ಸಂತ ಫಿಲೋಮಿನಾ ಕಾಲೇಜಿನ ಕೋರ್ಸ್‌ಗಳ ಮಾನ್ಯತೆ ರದ್ದು


Team Udayavani, Mar 31, 2017, 12:30 PM IST

mys6.jpg

ಮೈಸೂರು: ವಿಶ್ವವಿದ್ಯಾನಿಲಯದ ನಿಯಮ ಪದೇ ಪದೆ ಉಲ್ಲಂಘನೆ ಮಾಡುವ ಸಂತ ಫಿಲೋಮಿನಾ ಕಾಲೇಜಿಗೆ ನೀಡಲಾಗಿರುವ ಕೋರ್ಸ್‌ಗಳ ಮಾನ್ಯತೆ ರದ್ದುಪಡಿಸುವ ಬಗ್ಗೆ ಮೈಸೂರು ವಿವಿ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಯಿತು. 

ನಗರದ ಮೈಸೂರು ವಿವಿ ಕ್ರಾಪರ್ಡ್‌ ಭವನದಲ್ಲಿ ಪ್ರಭಾರ ಕುಲಪತಿ ಪ್ರೊ. ದಯಾನಂದ ಮಾನೆ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಯಿತು. ಪ್ರಥಮ ವರ್ಷದ ಎಂಎ ಇಂಗ್ಲಿಷ್‌ ಕೋರ್ಸ್‌ಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ವಿವಿ ನಿಗದಿಪಡಿಸಿರುವ ಅರ್ಹತಾ ಮಾನದಂಡವನ್ನು ಅನುಸರಿಸುತ್ತಿಲ್ಲ.

ಹೀಗೆ ವಿವಿ ನಿಯಮ ಉಲ್ಲಂ ಸಿ ಈವರೆಗೆ 13 ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದ್ದು, ಈ ಬಗ್ಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಕಾಲೇಜು ಆಡಳಿತ ಮಂಡಳಿ ಇದನ್ನು ಸರಿಪಡಿಸಿಕೊಳ್ಳದೆ ಮೇಲಿಂದ ಮೇಲೆ ನಿಯಮ ಉಲ್ಲಂ ಸುತ್ತಿದೆ. ಈ ಹಿನ್ನೆಲೆ ಅಂತಿಮವಾಗಿ ಕಾಲೇಜಿಗೆ ಎಚ್ಚರಿಕೆ ನೀಡಿ ಬಾರೀ ದಂಡ ವಿಧಿಸುವ ಜತೆಗೆ ಮುಂದಿನ ವರ್ಷದಿಂದ ಕೋರ್ಸ್‌ ಮಾನ್ಯತೆ ರದ್ದುಪಡಿಸುವ ಬಗ್ಗೆ ನಿರ್ಧಾರ ಕೈಗೊಳ್ಳಬೇಕೆಂದು ಸಭೆಯಲ್ಲಿ ಪ್ರಸ್ತಾಪಿಸಿದರು.

ಅಧಿನಿಯಮಕ್ಕೆ ಆಕ್ಷೇಪ: ವಿವಿ ಕುಲಸಚಿವ ಪ್ರೊ.ಆರ್‌.ರಾಜಣ್ಣ ಮಾತನಾಡಿ, ಮೈಸೂರು ವಿವಿ (ಬಹದ್ದೂರ್‌ ನಿರ್ವಹಣಾ ವಿಜಾnನ ಸಂಸ್ಥೆ) ಶಾಸನ-2016 ಕರಡು ಅಧಿನಿಯಮದ ಪರಿಶೀಲನೆ ಮತ್ತು ಅನುಮೋದನೆಗಾಗಿ ಮಂಡಿಸಿದರು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೆಲವು ಸದಸ್ಯರು, ಬಿ.ಎನ್‌.ಬಹದ್ದೂರ್‌ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ ಸೈನ್ಸ್‌ ಅಧ್ಯಯನ ವಿಭಾಗಕ್ಕೆ ಶೈಕ್ಷಣಿಕ ಸ್ವಾಯತ್ತತೆ ನೀಡಿ ಕಟ್ಟಡ ನಿರ್ಮಿಸಿಕೊಡುವ ಬೇರೆ ಸಂಸ್ಥೆಯ ಸುಪರ್ದಿಗೆ ವಹಿಸುವ ಅಧಿನಿಯ ಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ಶಿಕ್ಷಣ ಮಂಡಳಿ ಸದಸ್ಯೆ ಆಯಿಷಾ ಖಾನಂ ಮಾತನಾಡಿ, ಬಹದ್ದೂರ್‌ ಸಂಸ್ಥೆಗೆ ಸ್ವಾಯತ್ತತೆ ನೀಡಿದರೆ ಬೇರೆಯವರು ಬಂದು ಸಂಸ್ಥೆ ಆಕ್ರಮಿಸಿಕೊಳ್ಳುತ್ತಾರೆ. ಖಾಸಗಿ ಸಂಸ್ಥೆಯೊಂದು 3 ಕೋಟಿ ಖರ್ಚು ಮಾಡಿ ಕಟ್ಟಡ ನಿರ್ಮಿಸಿಕೊಡುತ್ತದೆ ಎಂಬ ಕಾರಣಕ್ಕೆ ಇಡೀ ಸಂಸ್ಥೆ ಬಿಟ್ಟುಕೊಡುವುದರಿಂದ ನಮ್ಮ ಸಿಬ್ಬಂದಿ ಹೊರ ಬರಬೇಕಾಗುತ್ತದೆ. ಈ ಕ್ರಮದಿಂದ ಇತರೆ ಅಧ್ಯಯನ ವಿಭಾಗಗಳ ಕಥೆಯೂ ಇದೇ ರೀತಿ ಆಗುತ್ತದೆ. ಕೂಡಲೇ ಈ ಕರಡನ್ನು ವಾಪಸ್ಸು ಪಡೆಯಬೇಕು’ ಎಂದು ಆಗ್ರಹಿಸಿದರು.

ಸಭೆಯ ಅಭಿಪ್ರಾಯ ಆಲಿಸಿದ ಕುಲಪತಿ ಪ್ರೊ.ದಯಾನಂದ ಮಾನೆ, “ಒಟ್ಟು ಸದಸ್ಯರ ಅಭಿಪ್ರಾಯದಂತೆ ಈ ಕರಡು ಅಧಿನಿಯಮಕ್ಕೆ ಶಿಕ್ಷಣ ಮಂಡಳಿಯಲ್ಲಿ ಅನುಮೋದನೆ ನೀಡದೆ ಪುನಃ ಸಿಂಡಿಕೇಟ್‌ಗೆ ವರ್ಗಾಯಿಸಲಾಗಿದೆ. ಅಲ್ಲಿ ಕೂಲಂಕಷವಾಗಿ ಚರ್ಚಿಸಿ ಕರಡು ಅಧಿನಿಯಮ ರದ್ದುಪಡಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದರು. ವಿಧಾನಪರಿಷತ್‌ ಸದಸ್ಯ ರಾಮಚಂದ್ರಗೌಡ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.