ಎಸ್ಸೆಸ್ಸೆಲ್ಸಿ ಫ‌ಲಿತಾಂಶ: 21ನೇ ಸ್ಥಾನಕ್ಕೆ ಕುಸಿದ ಮೈಸೂರು


Team Udayavani, May 13, 2017, 12:20 PM IST

mys5.jpg

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ತನ್ವೀರ್‌ ಸೇಠ್ ಅವರ ತವರು ಮೈಸೂರು ಜಿಲ್ಲೆಯ ಶೈಕ್ಷಣಿಕ ವ್ಯವಸ್ಥೆ ಅಧೋಗತಿಗಳಿದಿರುವುದನ್ನು ಈ ಬಾರಿಯ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರತಿಬಿಂಬಿಸಿದೆ.

ರ್‍ಯಾಂಕಿಂಗ್‌ ವ್ಯವಸ್ಥೆ ಜಾರಿಯಲ್ಲಿದ್ದಾಗ ಪ್ರತಿವರ್ಷ ಮೊದಲ ಹತ್ತು ರ್‍ಯಾಂಕ್‌ಗಳು ಮೈಸೂರಿಗೆ ಮೀಸಲು ಎಂಬಂತಿದ್ದ ಜಿಲ್ಲೆಯಲ್ಲಿ 2015-16ನೇ ಸಾಲಿನಲ್ಲಿ 8 ನೇ ಸ್ಥಾನಗಳಿಸಿದ್ದರೆ, ಈ ವರ್ಷ 21ನೇ ಸ್ಥಾನಕ್ಕೆ ಕುಸಿದು ತಲೆತಗ್ಗಿಸುವಂತೆ ಮಾಡಿದೆ. ಸ್ವತ್ಛ ಭಾರತ್‌ ಸರ್ವೇಕ್ಷಣೆಯಲ್ಲಿ ಸತತ ಎರಡು ಬಾರಿ ಪ್ರಥಮ ಸ್ಥಾನ ಬಂತು ಎಂದು ಬೀಗುವ ಮೈಸೂರಿನ ಆಡಳಿತ ಶೈಕ್ಷಣಿಕ ವ್ಯವಸ್ಥೆಗೆ ಮಹತ್ವ ನೀಡದಿರುವುದನ್ನು ಈ ಫ‌ಲಿತಾಂಶ ತೋರಿಸುತ್ತದೆ.

2015-16ನೇ ಸಾಲಿನಲ್ಲಿ ರಾಜ್ಯಕ್ಕೆ ಮೈಸೂರು 8ನೇ ಸ್ಥಾನಗಳಿಸಿದ ಹಿನ್ನೆಲೆ ಶಿಕ್ಷಣ ಇಲಾಖೆ ಹಾಗೂ ಮೈಸೂರು ಜಿಪಂ ಜಂಟಿಯಾಗಿ ಮುಂದಿನ ವರ್ಷ ಫ‌ಲಿತಾಂಶ ಉತ್ತಮಪಡಿಸಲು ಮೈಸೂರು ಗುರಿ ನೂರು ಎಂಬ ವಿಶೇಷ ಕಾರ್ಯಕ್ರಮವನ್ನು ಹಾಕಿಕೊಂಡು, ಮೊದಲ ಐದರೊಳಗೆ ಸ್ಥಾನಗಿಟ್ಟಿಸಲು ಪ್ರಯತ್ನ ನಡೆಸಿತ್ತು. ಆದರೆ, ಆಗಿದ್ದೇ ಬೇರೆ.

