ಜನ ಸುಮ್ಮನಿರುವುದರಿಂದಲೇ ದೇಶ ಹಾಳಾಗುತ್ತಿದೆ
Team Udayavani, Feb 1, 2021, 11:08 AM IST
ಮೈಸೂರು: “ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಜಿಡಿಪಿ ಕುಸಿಯುತ್ತಿದೆ. ಇಂಧನ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಆದರೂ, ಜನ ಸುಮ್ಮನಿದ್ದಾರೆ. ಹೀಗಾಗಿಯೇ ದೇಶ ಹಾಳಾ ಗುತ್ತಿದೆ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಮನಮೋಹನ್ ಸಿಂಗ್ ಸರ್ಕಾರವಿದ್ದಾಗ ದೇಶದ ಜಿಡಿಪಿ ಶೇ.9ರಷ್ಟಿತ್ತು. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಂದಾಗಿ ನಿಂದ ಜಿಡಿಪಿ ಕ್ರಮೇಣ ಕ್ಷೀಣಿಸಿ ಶೇ.7.7ಕ್ಕೆ ಇಳಿದಿದೆ. ಆರ್ಥಿಕ ಬೆಳವಣಿಗೆ ನರಾಕಾತ್ಮಕವಾಗಿದೆ. ಅಲ್ಲದೆ ಪೆಟ್ರೋಲ್ ಬೆಲೆ 92 ರೂ. ಆಗಿದೆ. ಇದೆಲ್ಲವನ್ನೂ ಮುಚ್ಚಿ ಹಾಕಲು ಮೋದಿ ಸರ್ಕಾರ ಮುಂದಿನ 2021 22ನೇ ವರ್ಷಕ್ಕೆ ಜಿಡಿಪಿ ಶೇ.11ಕ್ಕೆ ಏರುತ್ತದೆ ಎಂದ ಸುಳ್ಳು ಹೇಳುತ್ತಿದ್ದಾರೆ. ಯಾವ ಅರ್ಥದಲ್ಲಿ ಈ ಮಾತು ಹೇಳುತ್ತಿದ್ದಾರೆ? ಜಿಡಿಪಿ ಅಂಕಿ ಸಂಖ್ಯೆಯಲ್ಲೂ ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಇಡೀ ದೇಶದ ಜನತೆಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.
ಜೆಡಿಎಸ್ ರಾಜಕೀಯ ಪಕ್ಷವೇ ಅಲ್ಲ: ರಾಷ್ಟ್ರಪತಿ ಭಾಷಣ ತ್ಯಜಿಸುವುದಾಗಿ ಮಾಜಿ ಪ್ರಧಾನಿ ಎಚ್. ಡಿ.ದೇವೆಗೌಡರ ಹೇಳಿಕೆ ಕುರಿತು ಪ್ರತಿ ಕ್ರಿಯಿಸಿ, ಜೆಡಿಎಸ್ ಒಂದು ರಾಜಕೀಯ ಪಕ್ಷವೇ ಅಲ್ಲ. ಅವರ ಬಗ್ಗೆ ನಾನು ಮಾತೇ ಆಡಲ್ಲ ಎಂದರು.
ಇದನ್ನೂ ಓದಿ:ಪಾತ್ರಗಳ ಸುತ್ತ ದರ್ಶನ್ ಕಟೌಟ್: ಅಭಿಮಾನಿಗಳ ಹೊಸ ಪ್ರಯತ್ನ
ಮನ್ ಕೀ ಬಾತ್‌ನಲ್ಲಿ ಪ್ರಧಾನಿ ಜನತೆಗೆ ಉತ್ತರ ಕೊಟ್ಟಿದ್ದಾರಾ?
ಬಿಜೆಪಿ ನೇತೃತ್ವದ ಸರ್ಕಾರಗಳಲ್ಲಿ ಅಭಿವೃದ್ಧಿಗೆ ದುಡ್ಡಿಲ್ಲ. ಉದ್ಯೋಗ ಸೃಷ್ಟಿಗೆ ಹೆಚ್ಚು ಒತ್ತು ಕೊಡಬೇಕು. ರಫ್ತು-ಆಮದು ಹೆಚ್ಚಾಗಬೇಕು. ಕೈಗಾರಿಕಾ, ಕೃಷಿ ಉತ್ಪನ್ನ ಹೆಚ್ಚಾಗಬೇಕು. ಏನೂ ಮಾಡದಿದ್ದರೆ ಅಭಿವೃದ್ಧಿ ಹೇಗಾಗುತ್ತದೆ. ಇಲ್ಲಿಯವರೆಗೆ ಪ್ರಧಾನಿಗಳು ಮನ್ ಕಿ ಬಾತ್‌ನಲ್ಲಿ ಉತ್ತರ ಕೊಟ್ಟಿದ್ದಾರಾ? ಯಾಕೆ ಹೇಳಿಲ್ಲ? ಮನಮೋಹನ್ ಸಿಂಗ್‌ಕಾಲದಲ್ಲಿ ಪೆಟ್ರೋಲ್ 60 ರೂ, ಡೀಸೆಲ್ 44 ರೂ. ಇತ್ತು. ಈಗ ಏಕೆ ಹೆಚ್ಚಾಗಿದೆ?. ಮನಮೋಹನ್ ಸಿಂಗ್ ಕಾಲದಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 110 ಡಾಲರ್ ಇತ್ತು. ಈಗ 45-46 ಡಾಲರ್ ಇದೆ. ಆದರೂ, 110 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 60 ರೂ. ಇತ್ತು. ಈಗ ಬ್ಯಾರಲ್ ಬೆಲೆ 45-36 ಡಾಲರ್ ಇದೆ. ಆದರೆ, ಪೆಟ್ರೋಲ್ ಬೆಲೆ 92 ರೂ. ಆಗಿದೆ. ಆದರೂ ಜನ ಸುಮ್ಮನಿದ್ದಾರಲ್ಲಾ. ದೇಶ ಹಾಳಾಗಿರುವುದು ಇದಕ್ಕೋಸ್ಕರವೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.