ಯುವಕನಿಗೆ ಸಿದ್ದು ಗುದ್ದು
Team Udayavani, Feb 9, 2019, 5:48 AM IST
ಮೈಸೂರು: ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಮಾನಿಗಳಿಂದ ಕಿರಿಕಿರಿ ಅನುಭವಿಸಬೇಕಾಯಿತು. ವೇದಿಕೆ ಹತ್ತಲೂ ಬಿಡದೆ ಅವರೊಂದಿಗೆ ಸೆಲ್ಫಿಗೆ ಮುಗಿ ಬೀಳುತ್ತಿದ್ದವರಿಗೆ ಗದರಿ ಕಳುಹಿಸಿದರು.
ಉದ್ಘಾಟನೆ ಕಾರ್ಯಕ್ರಮದ ನಂತರವು ಈ ಕಿರಿಕಿರಿ ತಪ್ಪಲಿಲ್ಲ. ಇದರಿಂದ ಹತ್ತಿರದಿಂದ ಸೆಲ್ಫಿ ತೆಗೆದುಕೊಳ್ಳಲು ಬಂದ ಯುವಕನಿಗೆ ಸಿದ್ದರಾಮಯ್ಯ ಗುದ್ದಿ ಕಳುಹಿಸಿದರು. ಕನಕ ಸಮುದಾಯ ಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಬಡವರು ಮಕ್ಕಳ ಮದುವೆ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.
ಹೀಗಾಗಿ ನನ್ನನ್ನು ಗೆಲ್ಲಿಸಿರುವ ಬಾದಾಮಿಯಲ್ಲಿ ಮುಂದಿನ ವರ್ಷ 500 ಜೋಡಿಗಳಿಗೆ ದಾನಿಗಳಿಂದ ಸಾಮೂಹಿಕ ವಿವಾಹ ಮಾಡಿಸಲು ಉದ್ದೇಶಿಸಿದ್ದೇನೆ ಎಂದು ತಿಳಿಸಿದರು. ಕಾಗಿನೆಲೆ ಕನಕಗುರುಪೀಠದ ನಿರಂಜನಾನಂದಪುರಿ ಶ್ರೀ ಮಾತನಾಡಿ, ಸರ್ಕಾರದ ಜೀವವೇ ಸಿದ್ದರಾಮಯ್ಯ ಕೈಯಲ್ಲಿದೆ. ಮನಸ್ಸು ಮಾಡಿದರೆ ಒಂದು ಕ್ಷಣದಲ್ಲಿ ಸರ್ಕಾರ ಉರುಳಿಸಬಹುದು. ಆದರೆ, ಹಾಲಮತದಲ್ಲಿ ಹುಟ್ಟಿದ ಸಿದ್ದರಾಮಯ್ಯ ಅವರು ಅಂತಹ ಕಾರ್ಯ ಮಾಡಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.