ಮೈಸೂರು ಗುರಿ ನೂರು ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಾಲಾ ಮುಖ್ಯಸ್ಥರೊಂದಿಗೆ ಚರ್ಚಿಸಿ, ಕ್ಲಸ್ಟರ್‌ ಕೇಂದ್ರಗಳ ಜತೆಗೆ ವೀಡಿಯೋ ಸಂವಾದ, ಶಿಕ್ಷಕರಿಗೆ ವಿಶೇಷ ತರಬೇತಿ ಸೇರಿದಂತೆ ದಸರಾ ರಜೆ ನಂತರ ಹೆಚ್ಚು ಪರಿಣಾಮಕಾರಿಯಾಗಿ ಫ‌ಲಿತಾಂಶ ಹೆಚ್ಚಳಕ್ಕೆ ಆಸ್ಥೆವಹಿಸಲಾಗಿತ್ತು. ಆ ಎಲ್ಲ ಪ್ರಯತ್ನದ ಫ‌ಲವಾಗಿ ಮೈಸೂರು ಜಿಲ್ಲೆ 8ನೇ ಸ್ಥಾನ ಸಂಪಾದಿಸಿತ್ತು.

ಗೆಲುವು ತರಲಿಲ್ಲ: ಮೈಸೂರು ಗುರಿ ನೂರು ಕಾರ್ಯಕ್ರಮಕ್ಕಿಂತ ವಿಭಿನ್ನವಾಗಿ 2016-17ನೇ ಸಾಲಿನಲ್ಲಿ ಕಾರ್ಯಕ್ರಮ ರೂಪಿಸಿದ ಶಿಕ್ಷಣ ಇಲಾಖೆ ನೂರರತ್ತ ಮೈಸೂರು ಚಿತ್ತ ಎಂಬ ಕಾರ್ಯಕ್ರಮ ಹಾಕಿಕೊಂಡಿತು. ಈ ಕಾರ್ಯಕ್ರಮದಡಿ ಗೆಲುವು ಶೀರ್ಷಿಕೆಯಡಿ ಪರೀಕ್ಷೆ ಎದುರಿಸುವ ಬಗ್ಗೆ ಕುರಿತ ಪುಸ್ತಕ ಹೊರತಂದು ಇದನ್ನು ಬೋಧಿಸಲು ಆಯ್ದ 51 ಶಿಕ್ಷಕರಿಗೆ ಬೋಧನಾ ವಿಧಾನದ ಬಗ್ಗೆ ಕಾರ್ಯಾಗಾರ ಏರ್ಪಡಿಸಿ, ಇವರನ್ನು ಸಂಪನ್ಮೂಲ ವ್ಯಕ್ತಿಗಳಾಗಿ ಬೇರೆ ಬೇರೆ ಶಾಲೆಗಳಿಗೆ ನಿಯೋಜನೆ ಮಾಡಲಾಗಿತ್ತು. ಆದರೆ ಶಿಕ್ಷಣ ಇಲಾಖೆಯ ಈ ಪ್ರಯತ್ನ ಗೆಲುವು ತರುವ ಬದಲಿಗೆ ತಲೆತಗ್ಗಿಸುವಂತೆ ಮಾಡಿದೆ.

ಖಾಲಿ ಹುದ್ದೆ ಸಮಸ್ಯೆ: ಮಕ್ಕಳಿಗೆ ಪರಿಣಾಮಕಾರಿಯಾಗಿ ಬೋಧನೆಗೆ ಶಾಲಾ ಶಿಕ್ಷಕರ ಕೊರತೆಯೂ ಕಾರಣ ಎನ್ನಲಾಗುತ್ತಿದೆ. ಜಿಲ್ಲೆಯ 232 ಸರ್ಕಾರಿ ಪ್ರೌಢಶಾಲೆಗಳಲ್ಲಿ 336 ಶಿಕ್ಷಕರ ಹುದ್ದೆ ಖಾಲಿ ಇದೆ. ಇವುಗಳನ್ನು ತುಂಬುವ ಗೋಜಿಗೇ ಹೋಗಿಲ್ಲ ಸರ್ಕಾರ. ಇನ್ನು ಪಾಠ-ಪ್ರವಚನಕ್ಕೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಅತಿಥಿ ಶಿಕ್ಷಕರುಗಳನ್ನು ನೇಮಕಮಾಡಿಕೊಳ್ಳಲು ಅನುಮತಿ ನೀಡಿತಾದರೂ ಅಷ್ಟರಲ್ಲಿ ಪರಿಸ್ಥಿತಿ ಕೈಮೀರಿ ಹೋಗಿತ್ತು.

