ವಾಕ್-ಶ್ರವಣ ಸಮಸ್ಯೆಗಳಿಗೆ ಆಧುನಿಕ ಯಂತ್ರ ಸಂಶೋಧನೆ ಅವಶ್ಯ
Team Udayavani, Jan 6, 2018, 11:31 AM IST
ಮೈಸೂರು: ದೇಶದಲ್ಲಿ ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ವಾಕ್ ಮತ್ತು ಶ್ರವಣ ಸಮಸ್ಯೆಗಳಿಗೆ ಸಂಬಂಧಿಸಿದ ಆಧುನಿಕ ಯಂತ್ರೋಪಕರಣಗಳನ್ನು ಸಂಶೋಧನೆ ಮಾಡಬೇಕಿದೆ ಎಂದು ರಾಜ್ಯಪಾಲ ವಜುಬಾಯ್ ವಾಲಾ ಹೇಳಿದರು.
ಶುಕ್ರವಾರ ನಗರದ ಆಯಿಷ್‌ನ ಪಂಚವಟಿ ಆವರಣದಲ್ಲಿ ಆಯೋಜಿಸಿದ್ದ ಭಾರತೀಯ ವಾಕ್-ಶ್ರವಣ ಸಂಘದ 50ನೇ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಈ ಹಿಂದೆ ಯಾವುದೇ ಕ್ಷೇತ್ರದಲ್ಲಿ ಸಂಶೋಧನೆಗಳು ಕಡಿಮೆ ಇತ್ತು. ಆದರೆ, ಪ್ರಸ್ತುತ ಸಂದರ್ಭದಲ್ಲಿ ಉಪಗ್ರಹಗಳ ಉಡಾವಣೆ, ವಿಮಾನ ತಯಾರಿಕೆ ಸೇರಿದಂತೆ ದೇಶದ ಬಹುತೇಕ ಕ್ಷೇತ್ರಗಳು ಆಧುನಿಕ-ತಂತ್ರಜಾnನ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿವೆ.
ಆದ್ದರಿಂದ ವಾಕ್ ಮತ್ತು ಶ್ರವಣ ಕ್ಷೇತ್ರದಲ್ಲೂ ಸಂಶೋಧನೆಗಳಿಗೆ ಆದ್ಯತೆ ನೀಡುವ ಮೂಲಕ ಹೊಸ ಆವಿಷ್ಕಾರಗಳ ಬಗ್ಗೆ ಸಂಶೋಧನೆ ಮಾಡಬೇಕಿದೆ. ಪ್ರಸ್ತುತ ಸಂದರ್ಭದಲ್ಲಿ ವಾಕ್ ಮತ್ತು ಶ್ರವಣ ಕ್ಷೇತ್ರಕ್ಕೆ ಸಂಬಂಧಿಸಿದ ಅನೇಕ ಉಪಕರಣಗಳನ್ನು ಹೊರ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಆದರೆ, ನಮ್ಮ ದೇಶದಲ್ಲೇ ಇವುಗಳ ಸಂಶೋಧನೆ ಹಾಗೂ ಉತ್ಪಾದನೆ ಮಾಡುವ ಸಾಮರ್ಥ್ಯ ಹೊಂದಿದರೆ, ದುಬಾರಿ ಬೆಲೆಯ ಉಪಕರಣಗಳು ಜನರಿಗೆ ಕಡಿಮೆ ದರದಲ್ಲಿ ಸಿಗುವಂತೆ ಮಾಡಬಹುದಾಗಿದೆ ಎಂದರು.
ಪ್ರಮಾಣಿಕ ಪ್ರಯತ್ನ ಅವಶ್ಯ: ಒಂದು ಕಾಲದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಪುರುಷರು ಹೆಚ್ಚಾಗಿ ಚಿನ್ನದ ಪದಕಗಳನ್ನು ಪಡೆಯುತ್ತಿದ್ದರು. ಆದರೆ, ಇಂದು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಚಿನ್ನದ ಪದಕಗಳನ್ನು ಪಡೆಯುವ ಮೂಲಕ ತಮ್ಮಲ್ಲಿರುವ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.
ಈ ನಿಟ್ಟಿನಲ್ಲಿ ಯಾವುದೇ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ನಿರ್ದಿಷ್ಟ ಪ್ರಾಮಾಣಿಕ ಪ್ರಯತ್ನದ ಜತೆಗೆ ಧ್ಯೇಯದೊಂದಿಗೆ ಮುನ್ನಡೆಯಬೇಕಿದ್ದು, ಪ್ರತಿ ಕೆಲಸದಲ್ಲೂ ಫಲಿತಾಂಶ ದೊರೆಯುವ ರೀತಿಯಲ್ಲಿ ಕೆಲಸ ಮಾಡಿದಾಗ ಮಾತ್ರ ಸಾಧನೆಯ ಹಾದಿಯಲ್ಲಿ ಯಶಸ್ಸು ಗಳಿಸಲು ಸಾಧ್ಯವಿದೆ. ಈ ರೀತಿಯ ಸಾಧನೆಗಳನ್ನು ಮಾಡುವ ಮೂಲಕ ವಿಶ್ವಮಟ್ಟದಲ್ಲಿ ಮನ್ನಣೆ ಪಡೆಯಲು ನೆರವಾಗಲಿದೆ ಎಂದು ಹೇಳಿದರು.
