ಪಾಶ್ಚಿಮಾತ್ಯ ಸಂಸ್ಕೃತಿ ಅನುಸರಿಸಿದರೆ ಬದುಕಿನಲ್ಲಿ ನೆಮ್ಮದಿಯಿಲ್ಲ: ಪ್ರಹ್ಲಾದ್ ಜೋಷಿ

Team Udayavani, May 30, 2022, 3:14 PM IST

Untitled-1

ಮೈಸೂರು: ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಅನುಸರಿಸಿದರೆ ಬದುಕಿನಲ್ಲಿ ನೆಮ್ಮದಿ ಕಳೆದುಕೊಳ್ಳಬೇಕಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದರು.

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 80ನೇ ಜನ್ಮದಿನೋತ್ಸವದ ಪ್ರಯುಕ್ತ ಸೋಮವಾರ ಚೈತನ್ಯಾರ್ಚನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀಗಳಿಗೆ ಶುಭ ಕಾಮನೆ ಸಲ್ಲಿಸಿ ಅವರು ಮಾತನಾಡಿದರು.

ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮದೇಶದಲ್ಲಿ ಇಂದಿನ ಕ್ಷೋಭೆಯ ದಿನಮಾನದಲ್ಲೂ ನಾವೆಲ್ಲ ನೆಮ್ಮದಿ,ಶಾಂತಿಯಿಂದ ಇದ್ದೇವೆ ಇದಕ್ಕೆ ನಮ್ಮಲ್ಲಿರುವ ಧಾರ್ಮಿಕ ಸಂಸ್ಕೃತಿಯೇ ಕಾರಣ ಎಂದು ಹೇಳಿದರು.

ಶ್ರೀ ಗಣಪತಿ ‌ಸಚ್ಚಿದಾನಂದ ಸ್ವಾಮೀಜಿಯವರು ಹನುಮಾನ್ ಚಾಲೀಸ ಹಾಗೂ ದತ್ತನ ಆರಾಧನೆಯಿಂದ ಜನರಿಗೆ ಮಾನಸಿಕ ನೆಮ್ಮದಿ ಸಿಗುವಂತೆ ಮಾಡಿದ್ದಾರೆ, ಲಕ್ಷಾಂತರ ಜನರು ಶ್ರೀಗಳನ್ನು ಅನುಸರಿಸುತ್ತಿದ್ದಾರೆ ಎಂದು ತಿಳಿಸಿದರು.

ಶ್ರೀಗಳು ಸಾವಿರಾರು ಗಿಡಮರಗಳನ್ನು ಬೆಳೆಸಿದ್ದಾರೆ ಇದರ ಜತೆಗೆ‌ ನೂರಾರು ಗಿಳಿಗಳನ್ನು ಸಂರಕ್ಷಿಸುತ್ತಾ ಒಂದು ರೀತಿ ಪರಿಸರ ಸಮತೋಲನ ಕಾಪಾಡುತ್ತಿದ್ದಾರೆ ಎಂದು ಜೋಷಿ ಬಣ್ಣಿಸಿದರು.

ಭಕ್ತಿ ವ್ಯಾಪಾರದ ಸರಕಲ್ಲ ಎಂಬುದನ್ನು ತಿಳಿಸಿಕೊಟ್ಟು ಭಕ್ತಿಯನ್ನು ಜಾಗೃತಿ ಗೊಳಿಸುವ ಕೆಲಸವನ್ನು ಶ್ರೀಗಳು ಮಾಡುತ್ತಿದ್ದಾರೆ.ಅವರು ಆಧ್ಯಾತ್ಮ,ಧಾರ್ಮಿಕ ಜೀವನವನ್ನು ಮುನ್ನಡೆಸಲು ಮಾರ್ಗದರ್ಶನ ಮಾಡುತ್ತಿದ್ದಾರೆ ಇಂತಹ ಶ್ರೀಗಳು ಇರುವುದರಿಂದಾಗಿ ನಾವೆಲ್ಲ ‌ಮಾನಸಿಕ ನೆಮ್ಮದಿ ಪಡೆದಿದ್ದೇವೆ ಎಂದು ತಿಳಿಸಿದರು.

