ರಾಜ್ಯದ ಮಾವುತರು ದೇಶಕ್ಕೆ ಮಾದರಿ


Team Udayavani, Nov 21, 2018, 12:13 PM IST

m4-rajyada.jpg

ಮೈಸೂರು: ಆನೆ ಪಳಗಿಸುವ ಪರಿಣಿತಿಯಲ್ಲಿ ಕರ್ನಾಟಕದ ಮಾವುತರು, ಕಾವಾಡಿಗಳು ಇತರ ರಾಜ್ಯಗಳಿಗೆ ಮಾದರಿಯಾಗಿದ್ದು, ನಮ್ಮಲ್ಲಿರುವ ಮಾವುತರ ಜ್ಞಾನವನ್ನು ಇತರರಿಗೂ ತಿಳಿಸಿಕೊಡುವ ಕೆಲಸವಾಗಬೇಕಿದೆ ಎಂದು ಬೆಂಗಳೂರು ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಮನೋಜ್‌ ಕುಮಾರ್‌ ತಿಳಿಸಿದರು.

ನವದೆಹಲಿಯ ಕೇಂದ್ರ ಮೃಗಾಲಯ ಪ್ರಾಧಿಕಾರದ ಸಹಯೋಗದಲ್ಲಿ ನಗರದ ಜಯಚಾಮರಾಜೇಂದ್ರ ಮೃಗಾಲಯದಲ್ಲಿ ದೇಶದ ವಿವಿಧ 10 ಮೃಗಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಾವುತರಿಗೆ ಆಯೋಜಿಸಿದ್ದ “ಸಾಮರ್ಥ್ಯ ಅಭಿವೃದ್ಧಿ ತರಬೇತಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅವಿನಾಭಾವ ಸಂಬಂಧ: ಆನೆ ಮತ್ತು ಕಾವಾಡಿಗಳ ನಡುವೆ ಅವಿನಾಭಾವ ಸಂಬಂಧವಿದ್ದು, ಆನೆಗಳನ್ನು ಪಳಗಿಸುವಲ್ಲಿ ರಾಜ್ಯದ ಮಾವುತರು, ಕಾವಾಡಿಗಳು ಇತರರಿಗೆ ಮಾದರಿಯಾಗಿದ್ದಾರೆ. ಆನೆಗಳ ನಿಯಂತ್ರಿಸುವ ಪ್ರವೃತ್ತಿಯನ್ನು ನಮ್ಮ ಮಾವುತರು, ಕಾವಾಡಿಗಳು ಅನೇಕ ತಲೆಮಾರುಗಳಿಂದ ಬೆಳೆಸಿಕೊಂಡು ಬಂದಿರುವುದು ಶ್ಲಾಘನೀಯ. ಹೀಗಾಗಿ ಆನೆಗಳ ಪಾಲನೆ ಹಾಗೂ ಅವುಗಳನ್ನು ಸಾಕಾನೆಗಳನ್ನಾಗಿ ಪಳಗಿಸುವ ಕಲೆಯನ್ನು ಬೇರೆ ರಾಜ್ಯದ ಮಾವುತರಿಗೂ ತಿಳಿಸಿಕೊಡುವ ಅಗತ್ಯವಿದೆ ಎಂದರು. 

ಹುಲಿ, ಆನೆ ಸಂತತಿ ವೃದ್ಧಿ: ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ ಮಾತನಾಡಿ, ರಾಜ್ಯದ ವಿವಿಧ ಆನೆ ಸಾಕು ಕೇಂದ್ರಗಳಲ್ಲಿ 95 ಸಾಕಾನೆಗಳಿದ್ದು, ರಾಜ್ಯದಲ್ಲಿ 9 ಮೃಗಾಲಯದಲ್ಲಿ 42 ಆನೆಗಳಿವೆ. ರಾಜ್ಯ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸಾರ್ವಜನಿಕರ ಸಹಕಾರದಲ್ಲಿ ರಾಜ್ಯದಲ್ಲಿ ಹುಲಿ ಮತ್ತು ಆನೆಗಳ ಸಂತತಿ ಹೆಚ್ಚುತ್ತಿದೆ. ಆನೆ ಮತ್ತು ಮಾವುತ, ಕಾವಾಡಿಗಳ ನಡುವೆ ಉತ್ತಮ ಭಾವನಾತ್ಮಕ ಸಂಬಂಧವಿದ್ದು, ಇದರಿಂದಾಗಿ ಮಾವುತನ ಸೂಚನೆಗಳನ್ನು ಬಲಿಷ್ಠವಾದ ಆನೆ ಸಹ ಪಾಲಿಸುತ್ತದೆ. ಇದು ಆನೆ ಮತ್ತು ಮಾವತರ ನಡುವಿನ ಅನುಬಂಧಕ್ಕೆ ಕಾರಣವಾಗಿದೆ ಎಂದು ಹೇಳಿದರು. 

