Mysore; ಬಸವ ಜಯಂತಿಯಂದೇ ಮೊದಲ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದೆ: ಸಿದ್ದರಾಮಯ್ಯ


Team Udayavani, Oct 7, 2023, 3:33 PM IST

Mysore; ಬಸವ ಜಯಂತಿಯಂದೇ ಮೊದಲ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದೆ: ಸಿದ್ದರಾಮಯ್ಯ

ಮೈಸೂರು: ಒಬ್ಬರ ತಲೆ ಮೇಲೆ ಒಬ್ಬರು ಕೂರುವ ವ್ಯವಸ್ಥೆ ಅಳಿಸಿ-ಒಬ್ಬರ ಪಕ್ಕ ಒಬ್ಬರು ಕೂರುವ ಸಮಾಜ ನಿರ್ಮಾಣ ಬಸವಾದಿ ಶರಣರ ಆಶಯವಾಗಿತ್ತು. ಇದು ನನ್ನ ಆಶಯವೂ ಹೌದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ-ಲಿಂಗಾಯತ ಸಂಘ ಸಂಸ್ಥೆಗಳು ಹಾಗೂ ಮೈಸೂರಿನ ಬಸವ ಬಳಗಗಳ ಒಕ್ಕೂಟ ಮೈಸೂರು ಕಲಾಮಂದಿರದಲ್ಲಿ ಆಯೋಜಿಸಿದ್ದ ಬಸವ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

ಬಸವಾದಿ ಶರಣರು ಮೇಲ್ವರ್ಗದವರ ಪರವಾಗಿ ಕೆಲಸ ಮಾಡಲಿಲ್ಲ. ಶೂದ್ರ ಸಮುದಾಯಗಳಲ್ಲಿ ಜಾಗೃತಿ ಮೂಡಿಸಿದರು. ತಳ ಸಮುದಾಯದ ಅಲ್ಲಮಪ್ರಭು ಅನುಭವ ಮಂಟಪದ ಅಧ್ಯಕ್ಷರಾಗಿದ್ದರು. ಹೀಗಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು 12 ನೇ ಶತಮಾನದಲ್ಲೇ ಜಾರಿಗೆ ತಂದವರು ಬಸವಾದಿ ಶರಣರು. ಆ ಕಾಲದಲ್ಲೇ ಅಂತರ್ಜಾತಿ ವಿವಾಹ ಮಾಡಿಸಿದವರು ಬಸವಣ್ಣ. ಈ ಕಾರಣಕ್ಕೆ ಬಸವಣ್ಣನವರ ವಿರುದ್ಧ ಬಿಜ್ಜಳನನ್ನು ಎತ್ತಿಕಟ್ಟಿದರು ಎಂದು ವಿವರಿಸಿದರು.

12ನೇ ಶತಮಾನದ ಶರಣರ ಆಶಯಗಳು ಇನ್ನೂ ಈಡೇರಿಲ್ಲ. ಸ್ವಾತಂತ್ರ್ಯ ಬಂದು 76 ವರ್ಷಗಳ ನಂತರವೂ ಪ್ರಜಾಪ್ರಭುತ್ವದ, ಸಂವಿಧಾನದ ಆಶಯಗಳು ಈಡೇರಿಲ್ಲ. ಅಸಮಾನತೆ ಹೋಗಿಲ್ಲ. ಈ ಬಗ್ಗೆ ಬಾಬಾಸಾಹೇಬ್ ಅಂಬೇಡ್ಕರ್ ಸಂವಿಧಾನ ಜಾರಿ ಸಂದರ್ಭದಲ್ಲೇ ಎಚ್ಚರಿಸಿದ್ದರು. ಅಂಬೇಡ್ಕರ್ ಅವರು ಕೊಟ್ಟ ಎಚ್ಚರಿಕೆಯನ್ನೇ 12ನೇ ಶತಮಾನದಲ್ಲೇ ಬಸವಣ್ಣ ಮತ್ತು ಬಸವಾದಿ ಶರಣರು ಕೊಟ್ಟಿದ್ದರು ಎಂದು ನುಡಿದರು.

