ಇಲವಾಲ ನಿಸರ್ಗ ಬಡಾವಣೆಗೆ ಜಮೀನು ನೀಡಿದ ರೈತರಿಗೆ ಸೈಟ್‌


Team Udayavani, Dec 25, 2019, 3:00 AM IST

ialvala

ಮೈಸೂರು: ತಾಲೂಕಿನ ಇಲವಾಲ ಹೋಬಳಿಯ ಗುಂಗ್ರಾಲ್‌ ಛತ್ರ ಗ್ರಾಮದ ಬಳಿ ಕರ್ನಾಟಕ ಗೃಹ ಮಂಡಳಿ ನಿರ್ಮಿಸಿರುವ ನಿಸರ್ಗ ಬಡಾವಣೆಗೆ ಜಮೀನು ನೀಡಿರುವ ಭೂ ಮಾಲೀಕರಿಗೆ ಕನಿಷ್ಠ ದರದಲ್ಲಿ ಪ್ರತಿ ಎಕರೆಗೆ ಒಂದು ನಿವೇಶನ ಕೊಡುವುದಾಗಿ ವಸತಿ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು. ಜಿಪಂ ಸಭಾಂಗಣದಲ್ಲಿ ಮಂಗಳವಾರ ಕೆಎಚ್‌ಬಿ ಬಡಾವಣೆಗೆ ಭೂಮಿ ನೀಡಿದ ರೈತರೊಂದಿಗೆ ಸಭೆ ನಡೆಸಿದ ಅವರು ಜಮೀನು ನೀಡಿದ ರೈತರಿಗೆ ನಿವೇಶನ ನೀಡುವುದಾಗಿ ತಿಳಿಸಿದರು.

2008ರಲ್ಲಿ ನಾನೇ ವಸತಿ ಸಚಿವನಾಗಿದ್ದಾಗ ಅಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿದ್ದ ಜಿ.ಟಿ.ದೇವೇಗೌಡರ ಒತ್ತಾಸೆ ಮೇರೆಗೆ ಗುಂಗ್ರಾಲ್‌ ಛತ್ರ, ಯಲಚನಹಳ್ಳಿ, ಕಲ್ಲೂರು-ನಾಗನಹಳ್ಳಿ ಸುತ್ತಮುತ್ತಲಿನ ಗ್ರಾಮಗಳ 496 ಎಕರೆ ಜಮೀನನ್ನು ಪ್ರತಿ ಎಕರೆಗೆ 36 ಲಕ್ಷ ರೂ. ನೀಡಿ ಸ್ವಾಧೀನ ಪಡಿಸಿ ಕೊಳ್ಳಲಾಯಿತು. ಬೆಂಗಳೂರಿನ ಸೂರ್ಯನಗರ ಬಡಾವಣೆಗೆ ಪ್ರತಿ ಎಕರೆಗೆ 35 ಲಕ್ಷ ರೂ.ಗೆ ಭೂ ಸ್ವಾಧೀನಪಡಿಸಿಕೊಂಡರೆ, ಇಲ್ಲಿ 36 ಲಕ್ಷ ರೂ. ನೀಡಿ ಸ್ವಾಧೀನಪಡಿಸಿಕೊಳ್ಳಲಾಯಿತು.

ಆದರೆ, ರೈತರಿಂದ ಎಕರೆಗೆ 6 ಲಕ್ಷ, 10 ಲಕ್ಷಕ್ಕೆ ಜಿಪಿಎ ಮಾಡಿಸಿಕೊಂಡು ಮಧ್ಯವರ್ತಿಗಳು ಗೃಹಮಂಡಳಿಗೆ ಮಾರಿದ್ದರಿಂದ ರೈತರ ಕೈ ಸೇರಬೇಕಾದ ಹಣ, ಯಾರ್ಯಾರ ಮನೆಯೋ ಸೇರಿತು, ಗೃಹಮಂಡಳಿ ಪ್ರತಿ ಎಕರೆಗೆ 36 ಲಕ್ಷ ಕೊಟ್ಟರೂ ರೈತರಿಗೆ ಎಷ್ಟು ತಲುಪಿದೆಯೋ ಗೊತ್ತಿಲ್ಲ. ಈ ಬಗ್ಗೆ ಸುಮಾರು 350 ಕೇಸ್‌ಗಳು ನಡೆಯಿತು. ಇದರಿಂದಾಗಿ ರೈತರಿಂದ ಜಿಪಿಎ ಮಾಡಿಸಿಕೊಂಡ ಜಮೀನನ್ನು ಗೃಹಮಂಡಳಿ ಖರೀದಿಸಲ್ಲ ಎಂಬ ತೀರ್ಮಾನ ಮಾಡಲಾಯಿತು ಎಂದರು.

