ಕನ್ನಡ ನಾಡಲ್ಲಿ ಐಕ್ಯತೆ ಭಾವ ಬಿತ್ತಿ


Team Udayavani, Nov 2, 2018, 12:07 PM IST

m1-kannada.jpg

ಮೈಸೂರು ಜಿಲ್ಲಾದ್ಯಂತ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮಗಳಲ್ಲಿ ಕನ್ನಡ ನಾಡು, ನುಡಿ, ಭಾಷೆ, ನೆಲ, ಜಲ ರಕ್ಷಣೆ ಕುರಿತು ಭಾಷಣ ಮಾಡಲಾಯಿತು. ಶಾಲಾ ಕಾಲೇಜು, ವಿವಿಧ ಸಂಘಟನೆ, ಸರ್ಕಾರಿ, ಖಾಸಗಿ ಸಂಸ್ಥೆಗಳಲ್ಲಿಯೂ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಗ್ರಾಮ, ಪಟ್ಟಣ, ನಗರಗಳಲ್ಲಿ ಕನ್ನಡಾಂಬೆಯ ವಿಜೃಂಭಣೆಯ ಮೆರವಣಿಗೆ ಮಾಡಿ ಸಂಭ್ರಮಿಸಲಾಯಿತು. 

ಮೈಸೂರು: ಕನ್ನಡದ ಮೂಲಕವೇ ಕರ್ನಾಟಕವನ್ನು ಕಟ್ಟುವ ಪ್ರಯತ್ನ ಮಾಡಿದ ಹಿರಿಯ ಸಾಹಿತಿಗಳನ್ನು ಸ್ಮರಿಸುವ ಮೂಲಕ ನಾಡು ಕಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕಾರ್ಯೋನ್ಮುಖರಾಗಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಸಲಹೆ ನೀಡಿದರು.

ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರ ಹಾಗೂ ರಾಜ್ಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡನಾಡಿಗೆ ಪೌರಾಣಿಕ, ಐತಿಹಾಸಿಕ ಮಹತ್ವವಿದ್ದು, ಅನೇಕ ಸಂಸ್ಕೃತ ಪ್ರಾಚೀನ ಕೃತಿಗಳಲ್ಲಿ ಕನ್ನಡನಾಡಿನ ಉಲ್ಲೇಖವಿದೆ. ಜತೆಗೆ ಕನ್ನಡಭಾಷೆ ಹಾಗೂ ಸಾಹಿತ್ಯಕ್ಕಿರುವ ಸಾವಿರಾರು ವರ್ಷಗಳ ಇತಿಹಾಸ ಹೊಂದಿದ್ದು, ಇಂದಿನ ಪರಭಾಷಾ ಪ್ರಭಾವಗಳ ನಡುವೆಯೂ ಕನ್ನಡ ಭಾಷೆ-ಸಾಹಿತ್ಯದ ಪ್ರಭಾವ ಇಂದಿಗೂ ಜೀವಂತವಾಗಿದೆ ಎಂದು ಹೇಳಿದರು. 

ನಾಡು-ನುಡಿ ಏಳಿಗೆಗೆ ಶ್ರಮಿಸಿ: ಕನ್ನಡದ ಅನೇಕ ಶ್ರೇಷ್ಠ ಕವಿಗಳು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದು, ಕನ್ನಡನಾಡಿನ ಸಂಸ್ಕೃತಿ, ಮಾನವೀಯತೆ, ಧೈರ್ಯ, ಸಾಹಸ, ಸೇವೆ ಮುಂತಾದ ಮೌಲ್ಯಗಳನ್ನು ತಮ್ಮ ಕೃತಿಗಳಲ್ಲಿ ಅಭಿವ್ಯಕ್ತಪಡಿಸಿದ್ದಾರೆ. ಇವರೊಂದಿಗೆ ಕರ್ನಾಟಕ ರಾಜ್ಯದಲ್ಲಿ ಆಳ್ವಿಕೆ ನಡೆಸಿದ ಅನೇಕ ರಾಜವಂಶದ ಅರಸರು ಕನ್ನಡ ನಾಡು-ನುಡಿಯ ಅಭಿವೃದ್ಧಿಗೆ ಹೊಸ ಭಾಷ್ಯವನ್ನು ಬರೆದಿದ್ದಾರೆ.

ಹೀಗಾಗಿ ಇಂತಹ ಕನ್ನಡದ ಹಬ್ಬಗಳಿಂದ ಹಳ್ಳಿಹಳ್ಳಿಯ ಸಾಮಾನ್ಯ ಜನರು ಒಂದಾಗಿ ನಾಡು-ನುಡಿಯ ಏಳಿಗೆಗೆ ಶ್ರಮಿಸಬೇಕಿದೆ. ನಮ್ಮ ಯುವಜನತೆಗೆ ಕನ್ನಡ ಭಾಷೆಯ ಸಾಹಿತ್ಯ, ಜನಪದ, ಒಗಟಿನ ಪರಿಚಯ ಮಾಡಿಸಿ, ಕನ್ನಡಿಗರೆಲ್ಲರೂ ಒಂದು ಎಂಬ ಭಾವನೆ ಮೂಡಿಸಬೇಕು. ಆ ಮೂಲಕ ಎಲ್ಲೆಡೆ ಕನ್ನಡದ ಕಂಪನ್ನು ಪಸರಿಸಿ, ಕನ್ನಡದ ಕೀರ್ತಿ ಪತಾಕೆ ಹಾರಿಸಬೇಕಿದೆ ಎಂದು ಹೇಳಿದರು. 

