ಶ್ರೀ ಪ್ರಸನ್ನಾನಂದ ಸ್ವಾಮಿ 201 ನೇ ದಿನದ ಹೋರಾಟ ; ಶಾಸಕ ಎಚ್.ಪಿ.ಮಂಜುನಾಥ್ ಭಾಗಿ
Team Udayavani, Aug 29, 2022, 10:10 PM IST
ಹುಣಸೂರು: ವಾಲ್ಮೀಕಿ ಸಮಾಜದ ಶ್ರೀ ಪ್ರಸನ್ನಾನಂದ ಸ್ವಾಮಿಯವರು ಬೆಂಗಳೂರಿನಲ್ಲಿ ನಡೆಸುತ್ತಿರುವ ಎಸ್ ಟಿ ಮೀಸಲಾತಿಗಾಗಿ 201 ನೇ ದಿನದ ಅಹೋ ರಾತ್ರಿ ಪ್ರತಿಭಟನೆಗೆ ಶಾಸಕ ಎಚ್ ಪಿ ಮಂಜುನಾಥ್ ತಾಲೂಕಿನ ನಾಯಕ ಸಮಾಜದ ಮುಖಂಡರೊಂದಿಗೆ ಭೇಟಿ ನೀಡಿ ಪ್ರತಿಭಟನೆಗೆ ಸಾಥ್ ನೀಡಿದರು.
ಶ್ರೀ ಪ್ರಸನ್ನಾನಂದಪುರಿ ಸ್ವಾಮಿಗಳು ಸಮಾಜದ ಬಂಧುಗಳ ಒಳಿತಿಗಾಗಿ ಮೀಸಲಾತಿ ಹೋರಾಟ ನಡೆಸುತ್ತಿದ್ದು ಇಂದಿಗೆ 201ದಿನಗಳು ಕಳೆದರೂ ಸರ್ಕಾರ ಗಮನ ಹರಿಸದೇ ಇರುವುದು ಖಂಡನೀಯ. ಶ್ರೀಗಳು ಗಾಳಿ ಮಳೆ ಚಳಿ ಎನ್ನದೆ ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದು ಸರ್ಕಾರ ಸಮಾಜದ ಬೇಡಿಕೆಯನ್ನು 201 ದಿನ ಕಳೆದರೂ ಇನ್ನು ಈಡೇರಿಕೆ ಭರವಸೆ ನೀಡಿರುವುದಿಲ್ಲ.
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರು ರಚಿಸಿರುವ ಸಂವಿಧಾನದಲ್ಲಿ ಎಸ್ಸಿ/ ಎಸ್ ಟಿ ವರ್ಗಗಳಿಗೆ ಜೀವನ ಮತ್ತು ಶೈಕ್ಷಣಿಕ, ಔದ್ಯೋಗಿಕ ಹಾಗೂ ರಾಜಕೀಯವಾಗಿ ಮತ್ತು ಆರ್ಥಿಕವಾಗಿ ಸಬಲರಾಗಬೇಕೆಂದು ಸಂವಿಧಾನದ ಆಶಯವಾಗಿರುತ್ತದೆ ಅದರಂತೆ ಕೇಂದ್ರ ಸರ್ಕಾರವು ಜನಗಣತಿಗೆ ಅನುಗುಣವಾಗಿ ಮೀಸಲಾತಿಯನ್ನು ನೀಡಿದೆ. ಆದರೆ ರಾಜ್ಯ ಸರ್ಕಾರ ಸಂವಿಧಾನಕ್ಕೆ ಗೌರವ ನೀಡುತ್ತಿಲ್ಲ. ಸರ್ಕಾರ ಇತರೇ ಯಾವುದೇ ಮಠಗಳಿಗೆ ಹೆಚ್ಚಿನ ಅನುದಾನ ನೀಡಿರುವುದಿಲ್ಲ . ಇದಲ್ಲದೆ ಸರ್ಕಾರ ಎಲ್ಲಾ ರೀತಿಯ ಮೀಸಲಾತಿಯನ್ನು ಕಡಿತಗೊಳಿಸುವ ಆಲೋಚನೆಯಲ್ಲಿದೆ ಹಾಗೂ ನಿಗಮ ಮಂಡಳಿಗಳನ್ನು ತೆಗೆದುಹಾಕುವ ತೀರ್ಮಾನದಲ್ಲಿದೆ. ಆದ್ದರಿಂದ ಮೀಸಲಾತಿಯನ್ನು ಪಡೆದುಕೊಳ್ಳಲು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶವನ್ನು ನೀಡಲು ಶ್ರೀಗಳ ಜೊತೆ ತಾಲೋಕಿನ ಸಮಾಜದ ಬಂದುಗಳು ಸಹಕರಿಸಬೇಕೆಂದು ಮನವಿ ಮಾಡಿದರು.
ಇದೇ ವೇಳೆ ಹುಣಸೂರು ನಗರದಲ್ಲಿ ಎರಡು ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಆ.28 ರ ಭಾನುವಾರದಂದು ಶಂಕುಸ್ಥಾಪನೆ ನೆರವೇರಿದ ಹಿನ್ನಲೆಯಲ್ಲಿ ಕಾರ್ಯಕ್ರಮ ಜ್ಞಾಪಕಾರ್ಥವಾಗಿ ಶಾಸಕ ಎಚ್ ಪಿ ಮಂಜುನಾಥ್ ರವರು ಶ್ರೀಗಳಿಗೆ ಬೆಳ್ಳಿ ತಟ್ಟೆ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ಈ ವೇಳೆ ಹುಣಸೂರು ತಾಲೂಕಿನಿಂದ ನೂರಕ್ಕೂ ಹೆಚ್ಚು ನಾಯಕ ಸಮಾಜದ ಮುಖಂಡರುಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.