ತರಬೇತಿ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾವುತರು ಹಾಗೂ ಕಾವಾಡಿಗಳ ಮೊದಲ ತಂಡಕ್ಕೆ ಐದು ದಿನಗಳ ಕಾರ್ಯಾಗಾರ ನಡೆಯಲಿದ್ದು, ಇದಕ್ಕಾಗಿ 10 ಮೃಗಾಲಯದ 59 ಮಾವುತರು ಹಾಗೂ ಕಾವಾಡಿಗಳು ಭಾಗವಹಿಸಿದ್ದಾರೆ. ಮುಂದಿನ ವರ್ಷದ ಫೆಬ್ರವರಿ 4 ರಿಂದ 8ರವರೆಗೆ ಎರಡನೇ ತಂಡದ ಮಾವುತರು ಹಾಗೂ ಕಾವಾಡಿಗಳಿಗೆ ಕಾರ್ಯಾಗಾರ ನಡೆಯಲಿದೆ. 

ಇದಕ್ಕೂ ಮುನ್ನ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜಗತ್‌ರಾಮ್‌ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಮೃಗಾಲಯ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್‌ ಕುಲಕರ್ಣಿ, ಮೈಸೂರು ವನ್ಯಜೀವಿ ವಿಭಾಗದ ಡಿಸಿಎಫ್ ಸಿ.ಸಿದ್ದರಾಮಪ್ಪ, ಚೆನ್ನೈನ ಪ್ರಾಣಿ ಸಂಗೋಪನಾ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಡಾ.ಎನ್‌.ಎಸ್‌.ಮನೋಹರನ್‌, ಮೃಗಾಲಯ ಸಹಾಯಕ ನಿರ್ದೇಶಕ ಡಾ.ಕೆ.ಆರ್‌.ರಮೇಶ್‌ ಇನ್ನಿತರರು ಕಾರ್ಯಾಗಾರದಲ್ಲಿ ಹಾಜರಿದ್ದರು.

ವನ್ಯಜೀವಿ ರಕ್ಷಣೆಗೆ ಆಸ್ಪತ್ರೆ ನಿರ್ಮಾಣ: ಕಾಡಿನಿಂದ ನಾಡಿಗೆ ಬರುವ ವನ್ಯಜೀವಿಗಳನ್ನು ರಕ್ಷಿಸಲು ಹೆಚ್ಚಿನ ಮಾನವ ಸಂಪನ್ಮೂಲ ಅಗತ್ಯವಿದೆ. ಈ ನಿಟ್ಟಿನಲ್ಲಿ ಹಂಪಿ ಮತ್ತು ಗದಗದಲ್ಲಿ ಆಸ್ಪತ್ರೆಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಆಸ್ಪತ್ರೆ ಹಾಗೂ ವನ್ಯಜೀವಿ ನುರಿತ ಸಿಬ್ಬಂದಿಯಿಂದ ಆಯಾ ಪ್ರದೇಶದಲ್ಲೇ ನಾಡಿಗೆ ಬರುವ ಪ್ರಾಣಿಗಳನ್ನು ರಕ್ಷಿಸಲು ಇದು ಸಹಕಾರಿಯಾಗಿದೆ. ನುರಿತ ಸಿಬ್ಬಂದಿಗಳನ್ನು ಹೆಚ್ಚಿಸಿದರೆ, ಪ್ರಾಣಿಗಳ ನಿರ್ವಹಣೆ ಜತೆಗೆ ವನ್ಯಜೀವಿಗಳಿಗೆ ಆಗುವ ತೊಂದರೆಯನ್ನು ತಡೆಯಬಹುದು ಎಂದು ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ ತಿಳಿಸಿದರು. 

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.