ಸಿದ್ದರಾಮಯ್ಯಗೆ ಅಧಿಕಾರ ಕಳೆದುಕೊಳ್ಳುವ ಭಯ
Team Udayavani, Feb 2, 2018, 11:48 AM IST
ಮೈಸೂರು: ಅಧಿಕಾರ ಕಳೆದುಕೊಳ್ಳುವ ಭಯದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಭಜನೆ ಹಾಗೂ ವಿಷಯಾಂತರದ ರಾಜಕಾರಣ ಮಾಡುತ್ತಿದ್ದಾರೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದರು.
ನಗರದಲ್ಲಿ ಗುರುವಾರ ನಡೆದ ನಗರ ಬಿಜೆಪಿ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದರು. ಸಿಎಂ ಸಿದ್ದರಾಮಯ್ಯ ನಿಜವಾಗಿಯೂ ಐದು ವರ್ಷಗಳ ಆಡಳಿತದಲ್ಲಿ ಸಾಧನೆ ಮಾಡಿದ್ದರೆ, ಆತ್ಮವಿಶ್ವಾಸದಿಂದ ಚುನಾವಣೆ ಎದುರಿಸುತ್ತಿದ್ದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖದಲ್ಲಿ ಅಧಿಕಾರ ಕಳೆದುಕೊಳ್ಳುವ ಭಯ ಆವರಿಸಿದೆ.
ಇದರ ಪರಿಣಾಮ ಜಾತಿ, ಧರ್ಮ, ಕನ್ನಡ ಬಾವುಟದ ವಿಭಜನೆ ಕೈಗೊಂಡು ಈಗ ಜಾತಿಯೊಳಗೆ ಒಳಜಾತಿಯನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಆ ಮೂಲಕ ವಿಭಜನೆಯ ರಾಜಕಾರಣವನ್ನೇ ಸಿದ್ಧಾಂತ ಮಾಡಿಕೊಂಡಿರುವ ಸಿದ್ದರಾಮಯ್ಯ ಅವರು ಜಿನ್ನಾ ವಾರಸುದಾರರೇ ಹೊರತು, ಗಾಂಧಿ ವಾರಸುದಾರರಾಗಲು ಸಾಧ್ಯವಿಲ್ಲ ಎಂದು ಟೀಕಿಸಿದರು.
ಕೌರವರ ಸರ್ಕಾರ: ಸಿಎಂ ಸಿದ್ದರಾಮಯ್ಯ ಹೇಳುವಂತೆ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕುರುಕ್ಷೇತ್ರ ನಡೆಯಲಿದ್ದು, ಕಾಂಗ್ರೆಸ್ಸಿಗರು ಪಾಂಡವರು ಹಾಗೂ ಬಿಜೆಪಿ ಅವರು ಕೌರವರು ಎಂದಿದ್ದಾರೆ. ರಾಜ್ಯದಲ್ಲಿ ರೈತರ ಆತ್ಮಹತ್ಯೆ, ಅತ್ಯಾಚಾರ ಪ್ರಕರಣಗಳ ಜತೆಗೆ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಕರ್ನಾಟಕವಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ಪಾಂಡವರ ರಾಜ್ಯವಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಈ ಬಾರಿಯ ಚುನಾವಣೆ ಸೈದ್ಧಾಂತಿಕ ಹೋರಾಟವಾಗಿದ್ದು, ಅಧಿಕಾರ, ಜಾತಿ, ಕುಟುಂಬ ರಾಜಕಾರಣದಲ್ಲಿ ಎಲ್ಲಾ ಪಕ್ಷಗಳು ನಡೆಯುತ್ತಿದ್ದರೆ, ರಾಷ್ಟ್ರಪ್ರೇಮದ ಅಜೆಂಡಾದಲ್ಲಿ ಬಿಜೆಪಿ ನಡೆಯುತ್ತಿದೆ ಎಂದರು. ಸಿದ್ಧರಾಮಯ್ಯ ಯಾವುದೇ ಶಾಶ್ವತ ಯೋಜನೆಗಳನ್ನು ಜಾರಿಗೊಳಿಸದಿದ್ದರೂ 2.54 ಸಾವಿರ ಕೋಟಿ ರೂ. ಸಾಲ ಮಾಡಿದ್ದಾರೆಂದು ಟೀಕಿಸಿದರು.
ಸಿಎಂ ಶಕ್ತಿ ಕುಸಿಯುತ್ತಿದೆ: ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಎಚ್.ಮಂಜುನಾಥ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಕ್ತಿ ದಿನದಿಂದ ದಿನಕ್ಕೆ ಮೈಸೂರಿನಲ್ಲೇ ಕಡಿಮೆಯಾಗುತ್ತಿದೆ. ಪಾಲಿಕೆ ಆಡಳಿತದ ಚುಕ್ಕಾಣಿ ಹಿಡಿಯಲು ಏನೆಲ್ಲಾ ಹುನ್ನಾರ ನಡೆಸಿದರೂ, ಜೆಡಿಎಸ್-ಬಿಜೆಪಿ ಮೈತ್ರಿಯೊಂದಿಗೆ ಪಾಲಿಕೆ ಅಧಿಕಾರಕ್ಕೇರಿದೆ.
ಜ.25ರಂದು ನಡೆದ ಪರಿವರ್ತನಾ ಯಾತ್ರೆ ಸಮಾವೇಶವನ್ನು ಹಾಳು ಮಾಡಲು ರಾಜ್ಯ ಸರ್ಕಾರ ಸಾಕಷ್ಟು ಪ್ರಯತ್ನ ಮಾಡಿದರೂ, ಇಲ್ಲಿನ ಕಾರ್ಯಕರ್ತರು ಸಮಾವೇಶವನ್ನು ಯಶಸ್ವಿಗೊಳಿಸಿದರು. ಹೀಗಾಗಿ ಫೆ.4ರಂದು ಬೆಂಗಳೂರಿನಲ್ಲಿ ನಡೆಯುವ ಮತ್ತೂಂದು ಸಮಾವೇಶವನ್ನು ಯಶಸ್ಸುಗೊಳಿಸುವಲ್ಲಿ ಮೈಸೂರಿನವರ ಪಾತ್ರವು ಪ್ರಮುಖವಾಗಿರಲಿದೆ
. ಇದಕ್ಕಾಗಿ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದರು. ಮಾಜಿ ಸಚಿವ ಎಸ್.ಎ.ರಾಮದಾಸ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಎಚ್.ವಿ.ರಾಜೀವ್, ನಂದೀಶ್‌ಪ್ರೀತಂ, ಸತೀಶ್, ಎಲ್.ನಾಗೇಂದ್ರ, ಸಂಘಟನಾ ಕಾರ್ಯದರ್ಶಿ ಸುರೇಶ್‌ಬಾಬು, ಸಿ.ಬಸವೇಗೌಡ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್
Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ
ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.