ಸಿದ್ದರಾಮಯ್ಯ ಕಾಂಗ್ರೆಸ್‌ನ ಕೊನೆ ಸಿಎಂ
Team Udayavani, Mar 7, 2018, 2:15 PM IST
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ, ಗೆದ್ದುಬರಲಿ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಹಿರಂಗ ಸವಾಲು ಹಾಕಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಹೋದ ಕಡೆಯಲ್ಲೆಲ್ಲಾ ಬಿಜೆಪಿ ಗೆದ್ದಿದೆ.
ಹೀಗಾಗಿ ರಾಹುಲ್ ಗಾಂಧಿಯನ್ನು ದಯವಿಟ್ಟು ಮೈಸೂರಿಗೂ ಕರೆದುಕೊಂಡು ಬನ್ನಿ. ನೀವೂ ಕೂಡ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ, ತಾಕತ್ತಿದ್ದರೆ ಅಲ್ಲಿಂದ ಗೆದ್ದು ಬನ್ನಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಗೆಲ್ಲುವ ಮೂಲಕ ದೇಶವನ್ನು ಕಾಂಗ್ರೆಸ್ ಮುಕ್ತ ಭಾರತ ಮಾಡಲಿದ್ದು, ಸಿದ್ದರಾಮಯ್ಯ ಅವರೇ ಕಾಂಗ್ರೆಸ್ ಪಕ್ಷದ ಕಡೆಯ ಮುಖ್ಯಮಂತ್ರಿ ಎಂದು ಟೀಕಿಸಿದರು.
ಸಾಬೀತು ಮಾಡೋದೇನಿದೆ: ಸಿದ್ದರಾಮಯ್ಯ ಅವರ ಭ್ರಷ್ಟಾಚಾರದ ಬಗ್ಗೆ ಬಹಿರಂಗ ಚರ್ಚೆಯಲ್ಲಿ ಸಾಬೀತು ಮಾಡೋದು ಇನ್ನೇನಿದೆ, ಅವರ ಬಗ್ಗೆ ಈಗಾಗಲೇ ಚಾರ್ಜ್‌ಶೀಟ್ ಬಿಡುಗಡೆ ಮಾಡಲಾಗಿದೆ. ಇನ್ನೂ ಒಂದು ಚಾರ್ಜ್‌ಶೀಟ್ ಪ್ರಿಂಟ್ ಮಾಡಿ ಬಿಡುಗಡೆ ಮಾಡಲಿದ್ದು, ನಿಮ್ಮಂತಹ ಭ್ರಷ್ಟರ ಬಗ್ಗೆ ಸಾಬೀತು ಮಾಡೋದು ಏನಿದೆ, ಸಿದ್ದರಾಮಯ್ಯ ಇನ್ನು 60 ದಿನ ಮಾತ್ರ ಮಾತನಾಡಲಿದ್ದು, ಬಳಿಕ ಮಾತನಾಡುವುದಕ್ಕೆ ಅವರಿಗೆ ಅಧಿಕಾರವೇ ಇರುವುದಿಲ್ಲ ಎಂದರು.
ಬಹಿರಂಗ ಚರ್ಚೆಗೆ ಬರಲ್ಲ: ಕಾಂಗ್ರೆಸ್ ಸರ್ಕಾರ ಇಡೀ ರಾಜ್ಯವನ್ನು ಲೂಟಿ, ಹಗಲು ದರೋಡೆ ಮಾಡಿದ್ದು, ಭ್ರಷ್ಟಾಚಾರ ನಡೆಸಿರುವ ಮುಖ್ಯಮಂತ್ರಿ ಅವರೊಂದಿಗೆ ಎಂಥಾ ಬಹಿರಂಗ ಚರ್ಚೆ. ಇಂತವರೊಂದಿಗೆ ಏನು ಬಹಿರಂಗ ಚರ್ಚೆ ಮಾಡಲಿ?, ನಿನ್ನ ಸಮಯ ಮುಗಿದಿದ್ದು, ನಿನ್ನ ಪಾಪದ ಕೊಡ ತುಂಬಿದೆ. ಜನರೇ ಇವನಿಗೆ ಬುದ್ಧಿ ಕಲಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ಧಾಳಿ ನಡೆಸಿದ ಯಡಿಯೂರಪ್ಪ, ಸಿಎಂ ಜತೆ ಬಹಿರಂಗ ಚರ್ಚೆಗೆ ಬರುವುದಿಲ್ಲ ಎಂದು ಬಿಜೆಪಿಯವರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ ಸಿಎಂ ಹೇಳಿಕೆಗೆ ತಿರುಗೇಟು ನೀಡಿದರು.
