ರೈಲು ನಿಲ್ದಾಣದಲ್ಲಿ ಸೋಂಕು ನಿರೋಧಕ ಔಷಧ ಸಿಂಪಡಿಸಿ
Team Udayavani, Mar 19, 2020, 3:00 AM IST
ಮೈಸೂರು: ಕೊರೊನಾ ವೈರಸ್ ಸೋಂಕು ಹರಡದಂತೆ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಅಪರ್ಣಾ ಗಾರ್ಗ್ ಅವರು ತಮ್ಮ ಸಹೋದ್ಯೋಗಿ ಅಧಿಕಾರಿಗಳೊಂದಿಗೆ ಬುಧವಾರ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸಾಮಾನ್ಯವಾಗಿ ಪ್ರಯಾಣಿಕರು ಮತ್ತು ರೈಲ್ವೆ ಸಿಬ್ಬಂದಿ ಅತಿ ಹೆಚ್ಚು ಬಳಸುವ, ಮುಟ್ಟುವ ಸ್ಥಳಗಳನ್ನು ಆಗಿಂದಾಗ್ಗೆ ಸೋಂಕು ನಿರೋಧಕ ಔಷಧಗಳಿಂದ ಸಿಂಪಡಿಸಬೇಕೆಂದು ಸೂಚಿಸಿದರು. ಅಲ್ಲದೇ ರೈಲು ನಿಲ್ದಾಣದ ಪ್ರವೇಶ ದ್ವಾರ ಮತ್ತು ಹೊರಗೆ ಹೋಗುವ ದ್ವಾರಗಳು,
ಕಾಲು ಮೇಲ್ಸೇತುವೆ ( ಫುಟ್ ಓವರ್ ಬ್ರಿಡ್ಜಸ್), ಎಸ್ಕಲೇಟರ್‌ಗಳು, ಲಿಫ್ಟ್ಗಳು, ಟಿಕೆಟ್ ಬುಕ್ ಮಾಡುವ ಹಾಗೂ ರಿಸವೇರ್ಶನ್ ಕಚೇರಿಗಳಲ್ಲಿನ ಸೂಕ್ತ ಸ್ಥಳಗಳಲ್ಲಿ ರೈಲು ನಿಲ್ದಾಣದಲ್ಲಿರುವ ಕೋವಿದ್-19 ಸಹಾಯ ಕೇಂದ್ರ ಇರುವ ಬಗ್ಗೆ ಮಾರ್ಗದರ್ಶನ ಫಲಕಗಳನ್ನು ಅಳವಡಿಸಬೇಕೆಂದು ಆರೋಗ್ಯ ವಿಭಾಗದ ಅಧಿಕಾರಿಗಳಿಗೆ ಸಲಹೆ ನೀಡಿದರು.
ಜತೆಗೆ ಪ್ರಯಾಣಿಕರನ್ನು ಕರೆದೊಯ್ಯುವ ಎಲ್ಲಾ ಬೋಗಿಗಳ ಹೊರ ಮತ್ತು ಒಳಾವರಣ, ಗಾಜಿನ ಕಿಟಕಿಗಳು, ಬಾಗಿಲುಗಳನ್ನು ಸೋಂಕು ನಿರೋಧಕ ಔಷಧ ಬಳಸಿ ಆಗಿಂದಾಗ್ಗೆ ಸ್ವತ್ಛ‚ಗೊಳಿಸಬೇಕು ಎಂದು ಮೆಕಾನಿಕಲ್ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ರೈಲು ಪ್ರಯಾಣಿಕರಲ್ಲಿ ಕೊರೊನಾ ವೈರಸ್ ಸೋಂಕಿನ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಕುರಿತು ಸ್ಥಳೀಯ ಭಾಷೆಗಳಲ್ಲಿ ಕರಪತ್ರಗಳ ಮೂಲಕ ತಿಳಿಸಿಕೊಡಬೇಕು.
ಸಾರ್ವಜನಿಕ ಧ್ವನಿ ವರ್ಧಕಗಳ ಮೂಲಕ ಪ್ರಯಾಣಿಕರಿಗೆ ಎಚ್ಚರ ನೀಡಬೇಕೆಂದರು. ನಂತರ ಅಶೋಕಪುರಂನಲ್ಲಿರುವ ಮಲ್ಟಿ ಡಿಸಿಪ್ಲನರಿ ತರಬೇತಿ ಕೇಂದ್ರದಲ್ಲಿ ಕೊರೊನಾ ಕ್ವಾರಂಟೈನ್ ಸೌಲಭ್ಯವನ್ನು ಪರಿಶೀಲಿಸಿದರು.
ಪ್ಲ್ರಾಟ್‌ಫಾರಂ ಟಿಕೆಟ್ ದರ 50 ರೂ.ಗೆ ಏರಿಕೆ: ರೈಲು ನಿಲ್ದಾಣಗಳ ಪ್ಲಾಟ್‌ಫಾರಂಗಳಲ್ಲಿ ಹೆಚ್ಚಿನ ಜನಸಂದಣಿಯನ್ನು ತಪ್ಪಿಸುವ ಸಲುವಾಗಿ ಭಾರತೀಯ ರೈಲ್ವೆ ಮಂಡಳಿಯ ನಿರ್ದೇಶನದಂತೆ ಮೈಸೂರು, ಹಾಸನ, ಶಿವಮೊಗ್ಗ ಮತ್ತು ದಾವಣಗೆರೆ ರೈಲು ನಿಲ್ದಾಣಗಳಲ್ಲಿನ ಪ್ಲ್ರಾಟ್ ಫಾರಂ ಟಕೆಟ್ ಬೆಲೆಯನ್ನು 10 ರೂ.ನಿಂದ 50 ರೂ.ಗೆ ಹೆಚ್ಚಿಸಿ ತಕ್ಷಣದಿಂದಲೇ ಜಾರಿಗೆ ತರಲಾಗಿದೆ ಎಂದು ರೈಲ್ವೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.