Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
ಗನ್ಮ್ಯಾನ್ ನೀಡುತ್ತಿಲ್ಲ ಎಂದು ಉಲ್ಲೇಖ
Team Udayavani, Dec 28, 2024, 10:35 AM IST
ಮೈಸೂರು: ತನಗೆ ಮತ್ತು ಕುಟುಂಬಕ್ಕೆ ಭದ್ರತೆ ನೀಡುವಂತೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವ ರಿಗೆ ಆರ್ ಟಿಐ ಕಾರ್ಯಕರ್ತ, ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣ ಅವರು ಬರೆದಿದ್ದಾರೆ.
ಮುಡಾದಲ್ಲಿನ 50:50ರ ಅನುಪಾತ ದಲ್ಲಿ ನಡೆದಿರುವ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯರ ಮತ್ತು ಅವರ ಕುಟುಂಬದ ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಈ ನಡುವೆ ಕೆಲವರು ನನಗೆ ಕರೆ ಮಾಡಿ ಬೆದರಿಕೆ ಹಾಕಿದ್ದರು. ನನಗೆ ಮತ್ತು ಕುಟುಂಬಕ್ಕೆ ಭದ್ರತೆ ನೀಡುವಂತೆ ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಗನ್ ಮ್ಯಾನ್ ನೀಡುವಂತೆ ಮನವಿ ಮಾಡಿದ್ದರೂ ಯಾವ ಭದ್ರತೆಯನ್ನು ನೀಡಿಲ್ಲ. ಆದ್ದರಿಂದ ನನ್ನ ಮತ್ತು ಕುಟುಂಬಕ್ಕೆ ರಕ್ಷಣೆ ಬೇಕಿದ್ದು, ಸೂಕ್ತ ಭದ್ರತೆ ಒದ ಗಿಸಿ ಎಂದು ಉಲ್ಲೇಖಿಸಿದ್ದಾರೆ.
2024ರ ಆ. 18ರಂದು ಮೈಸೂರು ಪೊಲೀಸ್ ಆಯುಕ್ತರಿಗೆ ಗನ್ಮ್ಯಾನ್ ನೀಡು ವಂತೆ ಮನವಿ ಪತ್ರ ಸಲ್ಲಿಸಿದರೂ ನಿರಾಕರಿಸಲಾಯಿತು. ಸಿಎಂ, ಪ್ರಭಾವಿ ವ್ಯಕ್ತಿಗಳ ವಿರುದ್ಧ ಹೋರಾಟ ನಡೆಸುತ್ತಿರುವುದರಿಂದ ಸರ್ಕಾರ ನನಗೆ ಭದ್ರತೆ ನೀಡಲು ನಿರಾಕರಿಸುತ್ತಿದೆ. ನಾನು, ನನ್ನ ಕುಟುಂಬ ಸಮಾಜದಲ್ಲಿ ಯೋಗಕ್ಷೇಮ ದಿಂದ ಇರಲು ಕೇಂದ್ರ ಸರಕಾರವು ಭದ್ರತೆ ಒದಗಿಸಬೇಕು ಎಂದು ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.