ವಾರ್ಷಿಕ ಕೋಟಿಗೂ ಹೆಚ್ಚು ಯುವಜನರಿಗೆ ಕೌಶಲ್ಯ ತರಬೇತಿ


Team Udayavani, Sep 10, 2019, 3:00 AM IST

varshika

ಮೈಸೂರು: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಲ್ಲರಿಗಿಂತ ನಾವು ಮುಂದೆ ಸಾಗಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರವು ಕೌಶಲ್ಯಾಭಿವೃದ್ಧಿ ಇಲಾಖೆಗೆ ಹೆಚ್ಚಿನ ಒತ್ತು ನೀಡಿದ್ದು, ಕೌಶಲ್ಯಾಭಿವೃದ್ಧಿ ತರಬೇತಿಗಳಿಂದ ಉದ್ಯೋಗದಲ್ಲಿ ಭಾರತ ಹೊಸತನವನ್ನು ಕಂಡುಕೊಳ್ಳಲಿದೆ ಎಂದು ಕೇಂದ್ರ ಕೌಶಾಲ್ಯಾಭಿವೃದ್ಧಿ ಸಚಿವ ಡಾ.ಮಹೇಂದ್ರನಾಥ್‌ ಪಾಂಡೆ ಹೇಳಿದರು.

ಕೇಂದ್ರ ಸರ್ಕಾರದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವಾಲಯ ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಲ್ಲಿ ಏರ್ಪಡಿಸಿದ್ದ ಭಾರತೀಯ ಕೌಶಲ್ಯಾಭಿವೃದ್ಧಿ ಸೇವಾ ಅಧಿಕಾರಿಗಳಿಗೆ ಬುನಾದಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಾರ್ಷಿಕ ಒಂದು ಕೋಟಿಗೂ ಹೆಚ್ಚು ಯುವಜನರಿಗೆ ಕೌಶಲ್ಯ ತರಬೇತಿ ನೀಡಿದೆ. ಈ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಲು ತೀರ್ಮಾನಿಸಲಾಗಿದೆ. ಮುಂಬರುವ ದಿನಗಳಲ್ಲಿ ಸರ್ಕಾರ ಮತ್ತಷ್ಟು ಕೌಶಲ್ಯ ಆಡಳಿತಗಾರರನ್ನು ತಯಾರು ಮಾಡಲಿದೆ. ಈ ಮೂಲಕ ಕೌಶಲ್ಯ ಭಾರತ ಮಿಶನ್‌ನ ಗುರಿಯನ್ನು ಸಾಧಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಕೌಶಲ್ಯಪೂರ್ಣವಾದ ಭಾರತೀಯರ ದೊಡ್ಡ ಸವಾಲನ್ನು ಎದುರಿಸಲು ಈ ಆಡಳಿತ ತರಬೇತಿಯು ಅತ್ಯುನ್ನತವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನಾಯಕತ್ವದಲ್ಲಿ ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಈ ಮೂಲಕ ಕೇವಲ ಭಾರತ ಮಟ್ಟದಲ್ಲಿ ಮಾನವಶಕ್ತಿಯನ್ನು ರೂಪಿಸುವುದಷ್ಟೇ ಅಲ್ಲ ಅಂತಾರಾಷ್ಟ್ರೀಯ ಮಟ್ಟಕ್ಕೂ ಪೂರಕವಾಗಿ ಮಾನವಶಕ್ತಿಯನ್ನು ರೂಪಿಸುವುದಾಗಿದೆ. ಈ ಹಿನ್ನೆಲೆಯಲ್ಲಿ ಐಎಸ್‌ಡಿಎಸ್‌ ಸೇವೆಗಳು ಕೌಶಲ್ಯಗಳು, ತಂತ್ರಜ್ಞಾನ, ನಿರ್ವಹಣೆ ಮತ್ತು ಸಾರ್ವಜನಿಕ ಸೇವೆಗಳ ತರಬೇತಿಯನ್ನು ಹೊಂದಿರುತ್ತವೆ ಎಂದು ಅವರು ಹೇಳಿದರು.

