ರಿಂಗ್ ರಸ್ತೆ ಸ್ವತ್ಛತೆಗೆ ಆರು ತಂಡ ರಚನೆ
Team Udayavani, Jan 27, 2021, 1:23 PM IST
ಮೈಸೂರು: ಸ್ವತ್ಛ ಸರ್ವೇಕ್ಷಣ ಕಾರ್ಯಕ್ರಮ ಗಳಿಗೆ ಸಂಬಂಧಿಸಿದಂತೆ ಮೈಸೂರು ಹೊರ ವರ್ತುಲ ರಸ್ತೆಗಳ ಸ್ವತ್ಛತಾ ಕಾರ್ಯವನ್ನು ಕೈಗೊಳ್ಳಲು ತಂಡವನ್ನು ರಚಿಸುವಂತೆ ಸಚಿವ ಎಸ್.ಟಿ.ಸೋಮಶೇಖರ್ ಸೂಚಿಸಿದರು.
ಮೈಸೂರು ರಿಂಗ್ ರಸ್ತೆಯ ತ್ಯಾಜ್ಯ ಹಾಗೂ ಕಟ್ಟಡ ತ್ಯಾಜ್ಯ ತೆರವು ಮಾಡುವ ಸಂಬಂಧ ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಸ್ವತ್ಛತೆಬಗ್ಗೆ ನಾವೆಲ್ಲರೂ ಗಮನ ಹರಿಸಲೇ ಬೇಕು. ಲೋಕೋಪಯೋಗಿ, ಆರ್‌ಡಿಪಿಆರ್, ರಾಜ್ಯ ಹೆದ್ದಾರಿ ಇಲಾಖೆ, ಕೆಆರ್‌ಐಡಿಎಲ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಮೈಸೂರು ಮಹಾನಗರ ಪಾಲಿಕೆಗಳ ಕಾರ್ಯಪಾಲಕ, ಅಧೀಕ್ಷಕ ಅಭಿಯಂತ ರರು ಹಾಗೂ ಯೋಜನಾ ನಿರ್ದೇಶಕರನ್ನೊಳಗೊಂಡ ತಂಡ ರಚನೆ ಮಾಡಲು ಸೂಚನೆ ನೀಡಿದರು.
ತ್ಯಾಜ್ಯ ಹಾಗೂ ಕಸ ವಿಲೇವಾರಿಗೆ ಸಂಬಂಧಪಟ್ಟಂತೆ ಕೇವಲ ಮೈಸೂರಿನ ರಿಂಗ್ ರಸ್ತೆ ಮಾತ್ರವಲ್ಲದೆ, ನಗರದೊಳಗೂ ಸಹ ಕಸ ಹಾಕಿದರೆ ದಂಡ ಹಾಗೂ ಜೈಲು ಶಿಕ್ಷೆ ಇದೆ ಎಂಬ ಅಂಶವನ್ನು ಮಾಧ್ಯಮಗಳಲ್ಲಿ ಪ್ರಕಟಣೆಗಳ ಮುಖಾಂತರ ಸಾರ್ವಜನಿಕವಾಗಿ ಎಚ್ಚರಿಕೆ ಸಂದೇಶ ನೀಡಬೇಕು ಎಂದರು.
ಜನಸಂಪರ್ಕ ಸಭೆ ನಡೆಸಿ ಅಧಿಕಾರಿಗಳನ್ನು ಕರೆಸಿ ಎಲ್ಲ ರೀತಿಯಲ್ಲಿಯೂ ಏನೆಲ್ಲ ಕ್ರಮ ತೆಗೆದುಕೊಳ್ಳ ಬಹುದು ಎಂಬ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದು ಕೊಳ್ಳಬೇಕು. ಎಲ್ಲೆಂದರಲ್ಲಿ ಮಾಂಸ, ಕೋಳಿ ತ್ಯಾಜ್ಯಗಳ ಸುರಿಯುವವರನ್ನು ಗುರುತಿಸಿ ಅವರ ಚಲನವಲನಗಳ ಮೇಲೆ ನಿಗಾ ಇಡಬೇಕು. ಅವರು ಸೂಕ್ತ ಪ್ರದೇಶದಲ್ಲಿ ವಿಲೇವಾರಿ ಮಾಡದೆ ಎಲ್ಲೆಂದರಲ್ಲಿ ಕಸ ಸುರಿಯುತ್ತಿದ್ದರೆ ಎಚ್ಚರಿಕೆ ನೀಡಬೇಕು. ಜೊತೆಗೆ ಮರುಕಳಿಸಿದರೆ ಶಿಕ್ಷೆ ಬಗ್ಗೆಯೂ ಗಮನ ಸೆಳೆಯಬೇಕು. ಈ ನಿಟ್ಟಿನಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಬೇಕು ಎಂದು ಸಭೆಯಲ್ಲಿ ನಿರ್ಧಾರ ಮಾಡಲಾಯಿತು.
ಇದನ್ನೂ ಓದಿ:ಗಣತಂತ್ರ ವ್ಯವಸ್ಥೆಯಲ್ಲಿ ಎಲ್ಲವೂ ಸಮಾನ
ಸ್ವತ್ಛತೆಯನ್ನು ಕಾರ್ಯನಿರ್ವಹಿಸುವ ತಂಡಗಳಿಗೆ ಹೊರವರ್ತುಲ ರಸ್ತೆಯ ಮೀಡಿಯನ್ ಅನ್ನು ಸ್ವತ್ಛಗೊಳಿಸುವುದು, ಹೊರವರ್ತುಲ ರಸ್ತೆ, ಸರ್ವಿಸ್ ರಸ್ತೆ ಹಾಗೂ ಪಾದಚಾರಿ ಮಾರ್ಗದಲ್ಲಿ ಶೇಖರಣೆ ಯಾಗಿರುವ ಡೆಬ್ರಿಸ್ ಅನ್ನು ಪೂರ್ಣ ಪ್ರಮಾಣದಲ್ಲಿ ಸ್ವತ್ಛಗೊಳಿಸುವ ಜವಾಬ್ದಾರಿ ನೀಡಲಾಯಿತು.
ಸಭೆಯಲ್ಲಿ ಒಂದೊಂದು ಇಲಾಖೆಗೆ ಒಂದೊಂದು ವ್ಯಾಪ್ತಿಯ ಜವಾಬ್ದಾರಿ ವಹಿಸುವ ಬಗ್ಗೆ ಚರ್ಚೆಗಳು ನಡೆದವು. ಅಂತಿಮವಾಗಿ ಇನ್ನೊಂದು ಸುತ್ತಿನ ಮಾತುಕತೆ ಬಳಿಕ ಹೆಚ್ಚುವರಿ ಜವಾಬ್ದಾರಿಗಳಿದ್ದರೆ, ಇಲ್ಲವೇ ಈಗ ಮಾಡಿರುವ ಪಟ್ಟಿಯಲ್ಲಿ ಕೆಲ ಬದಲಾವಣೆಗಳನ್ನು ಮಾಡಿಕೊಳ್ಳಬಹುದು ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಎಲ್.ನಾಗೇಂದ್ರ, ಮುಡಾ ಅಧ್ಯಕ್ಷ ಎಚ್.ವಿ. ರಾಜೀವ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪೊಲೀಸ್ ಆಯುಕ್ತ ಚಂದ್ರಗುಪ್ತ, ಎಸ್ಪಿ ರಿಷ್ಯಂತ್, ಮುಡಾ ಆಯುಕ್ತ ನಟೇಶ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.