ರಾಜ್ಯದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ
Team Udayavani, May 30, 2023, 2:27 PM IST
ತಿ.ನರಸೀಪುರ: ರಾಜ್ಯ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ಬೆಂಗಳೂರಿನಲ್ಲಿ ತಿ.ನರಸೀಪುರದ ಕಾಂಗ್ರೆಸ್ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ದುರಾಡಳಿತದಿಂದ ಬೇಸತ್ತ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡುವ ಮೂಲಕ ಬಡವರ ಹಾಗೂ ಅಭಿವೃದ್ಧಿ ಪರ ಸರ್ಕಾರ ರಚನೆಗೆ ಕಾರಣರಾಗಿದ್ದಾರೆ. ಹೀಗಾಗಿ ರಾಜ್ಯದ ಜನತೆಯ ಆಶೋತ್ತರಗಳಿಗೆ ಅನುಗುಣವಾಗಿ ನಮ್ಮ ಸರ್ಕಾರ ಕಾರ್ಯ ನಿರ್ವಹಿಸಲಿದೆ ಎಂದರು.
ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ನೀಡಿದ್ದ 5 ಗ್ಯಾರಂಟಿಗಳಿಗೆ ಸಚಿವ ಸಂಪುಟದಲ್ಲಿ ಈಗಾಗಲೇ ಒಪ್ಪಿಗೆ ದೊರೆತಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಎಲ್ಲಾ ಗ್ಯಾರಂಟಿಗಳು ಹಾಗೂ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಎಲ್ಲಾ ಭರವಸೆಗಳನ್ನು ಜಾರಿ ಗೊಳಿಸುವ ಮೂಲಕ ನುಡಿದಂತೆ ನಡೆದ ಸರ್ಕಾರ ಎಂಬುದನ್ನು ಸಾಬೀತು ಪಡಿಸಲಾಗುವುದು ಎಂದು ತಿಳಿಸಿದರು.
ಸರ್ವತೋಮುಖ ಅಭಿವೃದ್ಧಿ: ಈ ಹಿಂದೆ ನಾನು ಸಚಿವನಾಗಿದ್ದ ವೇಳೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದೇನೆ. ಈ ಬಾರಿಯೂ ಕ್ಷೇತ್ರದ ಮತ್ತಷ್ಟು ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದ್ದೇನೆ. ಅವುಗಳನ್ನು ಹಂತ ಹಂತವಾಗಿ ಕಾರ್ಯ ರೂಪಕ್ಕೆ ತರುವ ಮೂಲಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.
ಜನರ ಕಷ್ಟ ಸುಖಗಳಿಗೆ ಸ್ಪಂದಿಸುವೆ: ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ನನಗೆ ಅತ್ಯಧಿಕ ಮತ ನೀಡಿ ಜಯಶೀಲರನ್ನಾಗಿಸಿದ್ದೀರಿ. ಹೀಗಾಗಿ ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಧಕ್ಕೆ ಬಾರದ ಹಾಗೇ ಕಾರ್ಯ ನಿರ್ವಹಿಸುತ್ತೇನೆ. ಈ ಹಿಂದೆ ಸಚಿವನಾಗಿದ್ದ ವೇಳೆ ಜವಾಬ್ದಾರಿ ಹೆಚ್ಚಾಗಿದ್ದರಿಂದ ಒತ್ತಡಕ್ಕೊಳಗಾಗಿ ಕ್ಷೇತ್ರದ ಜನತೆಯ ಕಷ್ಟ ಸುಖಗಳಿಗೆ ಸ್ಪಂದಿಸಲು ಸಾಧ್ಯವಾಗಿರಲಿಲ್ಲ. ಇದನ್ನೇ ಕೆಲವರು ತಪ್ಪಾಗಿ ಅರ್ಥೈಸಿದ್ದರು. ಹೀಗಾಗಿ ಈ ಬಾರಿ ತಿ.ನರಸೀಪುರ ಜನತೆಯ ಕಷ್ಟ ಸುಖಗಳಿಗೆ ಸ್ಪಂದಿಸುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ತಲುಪಿಸುತ್ತೇನೆ. ಇದಕ್ಕೆ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಡಿ.ಬಸವರಾಜು ಮಾತನಾಡಿ, ಕ್ಷೇತ್ರದ ಎಲ್ಲಾ ಸಮುದಾಯದವರು ಕಾಂಗ್ರೆಸ್ ಬೆಂಬಲಿಸುವ ಮೂಲಕ ಡಾ.ಎಚ್.ಸಿ .ಮಹದೇವಪ್ಪನ ವರ ಗೆಲುವಿಗೆ ಕಾರಣರಾಗಿದ್ದೀರಿ. ಹೀಗಾಗಿ ಮತದಾ ರರು ಸೇರಿದಂತೆ ಪಕ್ಷಕ್ಕಾಗಿ ದುಡಿದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಈ ಹಿಂದೆ ಮಹದೇವಪ್ಪನವರು ಲೋಕೋಪಯೋಗಿ ಸಚಿವರಾಗಿದ್ದ ವೇಳೆ ಸಾವಿರಾರು ಕೋಟಿ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿಗೊಳಿಸಿದ್ದರು. ಈ ಬಾರಿ ಅವರು ಮತ್ತಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಮೂಲಕ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿಯಾಗಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಒಕ್ಕಲಿಗರ ಸಂಘದ ಅಧ್ಯಕ್ಷ ಪಿ.ಸ್ವಾಮಿನಾಥಗೌಡ, ಭೈರಾಪುರ ಗ್ರಾಪಂ ಮಾಜಿ ಅಧ್ಯಕ್ಷ ಎ.ಜೆ. ವೆಂಕಟೇಶ್, ಪಾರುಪತ್ತೇಗಾರ್ ಎಂ.ಬಿ.ಸಾಗರ್, ಯುವ ಮುಖಂಡ ಸಂದೇಶ್ ಸ್ವಾಮಿನಾಥ್, ಡೇರಿ ಕಾರ್ಯದರ್ಶಿ ನಾಗೇಂದ್ರ, ಮೂಗೂರು ಕುಮಾರಸ್ವಾಮಿ, ಸಂದಾನಿಗೌಡ, ಸುಂದರನಾಯಕ, ಮಹದೇವಸ್ವಾಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.