ಭುವನೇಶ್ವರಿಗೆ ಪೂಜೆ: ಕನ್ನಡ ರಾಜ್ಯೋತ್ಸವದ ಆವರಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಚಿವ ಜಿ.ಟಿ.ದೇವೇಗೌಡ ಹಾಗೂ ಇನ್ನಿತರರು ಅರಮನೆ ಆವರಣದಲ್ಲಿರುವ ತಾಯಿ ಭುವನೇಶ್ವರಿ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. 

ಸಮಾರಂಭದ ವೇದಿಕೆಯಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಭುವನೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕನ್ನಡಾಂಬೆಗೆ ನಮನ ಸಲ್ಲಿಸಿದರು. ಬಳಿಕ ಸಚಿವ ಜಿ.ಟಿ.ದೇವೇಗೌಡ ರಾಷ್ಟ್ರ ಹಾಗೂ ರಾಜ್ಯ ಧ್ವಜಗಳ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪೊಲೀಸ್‌ ಬ್ಯಾಂಡ್‌ ಸಿಬ್ಬಂದಿ ರಾಷ್ಟ್ರಗೀತೆ ನುಡಿಸಿದರೆ, ಹಂಸಿಣಿ ಮತ್ತು ತಂಡದವರು ನಾಡಗೀತೆ ಪ್ರಸ್ತುತಪಡಿಸಿದರು. 

ಆಕರ್ಷಕ ಪಥಸಂಚಲನ: ಸಮಾರಂಭದ ಅಂಗವಾಗಿ ವಿವಿಧ ಪೊಲೀಸ್‌ ತುಕಡಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು. ಪ್ರಮುಖವಾಗಿ ನಗರ ಹಾಗೂ ಸಶಸ್ತ್ರ ಮೀಸಲು ಪಡೆ, ಸಿಎಆರ್‌, ನಗರ ನಾಗರಿಕ ಪೊಲೀಸ್‌, ನಗರ ಸಂಚಾರ ಪೊಲೀಸ್‌, ಮಹಿಳಾ ಪೊಲೀಸ್‌, ಗೃಹ ರಕ್ಷಕದಳ, ಅಶ್ವಾರೋಹಿ ದಳ, ಪೋಲೀಸ್‌ ಬ್ಯಾಂಡ್‌ ಸಿಬ್ಬಂದಿಯೊಂದಿಗೆ ಅಲಿಲ್‌ ಜೇಮ್ಸ್‌ ಶಾಲೆ, ಗಣಪತಿ ಸಚ್ಚಿದಾನಂದ ಶಾಲೆ, ಸಾವಿತ್ರಿ ಕಾನ್ವೆಂಟ್‌ ಶಾಲಾ, ಕರುಣಾಮಯಿ ಶಾಲೆ ಸೇರಿದಂತೆ ಇನ್ನಿತರ ಶಾಲೆಗಳ ಮಕ್ಕಳು ಪ್ರಧಾನ ದಳಪತಿ ಎಂ.ಜಿ.ನಾಗರಾಜ್‌ ನೇತೃತ್ವದಲ್ಲಿ ಶಿಸ್ತುಬದ್ಧ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದರು. 

ಕಲಾತಂಡಗಳ ಮೆರಗು: ಸಮಾರಂಭದ ಅಂಗವಾಗಿ ನಡೆದ ತಾಯಿ ಭುವನೇಶ್ವರಿ ದೇವಿಯ ಪುತ್ಥಳಿ ಮೆರವಣಿಗೆ ಕಾರ್ಯಕ್ರಮದ ಮೆರಗನ್ನು ಹೆಚ್ಚಿಸಿತು. ನಂದಿಧ್ವಜ, ವೀರಭದ್ರನ ಕುಣಿತ, ಡೊಳ್ಳು ಕುಣಿತ, ನಾದಸ್ವರ, ಪೂಜಾ ಕುಣಿತ ಹಾಗೂ ಕಂಸಾಳೆ ತಂಡಗಳ ಜತೆಗೆ ಭುವನೇಶ್ವರಿ ದೇವಿ, ವಿಜಯನಗರ ಸಾಮ್ರಾಜ್ಯದ ದರ್ಬಾರ್‌ ನೆನಪಿಸುವ ಸ್ಥಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಿದವು.

ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಿಂದ ಹೊರಟ ಮೆರವಣಿಗೆ ಕೆ.ಆರ್‌.ವೃತ್ತ, ಸಯ್ನಾಜಿರಾವ್‌ ರಸ್ತೆ, ಕೆ.ಆರ್‌. ಆಸ್ಪತ್ರೆ ವೃತ್ತ, ಇರ್ವಿನ್‌ ರಸ್ತೆ, ಅಶೋಕ ರಸ್ತೆ ಮಾರ್ಗದಲ್ಲಿ ಸಾಗಿ ಪುರಭವನದ ಆವರಣದಲ್ಲಿ ಅಂತ್ಯಗೊಂಡಿತು. ಸಮಾರಂಭದಲ್ಲಿ ಶಾಸಕರಾದ ರಾಮದಾಸ್‌, ತನ್ವೀರ್‌ ಸೇಠ್, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌, ನಗರ ಪೊಲೀಸ್‌ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರರಾವ್‌ ಇನ್ನಿತರರು ಹಾಜರಿದ್ದರು. 

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.