ಇ-ತ್ಯಾಜ್ಯ ಮುಕ್ತ-ಹಸಿರು ಮೈಸೂರಾಗಿಸಲು ವಿಶೇಷ ಅಭಿಯಾನ


Team Udayavani, Sep 15, 2019, 3:00 AM IST

e-tyajya

ಮೈಸೂರು: ದೇಶದ ಸ್ವತ್ಛ ನಗರಿ ಮೈಸೂರನ್ನು ಇ-ತ್ಯಾಜ್ಯ ಮುಕ್ತ-ಹಸಿರು ಮೈಸೂರಾಗಿಸಲು ವಿಶೇಷ ಅಭಿಯಾನ ರೂಪಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆ.17ರಂದು ಈ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಶಾಸಕ ಎಸ್‌.ಎ.ರಾಮದಾಸ್‌ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಜನ್ಮದಿನವನ್ನು ಭಾರತದ ವಿಕಾಸ ದಿನವನ್ನಾಗಿ ಆಚರಣೆ ಮಾಡುವ ಜತೆಗೆ ಮೈಸೂರನ್ನು ಇ-ತ್ಯಾಜ್ಯ ಮುಕ್ತ ನಗರವನ್ನಾಗಿಸಲು ಕಾರ್ಯಕ್ರಮ ರೂಪಿಸಲಾಗಿದೆ. ಮೈಸೂರು ಮಹಾ ನಗರಪಾಲಿಕೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್‌ ಇಲಾಖೆ, ಸ್ವಯಂಸೇವಾ ಸಂಸ್ಥೆಗಳಾದ ಆಸರೆ, ಲೆಟ್ಸ್‌ ಡು ಇಟ್‌, ಜಿಎಸ್‌ಎಸ್‌ ಯೋಗ ಸಂಸ್ಥೆ, ಸಿಐಐ ನೆರವಿನೊಂದಿಗೆ ಈ ಅಭಿಯಾನವು ತಿಂಗಳಿಗೆ ಒಂದು ದಿನ ನಿರಂತರವಾಗಿ ನಡೆಯಲಿದೆ ಎಂದರು.

ಘಟಕ ಸ್ಥಾಪನೆಗೆ ಮನವಿ: ಪ್ಲಾಸ್ಟಿಕ್‌ ರಹಿತ ಸ್ವತ್ಛ ಭಾರತದ ಮೋದಿ ಅವರ ಕಲ್ಪನೆಯನ್ನು ಸಾಕಾರಗೊಳಿಸಲು ರಾಜ್ಯದಲ್ಲೇ ಪ್ರಥಮವಾಗಿ ಈ ವಿನೂತನ ಕಾರ್ಯಕ್ರಮ ರೂಪಿಸಲಾಗಿದೆ. ಅಂದು ಮನೆಗಳು, ಅಂಗಡಿಗಳು, ಸಂಸ್ಥೆಗಳಿಂದ ಇ-ತ್ಯಾಜ್ಯ ಸಂಗ್ರಹಣೆ ಮಾಡಲಾಗುವುದು. ಇದರಿಂದ ಬರುವ ಹಣವನ್ನು ಮೈಸೂರಿನ ಹಸಿರೀಕರಣಕ್ಕೆ ಬಳಸಲು ಉದ್ದೇಶಿಸಲಾಗಿದೆ. ಇ-ತ್ಯಾಜ್ಯ ವಿಲೇವಾರಿ ಘಟಕವನ್ನು ಮೈಸೂರಿನಲ್ಲೂ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.

ಕಲ್ಯಾಣ ಮಂಟಪ ಬಳಕೆ: ಸದ್ಯಕ್ಕೆ ಇ-ತ್ಯಾಜ್ಯ ಸಂಗ್ರಹಿಸಲು ನಗರದಲ್ಲಿರುವ ಸಿಐಟಿಬಿ ಕಲ್ಯಾಣ ಮಂಟಪಗಳನ್ನು ಬಳಸಿಕೊಳ್ಳಲಾಗುವುದು. ಬಳಿಕ ಎಲ್ಲ ತ್ಯಾಜ್ಯವನ್ನು ವಿಲೇವಾರಿ ಮಾಡುವ ಸಂಸ್ಥೆಗೆ ಒಪ್ಪಿಸುತ್ತೇವೆ ಎಂದು ತಿಳಿಸಿದರು. ಡಿಸಿಪಿ ಎಂ.ಮುತ್ತುರಾಜ್‌ ಮಾತನಾಡಿ, ನಗರದ 26ಠಾಣೆಗಳಿಂದಲೂ ಸೆ.17ರಂದು ಏಕಕಾಲಕ್ಕೆ ಎಲೆಕ್ಟ್ರಾನಿಕ್‌ ವಸ್ತುಗಳನ್ನು ವಿಲೇವಾರಿ ಮಾಡಲಾಗುವುದು ಎಂದರು.

