ಸಿದ್ದು ಫೋಟೋ ನೋಡಿದಷ್ಟು ಬಿಜೆಪಿಗೆ ಮತ​​​​​​​

Team Udayavani, Apr 1, 2018, 6:00 AM IST

180331kpn83.jpg

ಮೈಸೂರು/ಮಂಡ್ಯ: ಜನರು ಮುಖ್ಯಮಂತ್ರಿ ಸಿದ್ದರಾಮಯ್ಯ ಫೋಟೋ ನೋಡಿದಷ್ಟೂ ಬಿಜೆಪಿಗೆ ಹೆಚ್ಚು ಮತ ನೀಡಲಿದ್ದಾರೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ವ್ಯಂಗ್ಯವಾಡಿದ್ದಾರೆ.

ಮಂಡ್ಯದ ಹೊರವಲಯದಲ್ಲಿ 5 ಜಿಲ್ಲೆಗಳ ಶಕ್ತಿ ಕೇಂದ್ರದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪಕ್ಕದಲ್ಲಿದ್ದ “ಇಂದಿರಾ ಕ್ಯಾಂಟೀನ್‌’ ಮೇಲಿರುವ ಸಿದ್ದರಾಮಯ್ಯನವರ ಫೋಟೋ ತೆಗೆಸುವಂತೆ ಬಿಜೆಪಿ ಮುಖಂಡರು ಆಗ್ರಹ ಪಡಿಸಿದರು. ಇದಕ್ಕೆ ಉತ್ತರಿಸಿದ ಶಾ, ಆತುರ ಬೇಡ. ಸಿದ್ದರಾಮಯ್ಯ ಫೋಟೋ ಇದ್ದಷ್ಟು ನಮಗೇ ಲಾಭ. ಕಾಂಗ್ರೆಸ್‌ ದುರಾಡಳಿತವನ್ನು ಕಂಡಿರುವ ಜನರು ಸಿದ್ದು ಫೋಟೋ ನೋಡಿದಷ್ಟು ಬಿಜೆಪಿಗೆ ಹೆಚ್ಚು ಮತ ಹಾಕುವರು ಎಂದು ಹೇಳಿದರು. 

“ನನ್ನನ್ನು ಬಿಜೆಪಿಯ ಚುನಾವಣಾ ಚಾಣಕ್ಯ ಎನ್ನುತ್ತಾರೆ. ಅದರೆ, ಚಾಣಕ್ಯ ನಾನಲ್ಲ. ಬೂತ್‌ ಮಟ್ಟದ ಹಾಗೂ ಶಕ್ತಿಕೇಂದ್ರಗಳ ಕಾರ್ಯಕರ್ತರೇ ನಿಜವಾದ ಚಾಣಕ್ಯರು. ಕರ್ನಾಟಕದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು 18 ಅಂಶಗಳ ಕಾರ್ಯಕ್ರಮ ರೂಪಿಸಲಾಗಿದೆ. ಅವುಗಳನ್ನು ಕಾರ್ಯಕರ್ತರು ಹಾಗೂ ಮುಖಂಡರು ಪಾಲಿಸಿದರೆ ರಾಜ್ಯದಲ್ಲೂ ಬಿಜೆಪಿ ಬಾವುಟ ಹಾರಿಸಬಹುದು’ ಎಂದರು.

ಸಿದ್ದು ಸರ್ಕಾರ ಕಾಂಗ್ರೆಸ್‌ಗೆ ಎಟಿಎಂ:
ಇದಕ್ಕೂ ಮೊದಲು ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದ ಅನುದಾನವನ್ನು ಸಮರ್ಪಕವಾಗಿ ರಾಜ್ಯದ ಅಭಿವೃದ್ಧಿಗೆ ಬಳಸಿಕೊಳ್ಳದೆ, ಸ್ಪೀಡ್‌ ಬ್ರೇಕರ್‌ನಂತೆ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೂಗೆದು, ಬಿಜೆಪಿಗೆ ಅಧಿಕಾರ ನೀಡಲು ಕರ್ನಾಟಕದ ಜನತೆ ಉತ್ಸುಕರಾಗಿದ್ದಾರೆ. ಕಾಂಗ್ರೆಸ್‌ ಪಕ್ಷದ ಎಟಿಎಂನಂತೆ ಸಿದ್ದರಾಮಯ್ಯ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ರೆಡ್ಡಿಗೂ, ಬಿಜೆಪಿಗೂ ಸಂಬಂಧವಿಲ್ಲ:
ಮಾಜಿ ಸಚಿವ ಜನಾರ್ದನ ರೆಡ್ಡಿ ಜತೆಗೆ ಬಿಜೆಪಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ ಅಮಿತ್‌ ಶಾ, ಸಂವಿಧಾನ ಬದಲಾವಣೆ ಕುರಿತು ನೀಡಿದ ಹೇಳಿಕೆಗೆ ಅನಂತಕುಮಾರ್‌ ಹೆಗಡೆ ವಿಷಾದ ವ್ಯಕ್ತಪಡಿಸಿದ್ದಾರೆ. ಆದರೂ, ಸಿದ್ದರಾಮಯ್ಯ ಸರ್ಕಾರ ಆ ವಿಚಾರದಲ್ಲಿ ಅಪಪ್ರಚಾರ ನಡೆಸುತ್ತಿದೆ ಎಂದು ದೂರಿದರು. ಮೈಸೂರು ರಾಜವಂಶಸ್ಥರ ಜತೆಗಿನ ಮಾತುಕತೆಯ ಗುಟ್ಟು ಬಿಟ್ಟುಕೊಡಲು ಒಪ್ಪದ ಅಮಿತ್‌ ಶಾ, ಅದೊಂದು ಸೌಜನ್ಯದ ಭೇಟಿ. ಮಾತುಕತೆಯ ವಿವರ ಬಹಿರಂಗಪಡಿಸಲಾಗಲ್ಲ ಎಂದರು.

