ್ಯೆ; 7 ಜನ ಸೆರೆ
Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.