ಕ್ರಿಯಾಶೀಲರಾಗಿಸಲು ಕ್ರೀಡೆ ಆಯೋಜನೆ


Team Udayavani, Jun 5, 2017, 12:44 PM IST

mys4.jpg

ತಿ.ನರಸೀಪುರ: ದೇಶವನ್ನು ಕಟ್ಟುವ ಕೆಲಸದಲ್ಲಿ ಯುವಕರನ್ನು ಕ್ರೀಯಾಶೀಲರಾಗಿಸಲು ಪಂಡಿತ್‌ ಧೀನದಯಾಳ್‌ ಉಪಾಧ್ಯಯರ ಜನ್ಮ ಶತಾಬ್ಧಿ ಪ್ರಯುಕ್ತ ದೇಶದಾದ್ಯಂತ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ ಎಂದು ಬಿಜೆಪಿ ಹಿಂ.ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಸದಸ್ಯ ಬಿ.ಎಂ.ನಟರಾಜು ಹೇಳಿದರು.

ಪಟ್ಟಣದ ವಿದ್ಯೋದಯ ಕಾಲೇಜು ಕ್ರೀಡಾಂಗಣದಲ್ಲಿ ಬಿಜೆಪಿ ಹಿಂ.ವರ್ಗಗಳ ಮೋರ್ಚಾದಿಂದ ಹಮ್ಮಿಕೊಂಡಿದ್ದ ಕ್ರಿಕೆಟ್‌ ಪಂದ್ಯಾವಳಿಯನ್ನು ಬ್ಯಾಟಿಂಗ್‌ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಯುವಕರಲ್ಲಿ ಸ್ಫೂರ್ತಿ ತುಂಬುವ ಕ್ರೀಡಾಕೂಟಗಳಿಗೆ ಉತ್ತೇಜನ ನೀಡಬೇಕು. ಯುವಶಕ್ತಿಯನ್ನು ಸನ್ಮಾರ್ಗದಲ್ಲಿ ಕೊಂಡೋಯ್ಯಬೇಕು ಎಂಬ ಉದ್ದೇಶದಿಂದ ಕ್ರೀಡಾಕೂಟಗಳನ್ನು ಎಲ್ಲಾ ತಾಲೂಕು ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ ಎಂದರು.

ಭಾರತೀಯ ಜನತಾ ಪಕ್ಷದ ಸಂಘಟನೆಯಲ್ಲಿ ಯುವ ಸಮೂಹಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ಕ್ರೀಡಾಕೂಟಗಳ ಜವಾಬ್ದಾರಿಯನ್ನು ಯುವ ಮೋರ್ಚಾಕ್ಕೆ ವಹಿಸಲಾಗಿದೆ. ಹಲವು ಕಡೆಗಳಲ್ಲಿ ಯುವ ಮೋರ್ಚಾದಿಂದಲೇ ದೇಶಿಯ ಕ್ರೀಡಾಕೂಟಗಳನ್ನು ನಡೆಸಲಾಗುತ್ತಿದೆ. ನರಸೀಪುರದಲ್ಲಿ ವಿಶೇಷವಾಗಿ ಹಿಂ.ವರ್ಗಗಳ ಮೋರ್ಚಾದಿಂದ ಕ್ರಿಕೆಟ್‌ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಬಿ.ಎಂ.ನಟರಾಜು ತಿಳಿಸಿದರು.

ಬಿಜೆಪಿ ಮಾಜಿ ಜಿಲ್ಲಾ ಉಪಾಧ್ಯಕ್ಷ ತೋಟದಪ್ಪ ಬಸವರಾಜು ಮಾತನಾಡಿ, ಜನಸಂಘದ ಮೂಲಕ ದೇಶ ಸೇವೆಗಾಗಿ ತಮ್ಮನ್ನು ತೊಡಗಿಸಿಕೊಂಡು ಪಂಡಿತ್‌ ಧೀನದಯಾಳ್‌ ಉಪಾಧ್ಯಯರು ದೇಶಕ್ಕಾಗಿ ಜೀವ ನೀಡಿದ್ದಾರೆ ಎಂದರು. ಅವರ ಜನ್ಮ ಶತಾಬ್ಧಿ ಸಂದರ್ಭದಲ್ಲಿ ದೇಶಿಯ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷದ ದೇಶದ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಕ್ರೀಡಾಕೂಟಗಳನ್ನು ನಡೆಸುವ ಮೂಲಕ ಯುವಕರನ್ನು ಒಗ್ಗೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ತಾಪಂ ಸದಸ್ಯ ಎಂ.ರಮೇಶ, ಬಿಜೆಪಿ ಹಿಂ.ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ವೆಂಕಟರಮಣಶೆಟ್ಟಿ, ಎಸ್ಟಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಎನ್‌.ರಂಗುನಾಯಕ, ಮುಖಂಡರಾದ ಬಿ.ಮಹೇಶ, ಪ್ರಸನ್ನ, ಸೋಮ, ಚಂದು, ಶಂಕರ್‌, ರಘು, ಅರಸು ಹಾಗೂ ಕ್ರೀಡಾ ಪಟುಗಳು ಹಾಜರಿದ್ದರು.

ಟಾಪ್ ನ್ಯೂಸ್

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ

EC-Comm-sangreshi1

ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ

Cong-CM-Dinner-Meet

Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್‌ ಡಿನ್ನರ್‌ಗೆ ಹೈ ಕಮಾಂಡ್‌ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.