ಸಂಸದ ಪ್ರತಾಪ್ ಸಿಂಹ ಶ್ರೀಗಳಿಗೆ ಶುಭಾಶಯ ಸಲ್ಲಿಸಿ ಕೊರೊನ ಸಂಕಷ್ಟದ ದಿನಗಳಲ್ಲಿ ಸ್ವಾಮೀಜಿಯವರು ಪ್ರತಿದಿನ ಹತ್ತು ಸಾವಿರಕ್ಕೂ ಹೆಚ್ಚು ಮಂದಿಗೆ ಊಟದ‌ ವ್ಯವಸ್ಥೆ ಮಾಡಿಕೊಟ್ಟು‌‌ ನಮಗೆ ಬಹಳವಾಗಿ‌ ನೆರವಾದರು ಎಂದು ಸ್ಮರಿಸಿದರು.

ಕೊರೊನ ಕಾಲದಲ್ಲಿ ಯಾರು ಯಾರನ್ನೂ ಭೇಟಿಯಾಗಲಾರದ ಸಂದರ್ಭದಲ್ಲಿ ಸ್ವತಹಾ ಶ್ರೀಗಳು ತಮ್ಮ ಭೇಟಿಗೆ‌ ಅವಕಾಶ ಕೊಟ್ಟು ಜನರ ಜೀವರಕ್ಷಣೆ ಮಾಡಿದರು ಎಂದು ಬಣ್ಣಿಸಿದರು.

ಯೋಗದಿನದಂದು ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಗೆ ಬರಲು ಒಪ್ಪಿಗೆ ನೀಡುವಲ್ಲಿ ಕೇಂದ್ರ ಸಚಿವ ಪ್ರಹ್ಲಾದ‌ ಜೋಷಿ ಅವರು ಪ್ರಮುಖ ಕಾರಣ ಎಂದು ಪ್ರತಾಪ್ ಸಿಂಹ ನುಡಿದರು.

ಈ ಕಾರ್ಯಕ್ರಮಕ್ಕೂ ಮೊದಲು ಬೆಳಿಗ್ಗೆ  ಶ್ರೀಚಕ್ರಪೂಜೆ , ನಾರಾಯಣ ಹೋಮ ನೆರವೇರಿಸಲಾಯಿತು.

ಮುಖ್ಯಅತಿಥಿ  ಆಗಮಿಸಿದ್ದ  ‌ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದೀಬೇನ್ ಪಟೇಲ್ ಅವರು ಚೈತನ್ಯಾರ್ಚನೆ  ಕಾರ್ಯಕ್ರಮದಲ್ಲಿ ಅವಧೂತ ದತ್ತ ಪೀಠದ ನಾದನಿಧಿ ಪ್ರಶಸ್ತಿಯನ್ನು ಗಣಪತಿ ಶ್ರೀಗಳೊಂದಿಗೆ   ಕರ್ನಾಟಕ ಸಂಗೀತ ವಿದ್ವಾನರುಗಳಾದ  ಬೆಂಗಳೂರಿನ ಡಾ || ಟಿ.ಎಸ್.ಸತ್ಯವತಿ,   ಚೆನ್ನೈನ ವಿ II ರಾಜ್‌ ಕುಮಾರ್‌ ಭಾರತಿ ,ಪಿಟೀಲು ವಿದ್ವಾನರುಗಳಾದ ಮೈಸೂರು ಬ್ರದರ್ಸ್ ಎಂದೇ ಖ್ಯಾತರಾದ ಮೈಸೂರು ಎಂ.ನಾಗರಾಜು  ಮೈಸೂರು ಎಂ.ಮಂಜುನಾಥ್ , ಚಿತ್ರ ವೀಣೆ ಪ್ರವೀಣರಾದ

ಚೆನ್ನೈ ನ ವಿ.ಎನ್.ರವಿಕಿರಣ್‌  ಅವರುಗಳಿಗೆ‌ ನೀಡಿ ಗೌರವಿಸಿದರು.

ಇದೇ ವೇಳೆ ವಿದ್ಯಾನಿಧಿ ಪ್ರಶಸ್ತಿಯನ್ನು ಸಂಸ್ಕೃತ ವಿದ್ವಾನ್ ಕೇಂದ್ರೀಯ ಸಂಸ್ಕೃತ ವಿವಿ ಉಪಕುಲಪತಿ ಶ್ರೀನಿವಾಸ ವರಖೇಡಿ ಅವರಿಗೆ ನೀಡಿ ಗೌರವಿಸಲಾಯಿತು.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.