ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ
ದಾವಣಗೆರೆ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ಅಮಾನತಿಗೆ ಆದೇಶ
Team Udayavani, May 25, 2024, 12:34 PM IST
ಮೈಸೂರು: ಪೆನ್ ಡ್ರೈವ್ ಪ್ರಕರಣದಲ್ಲಿ ರಾಕೇಶ್ ಸಿದ್ದರಾಮಯ್ಯ ವಿಚಾರದ ತೆಗೆದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. “ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ. ಈಗ ಆ ವಿಚಾರವನ್ನು ಇನ್ನು ಯಾವುದಕ್ಕೋ ಲಿಂಕ್ ಮಾಡಿ ಮಾತನಾಡುವುದು ಮುರ್ಖತನ. ಅವರ ಮಗ ರೇಪ್ ಮಾಡಿ ಓಡಿ ಹೋಗಿರುವುದು. ಅದಕ್ಕೂ 2016ರಲ್ಲಿ ಸತ್ತು ಹೋದ ರಾಕೇಶ್ ವಿಚಾರಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಕೇಂದ್ರಕ್ಕೆ ತಡವಾಗಿ ಪತ್ರ ಬಂತು ಎಂಬ ಕೇಂದ್ರ ಸಚಿವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಇದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಅಷ್ಟೇ. ನಾನು 15 ದಿನಗಳ ಹಿಂದೆಯೇ ಪತ್ರ ಬರೆದಿದ್ದೇನೆ. ಪತ್ರ ಬರೆದರೂ ನನಗೆ ಉತ್ತರ ಬಂದಿಲ್ಲ. ಒಂದು ವೇಳೆ ನಾನು ಪತ್ರ ಬರೆದದ್ದು ತಡವೇ ಅಂದುಕೊಳ್ಳಿ ಈಗ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಹೇಳಿ. ಸುಮ್ಮನೆ ಕಾಲ ಕಳೆಯುವುದನ್ನು ಬಿಡಬೇಕು ಎಂದರು.
ರೇಪ್ ಗಿಂತ ಅದರ ವಿಡಿಯೋ ಹಂಚಿದ್ದು ದೊಡ್ಡ ಅಫರಾದ ಎಂಬ ಎಚ್ ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ಸಿಎಂ, ಅತ್ಯಾಚಾರಕ್ಕಿಂತ ವಿಡಿಯೋ ಹಂಚಿದ್ದು ದೊಡ್ಡ ಅಫರಾದ ಎಂದು ಯಾವ ಕಾನೂನುನಿಲ್ಲಿದೆ ಹೇಳಿ. ಕುಮಾರಸ್ವಾಮಿ ಏನಾದರೂ ಸೆಕ್ಷನ್ ಹೇಳಿದ್ದರಾ. ಅದು ಭಾರತೀಯ ದಂಡ ಸಂಹಿತೆಯಲ್ಲಿದೆಯಾ. ಅಥವಾ ಇವರೇ ಬರೆದುಕೊಂಡ ಕಾನೂನಿನಲ್ಲಿ ಇದೆಯಾ ಹೇಳಿ? ನಾನು ಹಾಗಂತ ವಿಡಿಯೋ ವಿತರಣೆ ಸಮರ್ಥನೆ ಮಾಡುತ್ತಿಲ್ಲ. ಆದರೆ ಅತ್ಯಾಚಾರಕ್ಕಿಂತ ವಿಡಿಯೋ ಹಂಚಿದ್ದು ಮಹಾ ಅಪರಾಧ ಎನ್ನುವುದು ಸರಿಯಲ್ಲ ಎಂದರು.
ದಾವಣಗೆರೆ ಪ್ರಕರಣ- ಪೊಲೀಸ್ ಅಧಿಕಾರಿ ಅಮಾನತು
ದಾವಣಗೆರೆ ಯುವಕನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಅದು ಲಾಕಪ್ ಡೆತ್ ಅಲ್ಲ. ಅವನಿಗೆ ಮೂರ್ಛೆ ರೋಗವಿತ್ತು. ಆ ರೋಗದಿಂದ ಆತ ಮೃತ ಪಟ್ಟಿದ್ದಾನೆ. ಆದರೆ ಎಫ್ಐಆರ್ ಇಲ್ಲದೆ ಪೊಲೀಸರು ಠಾಣೆಗೆ ಕರೆ ತಂದಿದ್ದು ತಪ್ಪು. ಈ ತಪ್ಪಿಗಾಗಿ ಪೊಲೀಸ್ ಅಧಿಕಾರಿಗಳ ಅಮಾನತ್ತಿಗೆ ಆದೇಶ ಮಾಡಿದ್ದೇನೆ. ಆದರೆ ಈ ಇದು ಲಾಕಪ್ ಡೆತ್ ಅಲ್ಲ ಎಂಬುದನ್ನ ಸ್ಪಷ್ಟ ಪಡಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.