ಡಿಡಿಪಿಐ ಪಾಂಡುರಂಗ ಮಾತನಾಡಿ, ಶಾಲಾ ಮಕ್ಕಳು ತಮ್ಮ ಪೋಷಕರಿಗೆ ಹೇಳಿ ಇ-ತ್ಯಾಜ್ಯವನ್ನು ಕೊಡಿಸಬಹುದು. ಇಲ್ಲದಿದ್ದರೆ ಆಯಾಯ ಶಾಲೆಗೆ ತಂದೊಪ್ಪಿಸಬಹುದು ಎಂದು ಹೇಳಿದರು. ಜಿಎಸ್‌ಎಸ್‌ ಯೋಗ ಫೌಂಡೇಷನ್‌ನ ಶ್ರೀ ಹರಿ, ಪಾಲಿಕೆ ಆರೋಗ್ಯಾಧಿಕಾರಿಗಳಾದ ಜಯಂತ್‌,ನಾಗರಾಜು ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಇ-ತ್ಯಾಜ್ಯ ಸಂಗ್ರಹಣೆಗೆ ಮನೆ ಮನೆ ಭೇಟಿ: ಈ ವಿಶೇಷ ಅಭಿಯಾನದ ಅಂಗವಾಗಿ ಸೆ.17ರಂದು ಮೈಸೂರಿನ ಮನೆಗಳಿಂದ ಹಸಿ-ಒಣ ಕಸ ಸಂಗ್ರಹಿಸದೆ ಬರೀ ಇ-ತ್ಯಾಜ್ಯ ಮಾತ್ರ ಸಂಗ್ರಹಿಸಲಾಗುವುದು. ಈ ಅಭಿಯಾನದಲ್ಲಿ 235 ತಳ್ಳುವ ಗಾಡಿಗಳನ್ನು ಬಳಸಿಕೊಳ್ಳಲಾಗುತ್ತಿದ್ದು, ಒಂದೊಂದು ಗಾಡಿಗೆ ಇಬ್ಬರು ಪೌರ ಕಾರ್ಮಿಕರಂತೆ 470 ಮಂದಿ, 165 ಆಟೋ ಟಿಪ್ಪರ್‌ಗೆ ಇಬ್ಬರು ಪೌರ ಕಾರ್ಮಿಕರಿಬ್ಬರಂತೆ 330 ಮಂದಿಯನ್ನು ಬಳಸಿಕೊಂಡು ಎಲ್ಲಾ ಮನೆಗಳಿಂದಲೂ ಇ-ತ್ಯಾಜ್ಯ ಸಂಗ್ರಹಿಸಲಾಗುತ್ತದೆ. ಈ ಸಂಬಂಧ ವಲಯ ಕಚೇರಿಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದು,ಅನುಪಯುಕ್ತ ಇ-ತ್ಯಾಜ್ಯಗಳನ್ನು ತಂದು ಕೊಡಬಹುದಾಗಿದೆ ಎಂದು ಮಹಾ ನಗರಪಾಲಿಕೆ ಆಯುಕ್ತ ಗುರುದತ್ತ ಹೆಗ್ಡೆ ತಿಳಿಸಿದರು.

ಅಂದು ಬಳಸಿದ ಎಲೆಕ್ಟ್ರಾನಿಕ್‌ ವಸ್ತುಗಳಾದ ಟ್ಯೂಬ್‌ಲೈಟ್‌, ಚಾರ್ಜರ್‌, ಮೊಬೈಲ್‌ ಫೋನ್‌, ಗಣಕಯಂತ್ರ, ಪ್ರಿಂಟರ್‌ ಅಲ್ಲದೆ ದುಷ್ಪರಿಣಾಮ ಬೀರುವಂತಹ ವಸ್ತುಗಳನ್ನು ಪಡೆಯಲಾಗುತ್ತದೆ. ಸಾರ್ವಜನಿಕರು ನಗರವನ್ನು ಹೆಚ್ಚು ಸುಂದರವಾಗಿಡಲು ತ್ಯಾಜ್ಯವಸ್ತುಗಳನ್ನು ಪರಿಣಾಮಕಾರಿಯಾಗಿ ಸಂಸ್ಕರಣೆ ಮಾಡುವ ಹಾಗೂ ಪರಿಸರವನ್ನು ಕಾಪಾಡಿ ಸಂರಕ್ಷಿಸಲು ಪಾಲಿಕೆಯೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದರು.

17ರಂದು ಡಿ.ಎಲ್‌ ವಿತರಣೆ ಅಭಿಯಾನ: ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನವಾದ ಸೆ.17ರಂದು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಡಿ.ಎಲ್‌. ವಿತರಣೆ ಅಭಿಯಾನ ಆಯೋಜಿಸಲಾಗಿದೆ. ಮಧ್ಯಾಹ್ನ 12ಕ್ಕೆ ನಡೆಯಲಿರುವ ಸಮಾರಂಭವನ್ನು ಉಪಮುಖ್ಯಮಂತ್ರಿಗಳೂ ಆದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸಿ ಅರ್ಹರೆಲ್ಲರಿಗೂ ಎಲ್‌ಎಲ್‌ಆರ್‌, ಡಿಎಲ್‌ ನೀಡುವ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ರಾಮದಾಸ್‌ ತಿಳಿಸಿದರು.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.