4 ತಿಂಗಳ ತರಬೇತಿ: ರಾಷ್ಟ್ರೀಯ ಯೋಜನೆಗಳನ್ನು ರಾಜ್ಯಸರ್ಕಾರಗಳು ತರಬೇತಿ, ಪರಿಸರ ವ್ಯವಸ್ಥೆ, ಕೈಗಾರಿಕೆ, ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಯಶಸ್ವಿಗೊಳಿಸಬೇಕು. ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಕೌಶಲ್ಯಾಭಿವೃದ್ಧಿ ಯೋಜನೆಗೆ ಕರ್ನಾಟಕ ಮುಖ್ಯಮಂತ್ರಿಗಳ ಸಹಯೋಗದಲ್ಲಿ ಈ ಸಂಸ್ಥೆಯಲ್ಲಿ ತರಬೇತಿ ನೀಡುತ್ತಿದ್ದು, ಈ ತರಬೇತಿಯಲ್ಲಿ ವಿವಿಧ ರಾಜ್ಯಗಳಿಂದ 24 ಅಧಿಕಾರಿಗಳು ಆಗಮಿಸಿದ್ದು, 4 ತಿಂಗಳ ಕಾಲ ತರಬೇತಿ ಪಡೆದು ಉತ್ತಮ ಕರ್ತವ್ಯ ನಿರ್ವಹಿಸಿ ಎಂದು ಶುಭ ಹಾರೈಸಿದರು.

ಉಸ್ತುವಾರಿ ಸಚಿವ ವಿ.ಸೋಮಣ್ಣ ಮಾತನಾಡಿ, ಮೈಸೂರು ನಗರದಲ್ಲಿ ಭಾರತ ಕೌಶಲ್ಯಾಭಿವೃದ್ಧಿ ಮತ್ತು ಸೇವೆಗಳ ಇಲಾಖೆಯ ಪ್ರಥಮ ತಂಡದ ಅಧಿಕಾರಿಗಳ ಸಾಮಾನ್ಯ ಬುನಾದಿ ತರಬೇತಿ ನಡೆಯಲಿದ್ದು, ಎಲ್ಲಾ ಅಧಿಕಾರಿಗಳು ಸೂಕ್ತ ತರಬೇತಿ ಪಡೆದುಕೊಳ್ಳಲು ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.

ಎ ಮತ್ತು ಬಿ ವೃಂದದ ಅಧಿಕಾರಿಗಳಿಗೆ ಸಾಮಾನ್ಯ ಬುನಾದಿ ಜೊತೆಯಲ್ಲಿ ಲಿಂಗ ಸಂವೇದನಾ ಶೀಲತೆ, ಮಹಿಳಾ ಅಧ್ಯಯನ, ಮಾಹಿತಿ ಹಕ್ಕು ಅಧಿನಿಯಮ, ಸಕಾಲ ಮುಂತಾದ ತರಬೇತಿ ಕಾರ್ಯಕ್ರಮಗಳನ್ನು ಅಧಿಕಾರಿಗಳ ಬೇಡಿಕೆಯನುಸಾರ ವಿವಿಧ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು ಇದರಿಂದ ಭಾರತದ ಯುವ ಅಧಿಕಾರಿಗಳಿಗೆ ಹೆಚ್ಚಿನ ಅನುಕೂಲ ಆಗಲಿದೆ ಹಾಗೂ ಉದ್ಯಮ ಕ್ಷೇತ್ರ ಬೆಳವಣಿಗೆಗೆ ಸಹಾಯವಾಗಲಿದೆ ಎಂದರು.

