ಮತಗಟ್ಟೆಗಳಲ್ಲಿ ಅಂಗವಿಕಲರಿಗೆ ವಿಶೇಷ ವ್ಯವಸ್ಥೆ
Team Udayavani, May 10, 2018, 4:53 PM IST
ಭೇರ್ಯ: ಅಂಗವಿಕಲರು ಮತಗಟ್ಟೆಗೆ ಆಗಮಿಸಿ, ಮತದಾನ ಮಾಡಲು ವಿಶೇಷ ವಾಗಿ ವೀಲ್‌ಚೇರ್ ವ್ಯವಸ್ಥೆ ಮಾಡಲಾಗಿದೆ ಎಂದು ಚುನಾವಣೆ ತಾಲೂಕು ನೋಡಲ್ ಅಧಿಕಾರಿ ಹಾಗೂ ತಾಪಂ ಇಒ ಲಕ್ಷ್ಮೀ ಮೋಹನ್ ತಿಳಿಸಿದರು.
ಸಮೀಪದ ನರಚನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮತದಾನ ಜಾಗೃತಿ ಜಾಥಾ ಅಭಿಯಾನ ನಡೆಸಿ ಮಾತನಾಡಿದ ಅವರು, ತಾಲೂಕಿನ 34 ಗ್ರಾಮ ಪಂಚಾಯಿತಿಯಲ್ಲಿ ಸುಮಾರು 2308 ವಿಶೇಷ ಚೇತನ ಮತದಾರರಿದ್ದಾರೆ. ಚುನಾವಣೆ ಆಯೋಗ ವಿಶೇಷ ಚೇತನರಿಗಾಗಿಯೇ ವಿಶೇಷವಾಗಿ ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಕಡ್ಡಾಯ ಮತದಾನಕ್ಕೆ ವಿಶೇಷ ವ್ಯವಸ್ಥೆ ಕಲ್ಪಿಸಿದೆ ಎಂದರು.
ನೇರ ಪ್ರವೇಶ: ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಸುಮಾರು 14-20 ವಿಶೇಷಚೇತನ ಮತದಾರರಿದ್ದು, ಇವರಿಗೆ ನಮ್ಮ ಗ್ರಾಮ ಪಂಚಾಯಿತಿಯ ಪಿಡಿಒಗಳು ವಿಶೇಷಚೇತನರ ಮನೆಗೆ ವೀಲ್‌ಚೇರ್ ಮೂಲಕ ತೆರಳಿ, ಮತಗಟ್ಟೆಗೆ ಕರೆತಂದು ನೇರ ಪ್ರವೇಶದಿಂದ ಮತದಾನ ಮಾಡಿಸಲಾಗುತ್ತದೆ. ವಿಶೇಷಚೇತನರಿಗೆ ಮತದಾನ ಮಾಡಿದ ಬಳಿಕ ಮಜ್ಜಿಗೆ, ತಂಪು ಪಾನೀಯ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಎಂದರು.
ಮಹಿಳೆಯರ ಸರದಿ: ಈ ಬಾರಿಯ ಚುನಾವಣೆಯಲ್ಲಿ 70 ವರ್ಷದ ದಾಟಿದ ಹಿರಿಯ ನಾಗರಿಕರಿಗೆ ತಮ್ಮ ಮತದಾನದ
ಹಕ್ಕನ್ನು ಚಲಾಯಿಸಲು ನೇರ ಪ್ರವೇಶ ನೀಡಲಾಗಿದೆ. ಮಹಿಳೆಯರಿಗೆ ಪ್ರತ್ಯೇಕ ಸರದಿ ಮಾಡಲಾಗಿದೆ. ಮತದಾರರು ಇದರ ಸದಪಯೋಗ ಪಡೆದುಕೊಳ್ಳಬೇಕು. ಗ್ರಾಮ ಪಂಚಾಯಿತಿಯ ಎಂಟು ಗ್ರಾಮಗಳಲ್ಲಿಯೂ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ವಿವಿಧ ಮಹಿಳಾ ಸಂಘದ ಸದಸ್ಯರೊಂದಿಗೆ ತೆರಳಿ ಕಡ್ಡಾಯ ಮತದಾನ ಮಾಡಿ, ಭ್ರಷ್ಟ ಮುಕ್ತ ಶಾಸಕರನ್ನು ಆಯ್ಕೆ ಮಾಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಸುಮಿತ್ರ, ಪಿಡಿಒ ಸಂತೋಷ್, ತಾಪಂ ಮೇಲ್ವಿಚಾರಕ
ಅಂಕನಹಳ್ಳಿ ಮಂಜುನಾಥ್, ಗ್ರಾಪಂ ಸಿಬ್ಬಂದಿ ವರ್ಗ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ವಿವಿಧ ಮಹಿಳಾ ಸಂಘದ ಸದಸ್ಯರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
MUST WATCH
ಹೊಸ ಸೇರ್ಪಡೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.