ಪ್ರಕೃತಿ ಚಿಕಿತ್ಸೆ ಪಡೆಯಲಿರುವ ಸಿದ್ದರಾಮಯ್ಯ
Team Udayavani, Jun 14, 2018, 7:15 AM IST
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಜೂನ್ 16ರಂದು ದಾಖಲಾಗಲಿದ್ದಾರೆ.
ಸಿದ್ದರಾಮಯ್ಯ ಅವರು ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗುವ ಸುದ್ದಿ ತಿಳಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ದೂರವಾಣಿ ಮೂಲಕ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿದರು.
ಚುನಾವಣೆಯ ಬಳಿಕ ಚಿಕಿತ್ಸೆ ಪಡೆಯುವ ನಿರ್ಧಾರ ಮಾಡಿದ್ದೆ. ಈ ಹಿನ್ನೆಲೆಯಲ್ಲಿ ಬರುತ್ತಿದ್ದೇನೆ 10ರಿಂದ 12 ದಿನಗಳ ಕಾಲ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆಗೆ ಒಳಗಾಗುತ್ತೇನೆಂದು ಸಿದ್ದರಾಮಯ್ಯ ಅವರು ವೀರೇಂದ್ರ ಹೆಗ್ಗಡೆಯವರಿಗೆ ತಿಳಿಸಿದರು.
ಸಿದ್ದರಾಮಯ್ಯ ಅವರು ಈ ಹಿಂದೆಯೂ ಹಲವಾರು ಬಾರಿ ಚುನಾವಣೆಗಳು ಮುಗಿದ ಬಳಿಕ ತಪ್ಪದೇ ಈ ಚಿಕಿತ್ಸಾ ಕೇಂದ್ರಕ್ಕೆ ತೆರಳಿ ಚಿಕಿತ್ಸೆ ಪಡೆದಿದ್ದರು. ಈ ಬಾರಿಯ ಚುನಾವಣೆಯಲ್ಲಿಯೂ ಇಡೀ ರಾಜ್ಯ ಸುತ್ತಿ ದಣಿದಿರುವ ಸಿದ್ದರಾಮಯ್ಯ ಅವರು ಪ್ರಕೃತಿ ಚಿಕಿತ್ಸೆಯನ್ನು ಪಡೆಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.