ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ
Team Udayavani, Jun 1, 2018, 2:14 PM IST
ತಿ.ನರಸೀಪುರ: ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಎ.ನಾಗಿರೆಡ್ಡಿ ಹೇಳಿದರು.
ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ನಡೆದ ತಂಬಾಕು ವಿರೋಧಿ ದಿನದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಣ್ಣ ವಯಸ್ಸಿನಲ್ಲೇ ತಂಬಾಕು ಚಟಕ್ಕೆ ಬೀಳುತ್ತಿದ್ದು, ಅಂಗಡಿ ಮಾಲಿಕರು 18 ವರ್ಷದೊಳಗಿನವರು ತಂಬಾಕು ಪದಾರ್ಥಗಳನ್ನು ಕೇಳಿದರೆ ನೀಡಬಾರದು. ಶಾಲಾ ಕಾಲೇಜುಗಳ ಮುಂಭಾಗದಲ್ಲಿ ಹಾಗೂ ಆಸುಪಾಸಿನಲ್ಲಿ ತಂಬಾಕು ನಿಷೇಧದ ಸೂಚನೆ ಅಳವಡಿಸಬೇಕು. ಇತ್ತೀಚಿನ ದಿನಗಳಲ್ಲಿ ಯುವಕ ಯುವತಿಯರೇ ಹೆಚ್ಚಿನ ರೀತಿಯಲ್ಲಿ ತಂಬಾಕು ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ವ್ಯಸನಮುಕ್ತ ಜೀವನ ನಡೆಸುವತ್ತ ಹೆಚ್ಚಿನ ಗಮನಹರಿಸಬೇಕು ಎಂದರು.
ಸಹಾಯಕ ಸರ್ಕಾರಿ ಅಭಿಯೋಜಕಿ ಸುಮಿಯಾ ಭಾನು ಮಾತನಾಡಿ, ಕಾಲೇಜು ವಿದ್ಯಾರ್ಥಿಗಳಿಗೆ ದುಶ್ಚಟಗಳ ಬಗ್ಗೆ ಮಾಹಿತಿ ನೀಡಿದರೆ ಅದು ಎಲ್ಲ ಕಡೆ ಜಾಗೃತಿ ಮೂಡಿಸಲು ಅನುಕೂಲವಾಗುತ್ತದೆ ಎಂಬ ಉದ್ದೇಶದಡಿ ಶಾಲಾ ಕಾಲೇಜುಗಳಲ್ಲಿ ಇಂತಹ ಕಾನೂನು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ತಂಬಾಕು ಬಳಕೆಯಿಂದ ಆರೋಗ್ಯದ ಮೇಲೆ ಅನೇಕ ಕೆಟ್ಟ ಪರಿಣಾಮಗಳನ್ನು ಬೀರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ತಲಕಾಡು ಆರೋಗ್ಯ ಕೇಂದ್ರದ ಡಾ. ಕಮಲಮ್ಮ, ವಕೀಲ ಶಂಭುಲಿಂಗಸ್ವಾಮಿ, ಬಿಇಒ ಗಂಗಾಧರ್, ವಕೀಲರ ಸಂಘದ ಅಧ್ಯಕ್ಷ ಜಿ. ರವಿಶಂಕರ್, ತಾಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್, ಪ್ರಾಂಶುಪಾಲ ಮೋಹನ್ ಕುಮಾರ್, ಡಾ. ಮಂಗಳಮೂರ್ತಿ, ಸೋಮಣ್ಣ, ವಕೀಲರಾದ ನಂಜಪ್ಪ, ಶಾಂತನಾಗರಾಜು, ಸಿದ್ದರಾಜು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.