ಮೇಲುಕೋಟೆಗೆ ಭೇಟಿ
ಮಂಡ್ಯ:
ಶನಿವಾರ ಮಧ್ಯಾಹ್ನ ಅಮಿತ್‌ ಶಾ ಮೇಲುಕೋಟೆಗೆ ಭೇಟಿ ನೀಡಿ, ಚೆಲುವನಾರಾಯಣಸ್ವಾಮಿ ದರ್ಶನ ಪಡೆದರು. ಶಾ ಭೇಟಿ ಹಿನ್ನೆಲೆಯಲ್ಲಿ ವಿಶೇಷ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು. ಇದರಿಂದಾಗಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಸಿಗಲಿಲ್ಲ. ಶಾ ಭೇಟಿ ಸಮಯದಲ್ಲಿ ದೇವಾಲಯದ ಆಡಳಿತ ಮಂಡಳಿ ದೇವರ ದರ್ಶನದ ಅವಧಿಯನ್ನು ವಿಸ್ತರಣೆ ಮಾಡುವ ಮೂಲಕ ನಿಯಮಾವಳಿ ಉಲ್ಲಂಘನೆ ಮಾಡಿದೆ. ಸಾಮಾನ್ಯ ದಿನಗಳಲ್ಲಿ ದರ್ಶನ ಮಧ್ಯಾಹ್ನ 1.30ರೊಳಗೆ ಮುಗಿಯುತ್ತಿತ್ತು. ಶಾ ಅವರು ದರ್ಶನ ಪಡೆಯಲು ಆಗಮಿಸಿದ್ದ ವೇಳೆ ಮಧ್ಯಾಹ್ನ 1.30ರ ನಂತರವೂ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ರೈತ ಗೀತೆಗೆ ಅವಕಾಶ ನೀಡದ ಶಾ:
ಮಂಡ್ಯ
: ನಗರದ ಸರ್‌.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಾವಯವ ಕೃಷಿಕರು, ರೈತ ಮಹಿಳಾ ಸಹಕಾರಿಗಳ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಅಮಿತ್‌ ಶಾ ರೈತಗೀತೆಗೆ ಅವಮಾನ ಮಾಡಿದ ಘಟನೆ ನಡೆಯಿತು. ಕಾರ್ಯಕ್ರಮದಲ್ಲಿ ಉದ್ಘಾಟನೆಗೂ ಮುನ್ನ ರೈತ ಗೀತೆ ಹಾಡುವುದಕ್ಕೆ ತಯಾರಿ ನಡೆಸಿದ್ದರು. ಅಷ್ಟರಲ್ಲಿ ರೈತ ಗೀತೆಗೆ ಅವಕಾಶ ಬೇಡವೆಂದ ಶಾ, ನೇರವಾಗಿ ಭಾಷಣಕ್ಕಿಳಿದರು. ಖಾಲಿ ಕುರ್ಚಿಗಳಿಂದ ಭಣಗುಡುತ್ತಿದ್ದುದನ್ನು ಕಂಡು ರಾಜ್ಯ ನಾಯಕರ ವಿರುದ್ಧ ಗರಂ ಆದರು.

ಲಿಂಗಾಯತರಿಗೆ ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡುವ ಶಿಫಾರಸನ್ನು ಮನಮೋಹನ್‌ ಸಿಂಗ್‌ ಸರ್ಕಾರ ತಿರಸ್ಕರಿಸಿತ್ತು. ಆದರೂ ನಾಲ್ಕೂವರೆ ವರ್ಷ ಸುಮ್ಮನಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಯಡಿಯೂರಪ್ಪ ಅವರನ್ನು ಘೋಷಿಸಿದ ಬಳಿಕ ಸಮಾಜ ಒಡೆಯುವ ಕೆಲಸಕ್ಕೆ ಕೈ ಹಾಕಿದ್ದಾರೆ. ಇದನ್ನು ಬಿಜೆಪಿ ಸಮರ್ಥವಾಗಿ ಎದುರಿಸಲಿದೆ.
– ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.

ಟಾಪ್ ನ್ಯೂಸ್

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.