ಬಡಾವಣೆಗೆ ಜಮೀನು ನೀಡಿದ ರೈತರನ್ನು ಯಾಮಾರಿಸಿ, ಅವರ ಆಸ್ತಿಕಿತ್ತುಕೊಂಡು ಅವರನ್ನು ರಸ್ತೆಯಲ್ಲಿ ನಿಲ್ಲಿಸುವುದು ಸರಿಯಲ್ಲ ಎಂಬ ಕಾರಣಕ್ಕೆ ರೈತರ ಮನವಿ ಮೇರೆಗೆ ಭೂಮಿ ನೀಡಿದವರಿಗೆ ನಿವೇಶನ ನೀಡುವ ಸಂಬಂಧ ಈ ಹಿಂದಿನ ಸರ್ಕಾರದಲ್ಲಿ ಸಚಿವ ಸಂಪುಟಕ್ಕೆ ಎರಡು ಬಾರಿ ಪ್ರಸ್ತಾವನೆ ಸಲ್ಲಿಸಿದ್ದರೂ ಒಪ್ಪಿಗೆ ಸಿಕ್ಕಿಲ್ಲ. ತಾವು ಮುಖ್ಯಮಂತ್ರಿಯವರನ್ನು ಒಪ್ಪಿಸಿ ಸಚಿವ ಸಂಪುಟದಲ್ಲಿ ಅನುಮೋದನೆ ಕೊಡಿಸಲು ಬದ್ಧವಾಗಿರುವುದಾಗಿ ಹೇಳಿದರು.

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಕೆಎಚ್‌ಬಿ ಅಧ್ಯಕ್ಷನಾಗಿ ಉತ್ತಮ ಬಡಾವಣೆ ನಿರ್ಮಿಸಲು ಮುಂದಾದಾಗ ಮಧ್ಯವರ್ತಿಗಳು ಎಂದು ನನ್ನ ಮುಖಕ್ಕೆ ಮಸಿ ಬಳಿದರು. ಜಮೀನು ಕೊಟ್ಟವರನ್ನೂ ನಾನು ನೋಡಲಿಲ್ಲ. ಆದರೂ ಅಪವಾದ ಹೊರಬೇಕಾಯಿತು ಎಂದು ಬೇಸರ ವ್ಯಕ್ತಪಡಿಸಿದರು. ಈ ಬಡಾವಣೆಗೆ ಮೂಲಸೌಕರ್ಯ ಒದಗಿಸಿದಾಗ ಸುತ್ತಲಿನ ಹತ್ತು ಕಿ.ಮೀ ವ್ಯಾಪ್ತಿಯವರೆಗೆ ಟೌನ್‌ಶಿಪ್‌ ಬೆಳೆಯುತ್ತೆ. ರೈತರು ಕಡಿಮೆ ಬೆಲೆಗೆ ಜಮೀನು ಮಾರಿಕೊಂಡಿದ್ದೀರಿ ಎಂಬ ಕಾರಣಕ್ಕೆ ಪರಿಹಾರ ಕೊಡಲು ಸರ್ಕಾರ ಮುಂದಾಗಿದೆ ಎಂದರು. ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಹಾಗೂ ಗೃಹ ಮಂಡಳಿ ಅಧಿಕಾರಿಗಳು ಸಭೆಯಲ್ಲಿದ್ದರು.

ಕನಿಷ್ಠ ದರ ನಿಗದಿ: ಒಂದು ಎಕರೆಗಿಂತ ಕಡಿಮೆ ಜಮೀನು ಕೊಟ್ಟಿದ್ದವರಿಗೆ 20-30 ಅಡಿ ವಿಸ್ತೀರ್ಣದ ನಿವೇಶನಕ್ಕೆ 50 ಸಾವಿರ ರೂ., 30-40 ಅಡಿ ವಿಸ್ತೀರ್ಣದ ನಿವೇಶನಕ್ಕೆ 1ಲಕ್ಷ ರೂ. ನಿಗದಿಪಡಿಸಲಾಯಿತು. ಬಡಾವಣೆಯಲ್ಲಿ ಈಗಾಗಲೇ ಹಂಚಿಕೆ ಮಾಡಿರುವ ನಿವೇಶನಗಳನ್ನು ಕೇಳುವಂತಿಲ್ಲ. ಮೂಲೆ ನಿವೇಶನ ಮತ್ತು ಸಿಎ ನಿವೇಶನಗಳನ್ನು ಹೊರತುಪಡಿಸಿ ಉಳಿಕೆ 3000 ನಿವೇಶನಗಳನ್ನು ಕೊಡಿಸಲು ಕ್ರಮವಹಿಸುವುದಾಗಿ ಭರವಸೆ ನೀಡಿದರು.

ಸ್ವಾಧೀನಪಡಿಸಿಕೊಂಡ ಜಮೀನಿನಲ್ಲಿ ತೆಂಗು, ಮಾವು ಮೊದಲಾದ ಮರಗಳಿದ್ದ ಜಮೀನು ಮಾಲೀಕರಿಗೆ ತೋಟಗಾರಿಕೆ ಇಲಾಖೆ ಮಾರ್ಗಸೂಚಿ ಪ್ರಕಾರ ಪರಿಹಾರ ಕೊಡಿಸುವುದಾಗಿ ಹೇಳಿದರು. ಬಡಾವಣೆಯಲ್ಲಿ ಬೆಳೆದು ನಿಂತಿರುವ ಗಿಡಗಂಟೆಗಳ ತೆರವಿಗೆ ನಾಳೆಯಿಂದ ಸಮರೋಪಾದಿಯಲ್ಲಿ ಕೆಲಸ ನಡೆಯಲಿದೆ. ಮುಂದಿನ ಆರು ತಿಂಗಳಲ್ಲಿ ಬಡಾವಣೆಗೆ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸಿಕೊಡುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.