ನಷ್ಟದಲ್ಲಿರುವ ಶ್ರೀರಾಮ ಕಾರ್ಖಾನೆ ಪುನಾರಂಭ

Team Udayavani, Dec 9, 2018, 11:49 AM IST

m2-nashta.jpg

ಮೈಸೂರು: ಸತತ ನಷ್ಟದ ಕಾರಣದಿಂದ ಸ್ಥಗಿತಗೊಂಡಿರುವ ಕೆ.ಆರ್‌.ನಗರ ತಾಲೂಕು ಚುಂಚನಕಟ್ಟೆಯ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಪುನಾರಂಭಿಸಲು ಸದ್ಯದಲ್ಲಿಯೇ ಟೆಂಡರ್‌ ಕರೆಯಲಾಗುವುದು ಎಂದು ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ. ಮಹೇಶ್‌ ತಿಳಿಸಿದರು.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಪುನಾರಂಭ ಸಂಬಂಧ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸಹಕಾರ ಇಲಾಖೆಯಲ್ಲಿ ಹೆಗ್ಗಣಗಳು ಸೇರಿಕೊಂಡಿರುವುದರಿಂದ ಸಹಕಾರ ಸಕ್ಕರೆ ಕಾರ್ಖಾನೆಗಳು ಪುನರುಜ್ಜೀವನವಾಗುತ್ತಿಲ್ಲ.

ಮಂಡ್ಯದ ಮೈಷುಗರ್‌ ಸಕ್ಕರೆ ಕಾರ್ಖಾನೆ, ಪಾಂಡವಪುರದ ಪಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯದ್ದೂ ಇದೇ ಕತೆಯಾಗಿದೆ. ಹೀಗಾಗಿ ರೈತರ ಹಿತದೃಷ್ಟಿಯಿಂದ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಅವಧಿಗೆ ಗುತ್ತಿಗೆಗೆ ನೀಡಲು ನಿರ್ಧರಿಸಲಾಗಿದೆ ಎಂದರು.

ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ದುಡಿಯುತ್ತಿದ್ದ 215 ಮಂದಿ ಈಗ ನಿವೃತ್ತರಾಗಿದ್ದಾರೆ. ಕಾರ್ಖಾನೆಗೆ ಕಬ್ಬು ಪೂರೈಸಿದ್ದ ಬೆಳೆಗಾರರಿಗೆ ಬರಬೇಕಾಗಿದ್ದ ಬಾಕಿ ಹಣದಲ್ಲಿ 3.5 ಕೋಟಿ ರೂ. ಪಾವತಿಸಲಾಗಿದೆ. ಸರ್ಕಾರವೇ ಕಾರ್ಖಾನೆ ನಡೆಸಿದಲ್ಲಿ ರೈತರಿಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ.

ಹೀಗಾಗಿ ಖಾಸಗಿಯವರಿಗೆ ಗುತ್ತಿಗೆ ನೀಡಲು ನಿರ್ಧರಿಸಲಾಗಿದೆ. 1250 ಟನ್‌ ಕಬ್ಬು ಅರೆಯುವ ಸಾಮರ್ಥಯವನ್ನು ಹೊಂದಿರುವ ಈ ಕಾರ್ಖಾನೆ ವ್ಯಾಪ್ತಿಗೆ ಕೆ.ಆರ್‌.ನಗರ, ಹುಣಸೂರು, ಪಿರಿಯಾಪಟ್ಟಣ ಹಾಗೂ ಎಚ್‌.ಡಿ. ಕೋಟೆ ತಾಲೂಕುಗಳು ಬರುತ್ತದೆ ಎಂದು ಸಚಿವರು ಹೇಳಿದರು. ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌, ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. 

ಟಾಪ್ ನ್ಯೂಸ್

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.