ಕೌಶಲ್ಯ ಕರ್ನಾಟಕ: ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆಯು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ರಾಜ್ಯ ಸರ್ಕಾರ ಅದರ ನಿರ್ವಹಣೆ ಮಾಡುತ್ತಿದೆ. ಇದಕ್ಕೆ ಪೂರಕವಾಗಿ ರಾಜ್ಯದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯಡಿ ಯುವ ವಿದ್ಯಾರ್ಥಿಗಳಿಗೆ ತರಬೇತಿ ಕೇಂದ್ರಗಳಲ್ಲಿ ಕೌಶಲ್ಯ ತರಬೇತಿ ನೀಡಿ ವಿವಿಧ ಉದ್ಯೋಗ ಸೃಷ್ಟಿಸಲು ಸಾಧ್ಯವಾಗಿದೆ ಎಂದರು. ರಾಜ್ಯದಲ್ಲಿ 40 ತರಬೇತಿ ಕೇಂದ್ರಗಳಿದ್ದು, 2019-20ರ ಅವಧಿಯಲ್ಲಿ 14,327 ಮಂದಿಗೆ ತರಬೇತಿ ನೀಡಲಾಗುವುದು.

ರಾಜ್ಯಸರ್ಕಾರವು ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರಗಳ ಜತೆಗೂಡಿ 8042 ಮಂದಿಗೆ ಮಾಹಿತಿ ನೀಡಿದ್ದು,359 ಮಂದಿ ಉದ್ಯೋಗ ಪಡೆದಿದ್ದಾರೆ ಎಂದು ಹೇಳಿದರು. ಸಂಸದ ಪ್ರತಾಪ್‌ ಸಿಂಹ, ಶಾಸಕರಾದ ಎಸ್‌.ಎ.ರಾಮದಾಸ್‌, ಎಲ್‌.ನಾಗೇಂದ್ರ, ನಿರಂಜನ್‌ ಕುಮಾರ್‌, ಭಾರತ ಸರ್ಕಾರದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆ ಕಾರ್ಯದರ್ಶಿ ಡಾ.ಕೆ.ಪಿ. ಕೃಷ್ಣನ್‌, ರಾಜೇಶ್‌ ಅಗರ್‌ವಾಲ್‌, ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಮಹಾ ನಿರ್ದೇಶಕ ಕಪಿಲ್‌ ಮೋಹನ್‌ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿಶ್ವದರ್ಜೆ ಕೌಶಲ್ಯ ತರಬೇತಿ: ಭಾರತದಲ್ಲಿ ಯುವ ಜನರ ಸಂಖ್ಯೆ ಹೆಚ್ಚಿದ್ದು, ಅವರು ಕೆಲಸ ಮಾಡುತ್ತಿರುವ ಕ್ಷೇತ್ರದಲ್ಲಿ ಪರಿಣಿತರಾಗಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ನಮ್ಮ ಸರ್ಕಾರವು ವಿಶ್ವದರ್ಜೆಯ ಕೌಶಲ್ಯ ತರಬೇತಿಯನ್ನು ನೀಡುತ್ತಿರುವುದರಿಂದ ಯುವಜನರು ದೇಶದೊಳಗೆ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಲಾಭ ಪಡೆಯಬಹುದಾಗಿದೆ. ಕೌಶಾಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಇಲಾಖೆಯಿಂದ ದೇಶದ ಭವಿಷ್ಯ ಉತ್ತಮವಾಗಲಿದೆ. ಭಾರತದಲ್ಲಿ ಯುವ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಿಗೆ ಕೌಶಲ್ಯ ತರಬೇತಿ ನೀಡುವುದರಿಂದ ಉದ್ಯಮಶೀಲತೆಗೆ ತುಂಬಾ ಪೂರಕವಾದ ಬೆಳವಣಿಗೆ ಕಂಡು ಬಂದಿದೆ ಎಂದು ಸಚಿವ ಡಾ.ಮಹೇಂದ್ರನಾಥ್‌ ಪಾಂಡೆ ತಿಳಿಸಿದರು.

ಟಾಪ್ ನ್ಯೂಸ್

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.