ಭ್ರಷ್ಟರಿಗೆ ಮಾತ್ರ ಸ್ಥಾನ: ಕಾಂಗ್ರೆಸ್‌ನಲ್ಲಿ ಕೇವಲ ಹಗಲು ದರೋಡೆ ಮಾಡುವವರು, ಲೂಟಿಕೋರರಿಗೆ ಮಾತ್ರ ಸ್ಥಾನ ಎಂಬುದು ಅಶೋಕ್ ಖೇಣಿ ಸೇರ್ಪಡೆಯಿಂದ ಸಾಬೀತಾಗಿದೆ. ಸಾವಿರಾರು ಕೋಟಿ ಲೂಟಿ ಹೊಡೆದ ಭ್ರಷ್ಟರನ್ನು ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಸೇರಿಸಿಕೊಂಡಿದ್ದು, ಬಳ್ಳಾರಿಯಲ್ಲಿ ಜೈಲಿಗೆ ಹೋಗಿ ಬಂದವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದೀರಾ. ನಿಮ್ಮ ಪಕ್ಷದಲ್ಲಿ ಭ್ರಷ್ಟರಿಗೆ ಮಾತ್ರ ಸ್ಥಾನ ಎಂಬುದು ಗೊತ್ತಾಗಿದೆ ಎಂದು ಕಿಡಿಕಾರಿದರು. ಮಾತುಕತೆ ಆಗಿಲ್ಲ: ನಟ ಉಪೇಂದ್ರ ಅವರು ಬಿಜೆಪಿ ಸೇರ್ಪಡೆ ಬಗ್ಗೆ ನನಗೆ ಗೊತ್ತಿಲ್ಲ, ಈ ಕುರಿತು ಯಾವುದೇ ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
ಹೊಸಮಠಕ್ಕೆ ಬಿಎಸ್‌ವೈ ಭೇಟಿ: ಹಳೇ ಮೈಸೂರು ಭಾಗದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗಿಗೆ ಧ್ವನಿಗೂಡಿಸಿದ್ದ ಹೊಸಮಠದ ಚಿದಾನಂದ ಸ್ವಾಮೀಜಿಯವರನ್ನು ಭೇಟಿ ಮಾಡಿದ ಯಡಿಯೂರಪ್ಪ ಕೆಲ ಕಾಲ ಮಾತುಕತೆ ನಡೆಸಿದರು. ಮಂಗಳವಾರ ಬೆಳಗ್ಗೆ ನಗರದ ಖೀಲ್ಲೆ ಮೊಹಲ್ಲಾದಲ್ಲಿರುವ ಹೊಸಮಠಕ್ಕೆ ತೆರಳಿದ ಯಡಿಯೂರಪ್ಪ, ಮಠದಲ್ಲೇ ಉಪಹಾರ ಸೇವಿಸಿ, ಚಿದಾನಂದ ಸ್ವಾಮಿಗಳೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಜಾತಿಯ ವಿಷಬೀಜ ಬಿತ್ತುತ್ತಿದ್ದು, ಧರ್ಮವನ್ನು ಒಡೆಯುವ ಸಿದ್ದರಾಮಯ್ಯ ಸರ್ಕಾರಕ್ಕೆ ತಕ್ಕಪಾಠ ಕಲಿಸುತ್ತೇವೆ. ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಲು ಆಶೀರ್ವಾದ ಪಡೆಯುವ ಉದ್ದೇಶದಿಂದ ಮಠಕ್ಕೆ ಭೇಟಿ ನೀಡಿದ್ದು, ಶ್ರೀಗಳ ಆಶೀರ್ವಾದ ಪಡೆದಿದ್ದೇನೆ. ತಾವು ರಾಜಾದ್ಯಂತ ಪ್ರವಾಸ ಮಾಡಿದ್ದು, ಎಲ್ಲಾ ವೀರಶೈವ-ಲಿಂಗಾಯತರು ಒಗ್ಗಟಾಗಿದ್ದಾರೆ ಎಂದರು.
ರಾಜಕಾರಣದಲ್ಲಿ ಬೆಳೆಸಿದ ದೇವೆಗೌಡರಿಗೇ ಮೋಸ ಮಾಡಿರುವ ಸಿದ್ದರಾಮಯ್ಯ ಅವರಿಗೆ ಸೋಲಿನ ರುಚಿ ತೋರಿಸುತ್ತೇವೆ. ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲ ಅಭ್ಯರ್ಥಿ ಹಾಕುತ್ತೇವೆ. ಮುಂದಿನ ದಿನಗಳಲ್ಲಿ ಈ ಮೋಸದಾಟಕ್ಕೆ ಜನತೆ ತಕ್ಕ ಉತ್ತರ ನೀಡುತ್ತಾರೆ.
-ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜಾಧ್ಯಕ್ಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.