ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಿ

Team Udayavani, Oct 24, 2018, 11:32 AM IST

m4-kabbu.jpg

ಮೈಸೂರು: ಸರ್ಕಾರದ ಆದೇಶವನ್ನು ಪಾಲಿಸದೆ ರೈತರನ್ನು ವಂಚಿಸುತ್ತಿರುವ ಜಿಲ್ಲೆಯ ಬಣ್ಣಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್‌ ಒತ್ತಾಯಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿರುವ ಅವರು, ಜಿಲ್ಲೆಯ ಬಣ್ಣಾರಿ ಸಕ್ಕರೆ ಕಾರ್ಖಾನೆ ರೈತರ ಕಬ್ಬು ಕಟಾವು ಮಾಡದೆ ವಿಳಂಬ ಮಾಡುತ್ತಿದೆ. ಮಂಡ್ಯ ಜಿಲ್ಲೆಯ ಹೊರಭಾಗದಿಂದ ಕಬ್ಬು ಸರಬರಾಜು ಮಾಡಿಕೊಳ್ಳುತ್ತಿರುವುದರಿಂದ ಸ್ಥಳೀಯ ರೈತರಿಗೆ ಕಬ್ಬು ಕಟಾವು ವಿಳಂಬವಾಗುತ್ತಿದೆ.ಇದರಿಂದ ಕಬ್ಬು ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ.

ರಾಜ್ಯ ಸರ್ಕಾರ ಸ್ಥಳೀಯ ರೈತರ ಕಬ್ಬನ್ನು ಪ್ರಥಮ  ಆದ್ಯತೆಯಲ್ಲಿ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳಬೇಕೆಂದು ಆದೇಶ ಹೊರಡಿಸಿದ್ದರೂ ಬಣ್ಣಾರಿ ಕಾರ್ಖಾನೆ ಈ ಆದೇಶವನ್ನು ಪಾಲಿಸುತ್ತಿಲ್ಲ. 2017-18ನೇ ಸಾಲಿನಲ್ಲಿ ಕಬ್ಬು ಸರಬರಾಜು ಮಾಡಿದ ರೈತರಿಗೆ ಎಫ್ಆರ್‌ಪಿ ಹಣ ಮಾತ್ರ ಪಾವತಿಸಿದ್ದು, ಎಸ್‌ಎಪಿ ದರದ ಬಾಬ್ತು ಅಂತಿಮ ಕಂತಿನ ಹಣ ಪಾವತಿಸಿಲ್ಲ. ಕೂಡಲೇ ಅಂತಿಮ ಕಂತಿನ ಹಣ ಕೊಡಿಸಲು ಕ್ರಮಕೈಗೊಳ್ಳಬೇಕು.

ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ನಡುವೆ ಕಾನೂನು ಬದ್ಧ ದ್ವಿಪಕ್ಷೀಯ ಒಪ್ಪಂದ ಪತ್ರ ಜಾರಿ ಮಾಡಿ ಆದೇಶ ಹೊರಡಿಸಿದ್ದರೂ ಬಣ್ಣಾರಿ ಕಾರ್ಖಾನೆಯವರು ತಮ್ಮಿಷ್ಟದಂತೆ ಏಕಪಕ್ಷೀಯವಾಗಿ ಒಪ್ಪಂದ ಪತ್ರ ಮುದ್ರಿಸಿಕೊಂಡು ರೈತರಿಂದ ಸಹಿ ಪಡೆಯುತ್ತಿದ್ದಾರೆ.

ಜೊತೆಗೆ ರಾಜ್ಯದಲ್ಲಿ ಎಸ್‌ಎಪಿ ಕಾಯ್ದೆ ಜಾರಿಗೆ ಬಂದ ಮೇಲೆ ಬಣ್ಣಾರಿ ಕಾರ್ಖಾನೆಯವರು ಸಕ್ಕರೆ ಇಳುವರಿಯನ್ನು ಕಡಿಮೆ ತೋರಿಸುತ್ತಿದ್ದಾರೆ. ಇದರಿಂದ ರೈತರಿಗೆ ಎಫ್ಆರ್‌ಪಿ ಬೆಲೆಯಲ್ಲಿ ನಷ್ಟವಾಗುತ್ತಿದೆ. ಹಿಂದಿನ ಹತ್ತು ವರ್ಷಗಳ ಇಳುವರಿ ಸರಾಸರಿಯನ್ನು ಪರಿಗಣಿಸಿ ಪ್ರಸಕ್ತ ಸಾಲಿಗೆ ಸಕ್ಕರೆ ಇಳುವರಿಗೆ ಪಾವತಿಸಬೇಕು ಅಥವಾ ಪ್ರತಿ ರೈತನ ಜಮೀನಿನ ಇಳುವರಿಯನ್ನು ಪರಿಗಣಿಸಿ ಎಫ್ಆರ್‌ಪಿ ಹಣ ಪಾವತಿಸುವಂತಾಗಬೇಕು. 

ಕೆಲ ರಾಷ್ಟ್ರೀಕೃತ ಬ್ಯಾಂಕುಗಳವರು ಕೃಷಿ ಸಾಲ ಪಡೆದಿರುವ ರೈತರ ಮೇಲೆ ಅನಾವಶ್ಯಕವಾಗಿ ನ್ಯಾಯಾಲಯದಲ್ಲಿ ದಾವೆ ದಾಖಲಿಸುತ್ತಿದ್ದಾರೆ. ರಾಜ್ಯ ಸರ್ಕಾರ ಸಾಲಮನ್ನಾ ಘೋಷಣೆ ಮಾಡಿದ್ದರೂ ರೈತರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದ್ದಾರೆ.

ಕಾವೇರಿ ಗ್ರಾಮೀಣ ಬ್ಯಾಂಕ್‌ನವರು ರೈತರ ಚಿನ್ನಾಭರಣಗಳನ್ನು ಗಿರವಿ ಇರಿಸಿಕೊಂಡು ಕೃಷಿ ಸಾಲ ನೀಡುವಾಗ ಹೆಚ್ಚಿನ ಬಡ್ಡಿ ವಿಧಿಸುತ್ತಿದ್ದು, ಸರ್ಕಾರದ ಸಹಾಯಧನ, ಬೆಳೆ ವಿಮೆಗಳ ಹಣವನ್ನು ಬೆಳೆಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿದ್ದಾರೆ. ಕೂಡಲೇ ಇತ್ತ ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

5

Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

4

Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.