ಸೇವಾ ಮನೋಭಾವವಿರಲಿ: ವೈದ್ಯಕೀಯ ವೃತ್ತಿ ಎಂಬುದು ಸೇವೆ ಆಧಾರಿತ ಕೆಲಸವಾಗಿದ್ದು, ಹಣಗಳಿಕೆಯ ಉದ್ದೇಶ ಮುಖ್ಯವಾಗಬಾರದು. ಕೆಲವು ದಿನಗಳ ಹಿಂದೆ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ-2017 (ಕೆಪಿಎಂಇ) ವಿಚಾರದಲ್ಲಿ ಸರ್ಕಾರ ಹಾಗೂ ವೈದ್ಯರ ನಡುವೆ ಉಂಟಾಗಿದ್ದ ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲಾಗಿದ್ದು, ಇದು ವೈದ್ಯರಿಗೆ ಸಂತೃಪ್ತಿ ನೀಡಿತು.
ಅದೇ ರೀತಿಯಲ್ಲಿ ವೈದ್ಯರು ಉತ್ತಮ ಸೇವೆಯ ಮೂಲಕ ರೋಗಿಗಳಿಗೆ ತೃಪ್ತಿಯಾಗುವಂತೆ ಕೆಲಸ ಮಾಡಬೇಕಿದೆ. ದೇಶದಲ್ಲಿ ಬಡವರ ಸಂಖ್ಯೆ ಹೆಚ್ಚಾಗಿದ್ದು, ಹೀಗಾಗಿ ವೈದ್ಯರು ಹಣವಂತರಿಂದ ಹಣಪಡೆದು ಬಡವರಿಗೆ ಅನುಕೂಲವಾಗುವ ರೀತಿಯಲ್ಲಿ ಸೇವೆ ನೀಡಬೇಕಿದೆ ಎಂದರು.
ಇದೇ ಸಂದರ್ಭದಲ್ಲಿ ವಾಕ್ ಮತ್ತು ಶ್ರವಣ ಕ್ಷೇತ್ರದಲ್ಲಿ ಗಣನೀಯ ಸೇವೆಸಲ್ಲಿಸಿದ ಮುಂಬೈನ ಡಾ.ಗಾಯತ್ರಿ ಹತ್ತಂಗಡಿ, ಮಂಗಳೂರಿನ ಕಸ್ತೂರ್ ಬಾ ಮೆಡಿಕಲ್ ಕಾಲೇಜಿನ ಡಾ.ಜಯಶ್ರೀ ಎಸ್.ಭಟ್, ಕಲ್ಲಿಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಸಮೀರ್ ಪೂತೇರಿ ಅವರಿಗೆ ವಾರ್ಷಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
ಸಂಸ್ಥೆಗೆ ಭೂಮಿ: ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಮಾತನಾಡಿ, ಜಯಚಾಮರಾಜೇಂದ್ರ ಒಡೆಯರ್ ಅವರು ಅಮೆರಿಕಾಗೆ ಹೋದಾಗ ಅಲ್ಲಿನ ವಾಕ್-ಶ್ರವಣ ಸಂಸ್ಥೆ ನೋಡಿ ಬಂದು ಮೈಸೂರಿನಲ್ಲೂ ವಾಕ್-ಶ್ರವಣ ಸಂಸ್ಥೆ ಆರಂಭಕ್ಕೆ 22 ಎಕರೆ ಭೂಮಿ ನೀಡಿದ್ದರು ಎಂದು ಸ್ಮರಿಸಿದರು.
ಸಮಾರಂಭದಲ್ಲಿ ಭಾರತೀಯ ವಾಕ್ ಶ್ರವಣ ಸಂಘದ ಅಧ್ಯಕ್ಷೆ ಡಾ. ಆಶಾ ಯತಿರಾಜ್, ನಿಕಟಪೂರ್ವ ಅಧ್ಯಕ್ಷೆ ಡಾ.ಮಾಧುರಿ ಘೋರೆ, ಕಾರ್ಯದರ್ಶಿ ಇಂದ್ರನಿಲ್ ಕುಲಕರ್ಣಿ, ಡಾ.ಕೃಷ್ಣ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.