ಇದನ್ನೂ ಓದಿ:Asian Games ಕಬಡ್ಡಿ ಫೈನಲ್ ನಲ್ಲಿ ಹೈಡ್ರಾಮಾ; ಸ್ವರ್ಣ ಗೆದ್ದ ಭಾರತದ ಪುರುಷರ ತಂಡ

ಜನರ ಭಾಷೆಯಲ್ಲೇ ಸಾಹಿತ್ಯ ರಚಸಿದ್ದು ಬಸವಾದಿ ಶರಣರು ಮಾಡಿದ ಬಹಳ ದೊಡ್ಡ ಕ್ರಾಂತಿ. ಸಂಸ್ಕೃತದಲ್ಲಿ ಸಾಹಿತ್ಯ ರಚಿಸಿದರೆ ಜನರಿಗೆ ಅರ್ಥ ಆಗುತ್ತದಾ? ಯಾರಿಗೂ ಅರ್ಥ ಆಗುವುದಿಲ್ಲ ಎನ್ನುವ ಕಾರಣಕ್ಕೇ ಜನರ ಭಾಷೆಯಲ್ಲಿ ಅತ್ಯುನ್ನತ ಕನ್ನಡದಲ್ಲಿ ಶರಣ ಸಾಹಿತ್ಯ ರಚನೆಯಾಯಿತು ಎಂದರು.

ಬಸವಾದಿ ಶರಣರು 12ನೇ ಶತಮಾನದಲ್ಲೇ ಜಡ್ಡುಗಟ್ಟಿದ ಜಾತಿ ಸಮಾಜಕ್ಕೆ ಚಲನೆ ನೀಡಿದರು. ಜಾತಿ ರಹಿತ ಸಮಾಜ, ಮೌಡ್ಯಗಳನ್ನು ಕಿತ್ತೆಸೆದು ಕಂದಾಚಾರಗಳಿಲ್ಲದ ಸಮಾಜ ನಿರ್ಮಾಣಕ್ಕೆ ಮುಂದಾದರು.  ಸಮಾಜ ಜಾತಿ ಆಧಾರದಲ್ಲಿ ವಿಭಜನೆ ಆಗಬಾರದು. ಕುವೆಂಪು ಅವರು, “ಹುಟ್ಟುತ್ತಾ ಎಲ್ಲರೂ ವಿಶ್ವ ಮಾನವರು. ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ” ಎಂದಿದ್ದರು. ನಾವು ಹಾಗಾಗಬಾರದು. ಶ್ರೇಣೀಕೃತ ಸಮಾಜ ಹೋಗಬೇಕು. ಸಮನಾಂತರ ಸಮಾಜ ಬರಬೇಕು ಎನ್ನುವುದು ಬಸವಣ್ಣನವರ ಆಶಯವಾಗಿತ್ತು ಎಂದರು.

ವೀರಶೈವ-ಲಿಂಗಾಯತ ಸಮುದಾಯ ಈ ಕಾರ್ಯಕ್ರಮದಲ್ಲಿ ಮುಂದಿಟ್ಟಿರುವ ಬೇಡಿಕೆಗಳನ್ನು ಮುಂದಿನ ಬಜೆಟ್ ನಲ್ಲಿ ಗಣನೀಯವಾಗಿ ಪರಿಗಣಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಣ್ಯ ಮತ್ತು ಪರಿಸರ ಸಚಿವ ಬಿ.ಈಶ್ವರ ಖಂಡ್ರೆ ಅವರು ವಹಿಸಿದ್ದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರು “12ನೇ ಶತಮಾನದ ಶರಣ ದಂಪತಿಗಳು” ಕೃತಿಯನ್ನು ಬಿಡುಗಡೆ ಮಾಡಿದರು. ಬಸವೇಶ್ವರ ಪುತ್ಥಳಿ ದಾನ ಮಾಡಿದ ನೈಸ್ ಸಂಸ್ಥೆಯ ಮುಖ್ಯಸ್ಥರಾದ ಅಶೋಕ್ ಖೇಣಿ, ಶಾಸಕರುಗಳಾದ ಮಾಜಿ ಸಚಿವ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ್, ಜಿ.ಡಿ.ಹರೀಶ್ ಗೌಡ, ಹೆಚ್.ಎಂ.ಗಣೇಶ್ ಪ್ರಸಾದ್, ಟಿ.ಎಸ್.ಶ್ರೀವತ್ಸ, ವೊಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಡಿ.ತಿಮ್ಮಯ್ಯ ಸೇರಿ ಮಾಜಿ ಶಾಸಕರು ಹಾಗೂ ನಾಯಕರುಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

JDS

By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

Prathap-Simha

Waqf Property: ವಕ್ಫ್ ಆಸ್ತಿ ಅಕ್ಬರ್, ಔರಂಗಜೇಬ್‌ ಬಿಟ್ಟುಹೋದ ಆಸ್ತಿಯಾ?: ಪ್ರತಾಪ್‌ ಸಿಂಹ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.