336 ಶಿಕ್ಷಕರ ಹುದ್ದೆ ಖಾಲಿ ಇದ್ದರೆ, ಸರ್ಕಾರ ಕೇವಲ 98 ಅತಿಥಿ ಶಿಕ್ಷಕರ ನೇಮಕಕ್ಕೆ ಅನುಮತಿ ನೀಡಿತು. ಅದೂ ಕೂಡ ನವೆಂಬರ್‌ ತಿಂಗಳಲ್ಲಿ. ಒಟ್ಟು ಖಾಲಿಯಿದ್ದ ಶಿಕ್ಷಕರಲ್ಲಿ ಮೂರನೇ ಒಂದರಷ್ಟು ಹುದ್ದೆಯನ್ನು ಅತಿಥಿ ಶಿಕ್ಷಕರ ಮೂಲಕ ಭರ್ತಿ ಮಾಡಿಕೊಂಡರೂ ಆ ಶಿಕ್ಷಕರು ಒಂದು ಶಾಲೆಯಲ್ಲಿ ಕೂಡ ನಿಯಮಿತವಾಗಿ ಬೋಧನೆ ಮಾಡಲು ಸಾಧ್ಯವಾಗಲಿಲ್ಲ. ಬದಲಿಗೆ ಅವರನ್ನು ಈ ಶಾಲೆಗೆ ಮೂರು ದಿನ, ಮತ್ತೂಂದು ಶಾಲೆಗೆ ಮೂರು ದಿನಗಳಂತೆ ಕಳುಹಿಸಿಕೊಡಲಾಯಿತು.

ಇದರಿಂದಾಗಿ ಮಕ್ಕಳಿಗೆ ಪರಿಣಾಮಕಾರಿ ಬೋಧನೆ ಸಾಧ್ಯವಾಗಲೇ ಇಲ್ಲ. ಇದರ ಪರಿಣಾಮ ಫ‌ಲಿತಾಂಶದ ಮೇಲಾಗಿದೆ ಎನ್ನುತ್ತಾರೆ ಶಿಕ್ಷಣ ಇಲಾಖೆ ಅಧಿಕಾರಿಗಳು. ದಶಕಗಳ ಹಿಂದೆ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟದ ಸಂದರ್ಭ ಬಂದರೆ ಇಡೀ ರಾಜ್ಯ ಮೈಸೂರಿನತ್ತ ನೋಡುತ್ತಿದ್ದ ದಿನಗಳು ಮತ್ತೆ ಬರಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಇನ್ನಾದರೂ ಶಿಕ್ಷಣ ಕ್ಷೇತ್ರಕ್ಕೆ ಮಹತ್ವವನ್ನು ನೀಡಬೇಕಿದೆ ಎನ್ನುತ್ತಾರೆ ಶಿಕ್ಷಣ ಪ್ರೇಮಿಗಳು.

ಮೈಸೂರು ಜಿಲ್ಲೆ ಎಸ್ಸೆಸ್ಸೆಲ್ಸಿ ಫ‌ಲಿತಾಂಶದಲ್ಲಿ 21ನೇ ಸ್ಥಾನಕ್ಕೆ ಕುಸಿದಿರುವುದು ತುಂಬಾ ನೋವು ತಂದಿದೆ. ಈ ರೀತಿಯ ಫ‌ಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ಫ‌ಲಿತಾಂಶ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಎಲ್ಲ ರೀತಿಯ ಕಾರ್ಯಕ್ರಮಗಳನ್ನೂ ಮಾಡಲಾಗಿತ್ತು. ಎಲ್ಲಿ ಎಡವಿದ್ದೇವೆ ಎಂಬುದನ್ನು ಇನ್ನಷ್ಟೆ ತಿಳಿದುಕೊಂಡು ಸರಿಪಡಿಸಿಕೊಳ್ಳಬೇಕಿದೆ.
-ಎಚ್‌.ಆರ್‌.ಬಸಪ್ಪ, ಡಿಡಿಪಿಐ

ಟಾಪ್ ನ್ಯೂಸ್

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.